ಜ್ಯೋತಿಷಿಗಳು ಅಪಾಯ ಮುನ್ಸೂಚನೆ ಕೊಟ್ರೂ ಹೀಗೆ ಡಾನ್ಸ್​ ಮಾಡೋದಾ- ಸೀತಾರಾಮ ಕಾಲೆಳೆದ ನೆಟ್ಟಿಗರು ಸೀತಾರಾಮ ಪಾತ್ರಧಾರಿಗಳಾದ ಗಗನ್ ಚಿನ್ನಪ್ಪ ಮತ್ತು ವೈಷ್ಣವಿ ಗೌಡ ರೀಲ್ಸ್ ಮಾಡಿದ್ರೆ ಮಗಳ ವಿಷಯ ಕೆದಕಿದ ನೆಟ್ಟಿಗರು ಹೇಳಿದ್ದೇನು? ಎಲ್ಲಾ ಅಡೆ ತಡೆ ಮೀರಿ ಸೀತಾ ಮತ್ತು ರಾಮನ ಮದುವೆ ನಡೆದಿದೆ. ಕಂಟಕ, ಸಮಸ್ಯೆ, ತೊಂದರೆ, ಭಾರ್ಗವಿ ಚಿಕ್ಕಿಯ ಮೋಸದಾಟ, ರುದ್ರಪ್ರತಾಪನ ಕೈವಾಡ... ಎಲ್ಲವನ್ನೂ ಮೀರಿ ಸೀತಾರಾಮ ಮದುವೆಯಾಗಿದೆ. ಇವರ ಮದುವೆ ಆಗುತ್ತದೆಯೋ, ಇಲ್ಲವೋ ಎಂಬ ಬಗ್ಗೆ ಇರುವ ಆತಂಕಗಳು ದೂರ ಆಗಿರುವುದೇನೋ ನಿಜ. ಆದರೆ ಇದೀಗ ಸಿಹಿಗೆ ಕಂಟಕ ಶುರುವಾಗಿದೆ. ಅದೂ ಮನೆಯಲ್ಲಿರುವ ಬಾಲಕನಿಂದ. ಪ್ರತಿ ಹೆಜ್ಜೆಗೂ ಸಿಹಿಯನ್ನು ಆತ ಗೋಳು ಹೊಯ್ದುಕೊಳ್ಳುತ್ತಿದ್ದಾನೆ. ಜ್ಯೋತಿಷಿಗಳು ಬಂದು ಸಿಹಿಯ ಬಾಳಲ್ಲಿ ಹಲವಾರು ಕಂಟಕಗಳು ಇವೆ ಎಂದು ಹೇಳಿ ಹೋಗಿದ್ದಾರೆ. ಅದರಂತೆಯೇ ಬಾಲಕ ಸಿಹಿಯ ಜೀವನದ ಜೊತೆ ಚೆಲ್ಲಾಟ ಆಡುತ್ತಿದ್ದಾನೆ. ಸಿಹಿ ಆತನ ಫ್ರೆಂಡ್​ಷಿಪ್​ ಮಾಡಿಕೊಳ್ಳಲು ಹವಣಿಸುತ್ತಿದ್ದಾಳೆ. ಅದರೆ ಬಾಲಕ ಮಾತ್ರ ಸಿಹಿ ಬರುವ ಜಾಗದಲ್ಲಿ ಗೋಲಿ ಇಟ್ಟು ಅವಳನ್ನು ಬೀಳಿಸಿದ್ದಾನೆ. ಈಗ ಬಾಲಕ ಟೆರೇಸ್​ ಮೇಲೆ ಸಿಹಿಯನ್ನುಹತ್ತಿಸಿ ಏಣಿ ತೆಗೆದಿದ್ದಾನೆ. ಸಿಹಿ ಕೆಳಗೆ ಬರಲಾಗದೇ ಒದ್ದಾಡುತ್ತಿದ್ದಾಳೆ. ಅದೇ ಇನ್ನೊಂದೆಡೆ, ಸೀತಾ ಮತ್ತು ರಾಮ ರೀಲ್ಸ್​ ಮಾಡುತ್ತಿದ್ದಾರೆ. ಇಬ್ಬರೂ ಈ ರೀಲ್ಸ್​ಗೆ ಭರ್ಜರಿ ಸ್ಟೆಪ್​ ಹಾಕಿದ್ದಾರೆ. ಇವರಿಗೆ ಸಿಹಿಯ ಅಜ್ಜಿ-ತಾತನೂ ಸಾಥ್​ ಕೊಟ್ಟಿದ್ದಾರೆ. ಈ ರೀಲ್ಸ್​ಗೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ಭರ್ಜರಿ ಕಮೆಂಟ್​ ಸುರಿಮಳೆಯಾಗುತ್ತಿದೆ. ಆದರೆ ಕೆಲವರು ಜೋಡಿಯ ಕಾಲೆಳೆದಿದ್ದಾರೆ. ಸಿಹಿಯ ಲೈಫ್​ ಡೇಂಜರ್​ನಲ್ಲಿ ಇದೆ ಎಂದು ಜ್ಯೋತಿಷಿಗಳು ಹೇಳಿದ್ದಾರೆ. ಹಾಗಿದ್ದರೂ ಅವಳನ್ನು ಒಬ್ಬಳನ್ನೇ ಬಿಟ್ಟು ಹೀಗೆ ರೀಲ್ಸ್​ ಮಾಡ್ತಿದ್ದೀರಲ್ಲ ಎಂದು ಪ್ರಶ್ನಿಸುತ್ತಿದ್ದಾರೆ. ಇನ್ನು ಕೆಲವರು ನಿಜ ಜೀವನದಲ್ಲಿಯೂ ಒಂದಾಗಿಬಿಡಿ ಎಂದು ಹೇಳುತ್ತಿದ್ದಾರೆ. ನಿಮ್ಮಿಬ್ಬರ ಜೋಡಿ ಸೂಪರ್​ ಎನ್ನುತ್ತಿದ್ದಾರೆ. ಯಾರೂ ಬದಲಾಗಲ್ಲ... ದುಡ್ಡು ಬಂದಾಗ ಒಳಗಿರೋದು ಹೊರಬರುತ್ತೆ- ನಿತ್ಯಾ ಮೆನನ್​ ಓಪನ್​ ಮಾತು.. ಇನ್ನು ಸೀತಾ ಪಾತ್ರಧಾರಿ ವೈಷ್ಣವಿ ಅವರ ಕುರಿತು ಹೇಳುವುದಾದರೆ, ಕನ್ನಡದ ಪ್ರೇಕ್ಷಕರಿಗೆ ಸನ್ನಿಧಿಯಂತಲೇ ಇವರು ಪರಿಚಯವಿದ್ದರು. ಅಗ್ನಿಸಾಕ್ಷಿ ಸೀರಿಯಲ್​ನ ಸನ್ನಿಧಿ ಮೂಲಕ ಸಕತ್​ ಫೇಮಸ್​ ಆಗಿದ್ದ ನಟಿ ಈಗ ಸೀತಾರಾಮದ ಸೀತೆಯಾಗಿ ಮನೆ ಮಾತಾಗಿದ್ದಾರೆ. ವೈಷ್ಣವಿ ಕನ್ನಡ ಕಿರುತೆರೆಲೋಕದ ಜನಪ್ರಿಯ ನಟಿ. ಅಷ್ಟೇ ಅಲ್ಲದೇ, ಹಲವು ಉತ್ಪನ್ನಗಳ ರಾಯಭಾರಿಯೂ ಹೌದು. ಅಷ್ಟಕ್ಕೂ ಇವರು ನಟನಾ ಲೋಕಕ್ಕೆ ಕಾಲಿಟ್ಟಿದ್ದೂ ಕುತೂಹಲ ವಿಷಯವಾಗಿದೆ. ಒಮ್ಮೆ ಇವರು ತಾಯಿಯ ಜೊತೆ ದೇವಸ್ಥಾನಕ್ಕೆ ಹೋದಾಗ ಸಹಾಯಕ ನಿರ್ದೇಶಕರೊಬ್ಬರು ನೋಡಿ ತಮ್ಮ ಸೀರಿಯಲ್‌ನಲ್ಲಿ ನಟಿಸಲು ಆಫರ್ ನೀಡಿದ್ದರಂತೆ. ಜೀ ಕನ್ನಡದ `ದೇವಿ' ಸೀರಿಯಲ್‌ನಿಂದ ಇವರ ಕಿರುತೆರೆ ಪಯಣ ಆರಂಭವಾಯಿತು.ನಂತರ `ಪುನರ್‌ವಿವಾಹ'ದಲ್ಲಿ ನಟಿಸಿ `ಅಗ್ನಸಾಕ್ಷಿ' ಸೀರಿಯಲ್‌ನ ಸನ್ನಿಧಿಯಾಗಿ ಆಯ್ಕೆಗೊಂಡರು. ಈ ಪಾತ್ರದ ಮೂಲಕ ಅಪಾರ ಜನಮನ್ನಣೆ ಪಡೆದಿದ್ದಾರೆ. ಇವರ ಕಾಲೇಜು ಶಿಕ್ಷಣದ ಕುರಿತು ಹೇಳುವುದಾದರೆ, ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ವಿಧ್ಯಾಭ್ಯಾಸ ಮಾಡಿದ್ದಾರೆ. ಪದವಿ ಅರ್ಧಕ್ಕೆ ಬಿಟ್ಟು, ಬಳಿಕ ಬೆಂಗಳೂರು ವಿಶ್ವವಿದ್ಯಾನಿಲಯದ ದೂರಶಿಕ್ಷಣ ಮೂಲಕ ಪದವಿ ಪಡೆದಿದ್ದಾರೆ. ಭರತನಾಟ್ಯ, ಕುಚಿಪುಡಿ ಮತ್ತು ಬೆಲ್ಲಿ ಡ್ಯಾನ್ಸಿಂಗ್‌ನಲ್ಲಿ ವಿಶೇಷ ಪರಿಣತಿ ಪಡೆದಿದ್ದಾರೆ. `ಗಿರಿಗಿಟ್ಲೆ' ಚಿತ್ರದ ಮೂಲಕ ನಾಯಕಿಯಾಗಿದ್ದಾರೆ. `ಭರ್ಜರಿ ಕಾಮಿಡಿ' ಎಂಬ ರಿಯಾಲಿಟಿ ಷೋ ನಿರೂಪಣೆ ಕೂಡ ಮಾಡಿದ್ದಾರೆ. `ಕುಣಿಯೋಣ ಬಾರ' ಡ್ಯಾನ್ಸ್ ರಿಯಾಲಿಟಿ ಷೋ ಆಗೂ ಬಿಗ್​ಬಾಸ್​ ಸೀಸನ್​ 8ನಲ್ಲಿ ಭಾಗವಹಿಸಿದ್ದಾರೆ. ಇನ್ನು ರಾಮ್​ ಪಾತ್ರಧಾರಿ ಗಗನ್​ ಚಿನ್ನಪ್ಪ ಕುರಿತು ಹೇಳುವುದಾದರೆ, ಕೊಡಗು ಮೂಲದ ಗಗನ್​, ಬಣ್ಣ ಲೋಕಕ್ಕೆ ಎಂಟ್ರಿ ಕೊಡುವ ಮೊದಲದು ಎರಡು ವರ್ಷ ಓಮನ್‌ ದೇಶದಲ್ಲಿ ಅದಾದ ಬಳಿಕ ಒಂದು ವರ್ಷ ಅಬುದಾಬಿಯಲ್ಲಿ ಕೆಲಸ ಮಾಡಿದ್ದರು. ಶಿಕ್ಷಣ ಮುಗಿಸಿದ ಬಳಿಕ ಕೆಲಸಕ್ಕೆ ಸೇರಿದ್ದವರು. ವಿದೇಶಗಳಲ್ಲಿ ಕೆಲಸ ಮಾಡಿದ ಸಂದರ್ಭದಲ್ಲಿ ಅವರ ಒಂದು ಫೋಟೋಶೂಟ್​ ಅವರನ್ನು ಬಣ್ಣದ ಲೋಕಕ್ಕೆ ಬರುವಂತೆ ಮಾಡಿತು. 2014 ರಲ್ಲಿ ಫೋಟೋಶೂಟ್​ ಮಾಡಿಸಿ ಸೋಷಿಯಲ್​ ಮೀಡಿಯಾದಲ್ಲಿ ಹಾಕಿದ್ದರು. ಆಗ ಅವರಿಗೆ ಚಿತ್ರವೊಂದಕ್ಕೆ ಆಫರ್​ ಬಂದಿತ್ತು. ಬಣ್ಣದ ಲೋಕದ ಸೆಳೆತದಿಂದ ಅಬುದಾಬಿ ಬಿಟ್ಟು ಬೆಂಗಳೂರಿಗೆ ಬಂದರು. ಚಿತ್ರದಲ್ಲಿ ನಟಿಸಿದರೂ ಅದು ರಿಲೀಸ್​ ಆಗಲೇ ಇಲ್ಲ. ಸೀರಿಯಲ್​ಗಳಲ್ಲಿ ಆಡಿಷನ್​ ಕೊಟ್ಟರೂ ಭಾಷೆ ಸರಿಯಿಲ್ಲವೆಂದು ರಿಜೆಸ್ಟ್​ ಆಗುತ್ತಿದ್ದಂತೆ. ನಂತರ ಬಣ್ಣದ ಲೋಕ ಬೇಡ ಎಂದು ಮಾರ್ಕೆಟಿಂಗ್‌ ಮ್ಯಾನೇಜರ್‌ ಆಗಿ ಕೆಲಸ ಶುರು ಮಾಡಿದರು. ಆದರೆ ಬಣ್ಣದ ಲೋಕದ ಸೆಳೆತ ಇದ್ದೇ ಇದ್ದು. ಮಂಗಳಗೌರಿ ಮದುವೆ ಸೀರಿಯಲ್‌ನಲ್ಲಿ ಅವಕಾಶ ಸಿಕ್ಕಿತು. ಈ ಧಾರಾವಾಹಿಯಲ್ಲಿ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಮಿನಿ ಬಿಗ್ ಬಾಸ್​ಗೂ ಎಂಟ್ರಿ ಕೊಟ್ಟು ಈಗ ಸೀತಾರಾಮ ಸೀರಿಯಲ್​ ಮೂಲಕ ಕನ್ನಡ ಧಾರಾವಾಹಿ ಲೋಕದಲ್ಲಿ ಪೂರ್ಣಪ್ರಮಾಣದ ನಾಯಕರಾಗಿ ಮಿಂಚುತ್ತಿದ್ದಾರೆ. ತೆಲುಗು ಕಿರುತೆರೆಗೂ ಕಾಲಿಟ್ಟಿರೋ ಗಗನ್​ ಅವರು, ‘ಕೃಷ್ಣ ಮುಕುಂದ ಮುರಾರಿ’ ಸೀರಿಯಲ್​ನಲ್ಲಿ ನಟಿಸುತ್ತಿದ್ದಾರೆ. ಇದರಲ್ಲಿ ಅವವರು ಮುರಾರಿ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಪ್ರೇರಣಾ ಕಂಬಮ್, ಯಶ್ಮಿ ಗೌಡ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಚೆಲುವಾದ ಗೊಂಬೆ... ಚಂದನದ ಮಾಜಿ ಗೊಂಬೆ... ಎನ್ನುತ್ತಲೇ ಹಿಂದೆ ಇರೋದು ಯಾರ ಕೈ ಕೇಳೋದಾ ನೆಟ್ಟಿಗರು? (@iam_gaganchinnappa)