ಕರ್ನಾಟಕ ಬಜೆಟ್ 2024: ಅಂಜನಾದ್ರಿ ಬೆಟ್ಟ, ಕಪ್ಪತ್ತಗುಡ್ಡ ಪ್ರವಾಸಿ ಸೌಲಭ್ಯ ಅಭಿವೃದ್ಧಿಗೆ ಭರ್ಜರಿ ಘೋಷಣೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ ಮಂಡಿಸಿದ್ದಾರೆ. ಹಲವು ಸವಾಲುಗಳ ನಡುವೆ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಪ್ರವಾಸೋದ್ಯಮಕ್ಕೆ ನೀಡಿರುವ ಕೊಡುಗೆಯೇನು ತಿಳಿಯೋಣ.. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು, ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲಾಗಿದೆ.