ಪ್ರತಿ ಜಿಲ್ಲೆಗಳಲ್ಲೂ ಡೇ-ಕೇರ್‌ ಕಿಮೋಥೆರಪಿ ಕೇಂದ್ರ, 7 ತಾಲೂಕುಗಳಲ್ಲಿ ಹೊಸ ಆಸ್ಪತ್ರೆ! ಸಿದ್ದರಾಮಯ್ಯ ದಾಖಲಯೆ 15ನೇ ಬಾರಿಗೆ ರಾಜ್ಯ ಬಜೆಟ್‌ ಮಂಡನೆ ಮಾಡಿದ್ದು, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಗೆ ಘೋಷಣೆ ಮಾಡಿರುವ ವಿಚಾರಗಳು ಇಲ್ಲಿವೆ. ಬೆಂಗಳೂರು (ಫೆ.16):ರಾಜ್ಯ ಬಜೆಟ್‌ನಲ್ಲಿ ಸಿಎಂ ಸಿದ್ಧರಾಮಯ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಗೆ ಹಲವು ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ. ಇದರಲ್ಲಿ ಪ್ರಮುಖವಾಗಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಮತ್ತು ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ ಕಿಮೋಥೆರಪಿ ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ, ಸರ್ಕಾರವು 20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರವನ್ನು ಸ್ಥಾಪನೆ ಮಾಡಲಿದೆ ಎಂದು ಘೋಷಣೆ ಮಾಡಿದ್ದಾರೆ. ಅದರೊಂದಿಗೆ ರಾಜ್ಯದಲ್ಲಿ ತಾಲೂಕು ಆಸ್ಪತ್ರೆಗಳಿಲ್ಲದ ಆನೇಕಲ್, ನೆಲಮಂಗಲ, ಹೊಸಕೋಟೆ, ಶೃಂಗೇರಿ, ಖಾನಾಪುರ, ಶಿರಹಟ್ಟಿ ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ಪ್ರಸಕ್ತ ಸಾಲಿನಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಗಳನ್ನು 280 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದಿದ್ದಾರೆ. ಅದರೊಂದಿಗೆ ರಾಜ್ಯದಲ್ಲಿ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‌ಗಳ ಸ್ಥಾಪನೆ ಮಾಡಲಾಗುತ್ತಿದ್ದು. 15 ಜಿಲ್ಲೆಗಳಲ್ಲಿ ನಿರ್ಮಾಖ ಕಾರ್ಯ ನಡೆಯುತ್ತಿದೆ. ಹಾಲಿ ವರ್ಷ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಮುಂದಿನ ಸಾಲಿನಲ್ಲಿ ಉಳಿದ 9 ಜಿಲ್ಲೆಗಳಲ್ಲಿಯೂ ಕ್ರಿಟಿಕಲ್ ಕೇರ್ ಬ್ಲಾಕ್‌ ಸ್ಥಾಪನೆ ಮಾಡಲಾಗುತ್ತದೆ. ಆರೋಗ್ಯ ಇಲಾಖೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ಉನ್ನತೀಕರಣಕ್ಕೆ 75 ಕೋಟಿ ರೂ. ಗಳ ಅನುದಾನ ನೀಡುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಮೂಲಸೌಕರ್ಯ ಕಾಮಗಾರಿಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭ ಮಾಡಲಾಗುತ್ತದೆ.ಕಲ್ಯಾಣ ಕರ್ನಾಟಕ ಭಾಗದಲ್ಲಿ 46 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 221 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲಕ ಸ್ಥಾಪನೆ ಮಾಡಲಾಗುತ್ತದೆ. ಗ್ರಾಮೀಣ ಪ್ರದೇಶದ ಜನರಿಗೆ 24x7 ತುರ್ತು ಆರೋಗ್ಯ ಸೇವೆಯನ್ನು ನೀಡಲು ಮುಂದಿನ 2 ವರ್ಷಗಳಲ್ಲಿ 350 ಕೋಟಿ ರೂ.ಗಳ ವೆಚ್ಚದಲ್ಲಿ 25 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 15 ಸಮುದಾಯ ಆರೋಗ್ಯ ಕೇಂದ್ರಗಳನ್ನು ಮಾನವ ಸಂಪನ್ಮೂಲದೊಂದಿಗೆ ಕಾರ್ಯಗತಗೊಳಿಸಲಾಗುವುದು. ಇನ್ನಿತರ ಘೋಷಣೆಗಳು* ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡಲು 6,493 ಆರೋಗ್ಯ ಕ್ಷೇಮ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 199 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಕಟ್ಟಡ ಕಾಮಗಾರಿಗಾಗಿ 130 ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗುವುದು. * ಜಿಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿರುವ ಮಕ್ಕಳ ತಜ್ಞರು, ಮತ್ತು ಕ್ರಿಟಿಕಲ್ ಕೇರ್ ಮೆಡಿಸಿನ್ ತಜ್ಞ ಮತ್ತಿತರ ತಜ್ಞ ವೈದ್ಯರುಗಳ ಸೇವೆಯನ್ನು ಟೆಲಿ-ಐಸಿಯು ವ್ಯವಸ್ಥೆಯ ಮೂಲಕ ತಾಲ್ಲೂಕು ಆಸ್ಪತ್ರೆಗಳಿಗೆ ಒದಗಿಸಲಾಗುವುದು.* ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್ ಆಸ್ಪತ್ರೆ ಬೆಂಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ ಉಪಕರಣಗಳ ಖರೀದಿಗೆ ಒಟ್ಟಾರೆಯಾಗಿ 21 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು. *ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೆ ಮಾದರಿಯಲ್ಲಿ ವಿಸ್ತರಿಸುವ ಮೂಲಕ (ತೀವ್ರ ಹೃದ್ರೋಗ) ಚಿಕಿತ್ಸೆಯನ್ನು ಬಲಪಡಿಸಲಾಗುವುದು. ಇದಲ್ಲದೇ ಚಿಕಿತ್ಸೆಗಾಗಿ ಥ್ರಂಬೋಲಿಟಿಕ್ ಔಷಧಗಳ ( ) ಸಂಗ್ರಹಣೆಗಾಗಿ 32 ಕೋಟಿ ರೂ.ಗಳನ್ನು ಒದಗಿಸಲಾಗುವುದು. *ರಾಜ್ಯದ ಜಿಲ್ಲಾ ಆಸ್ಪತ್ರೆಗಳನ್ನು ಅಗ್ನಿ ಅವಘಡಗಳಿಂದ ರಕ್ಷಿಸಲು 13 ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿಶಾಮಕ ವ್ಯವಸ್ಥೆಯನ್ನು 6 ಕೋಟಿ ರೂ.ಗಳ ವೆಚ್ಚದಲ್ಲಿ ಅಳವಡಿಸಲಾಗುವುದು.*2025 ರೊಳಗೆ ಕ್ಷಯರೋಗ ನಿರ್ಮೂಲನೆಗೊಳಿಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕ್ಷಯರೋಗ ತಪಾಸಣೆಗಾಗಿ 87 - ಗಳನ್ನು ಖರೀದಿಸಲು 6 ಕೋಟಿ ರೂ. ಗಳ ಅನುದಾನ ಒದಗಿಸಲಾಗುವುದು.* ಕಲ್ಯಾಣ ಕರ್ನಾಟಕದಲ್ಲಿ ಮತ್ತು ರೋಗಿಗಳಿಗೆ ಸೂಕ್ತ ಚಿಕಿತ್ಸಾ ಸೌಲಭ್ಯಗಳ ಕೊರತೆಯಿರುವುದರಿಂದ ಕಲಬುರಗಿ ಮತ್ತು ಕೊಪ್ಪಳದ ಕೇಂದ್ರಗಳ ಬಲವರ್ಧನೆಗೆ 7 ಕೋಟಿ ರೂ.ಗಳನ್ನು ಒದಗಿಸಲಾಗುವುದು.* ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳ () ಗಳಲ್ಲಿ ರಕ್ತ ಸಂಗ್ರಹ ಘಟಕಗಳಿಲ್ಲದ ಕಾರಣ, ರೋಗಿಗಳಿಗೆ ತುರ್ತು ಸಮಯದಲ್ಲಿ ರಕ್ತ ಪೂರೈಸಲು ತೊಂದರೆ ಉಂಟಾಗುತ್ತಿದೆ. ಇದನ್ನು ನೀಗಿಸಲು 50 ಹೊಸ ರಕ್ತ ಶೇಖರಣಾ ಘಟಕಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಸ್ಥಾಪಿಸಲಾಗುವುದು. * ಮುಂದಿನ 4 ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು () ಸ್ಥಾಪಿಸುವ ಮೂಲಕ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಚಿಕ್ಕಮಗಳೂರು, ವಿಜಯನಗರ, ಶಿವಮೊಗ್ಗ, ಬೆಳಗಾವಿ, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮತ್ತು 2025-26 ನೇ ಸಾಲಿನಲ್ಲಿ ಚಿತ್ರದುರ್ಗ, ಬಾಗಲಕೋಟೆ, ಚಾಮರಾಜನಗರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ಉತ್ತರ ಕನ್ನಡ ಮತ್ತು ಗದಗ ಜಿಲ್ಲೆಗಳಲ್ಲಿ ಪ್ರಯೋಗಾಲಯವನ್ನು () ಸ್ಥಾಪಿಸಲಾಗುವುದು. ಇದಲ್ಲದೇ ಪ್ರಸಕ್ತ ಸಾಲಿನಲ್ಲಿ ಹುನಗುಂದ, ಸಿರಾ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. ಇದಕ್ಕೆ ಒಟ್ಟಾರೆಯಾಗಿ 11 ಕೋಟಿ ರೂ.ಗಳ ಅನುದಾನವನ್ನು ನೀಡಲಾಗುವುದು.* ಬೆಂಗಳೂರಿನಲ್ಲಿ ಬಡಜನತೆಗೆ ಉಚಿತ ಪ್ರಯೋಗಾಲಯ ಸೇವೆಯನ್ನು ಒದಗಿಸಲು ಮಾದರಿಯಲ್ಲಿ 430 ಪ್ರಯೋಗಾಲಯಗಳ ಸ್ಥಾಪನೆಗೆ ಮುಂದಿನ ಎರಡು ವರ್ಷಗಳಲ್ಲಿ 20 ಕೋಟಿ ರೂ. ಗಳ ಅನುದಾನವನ್ನು ನೀಡಲಾಗುವುದು. ಬಜೆಟ್‌ನಲ್ಲಿ ಬೆಂಗಳೂರು ಅಭಿವೃದ್ಧಿಗೆ ಭರ್ಜರಿ ಘೋಷಣೆ, ಮೆಟ್ರೋ, ಟನಲ್ ರೋಡ್‌, ಬಿಎಂಟಿಸಿಗೆ ಸಿಕ್ಕಿದ್ದೆಷ್ಟು? * ಮಧುಮೇಹ ನಿಯಂತ್ರಣಕ್ಕಾಗಿ ಸಾರ್ವಜನಿಕರಿಗೆ ಆಯುಷ್ ಚಿಕಿತ್ಸೆ ನೀಡಲು ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಲಾ ಒಂದು ಆಯುರ್ವೇದ ಮಧುಮೇಹ ಘಟಕವನ್ನು ಸ್ಥಾಪಿಸಲಾಗುವುದು. ವೈದ್ಯಕೀಯ ಮತ್ತು ಉನ್ನತ ಶಿಕ್ಷಣಕ್ಕೆ ಸಿದ್ದರಾಮಯ್ಯ ಘೋಷಿಸಿದ ಅನುದಾನಗಳಿವು * ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ 2021ರಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರವಾದ ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ವಿಚಾರಣಾ ಆಯೋಗವನ್ನು ನೇಮಿಸಿದೆ. ಆಯೋಗವು ನೀಡುವ ವರದಿಯನ್ನಾಧರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.