ಪುಟ್ಟಕ್ಕನ ಮಕ್ಕಳು ಸೀರಿಯಲ್​ ಸ್ನೇಹಾ ಮುದ್ದಾದ ಫೋಟೋಸ್, ಬಾದಾಮ್ ಹಲ್ವಾ ತರ ಇದ್ದೀರಿ ಎಂದ ಫ್ಯಾನ್ಸ್‌ ಪುಟ್ಟಕ್ಕನ ಮಗಳು ಸೀರಿಯಲ್ ಖ್ಯಾತಿಯ ಸಂಜನಾ ಬುರ್ಲಿ ಆಗಾಗ ಸ್ಟೈಲಿಶ್ ಫೋಟೋಶೂಟ್‌ ಮಾಡಿಸ್ಕೊಂಡು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಇತ್ತೀಚಿಗೆ ಅವ್ರು ಗ್ರೀನ್ ಡ್ರೆಸ್‌ನಲ್ಲಿ ಮುದ್ದಾಗಿರುವ ಫೋಟೋಸ್‌ ಪೋಸ್ಟ್ ಮಾಡಿದ್ದು, ನೆಟ್ಟಿಗರು ಫಿದಾ ಆಗಿದ್ದಾರೆ. ಪುಟ್ಟಕ್ಕನ ಮಗಳು ಸೀರಿಯಲ್ ಖ್ಯಾತಿಯ ಸಂಜನಾ ಬುರ್ಲಿ ಆಗಾಗ ಸ್ಟೈಲಿಶ್ ಫೋಟೋಶೂಟ್‌ ಮಾಡಿಸ್ಕೊಂಡು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಇತ್ತೀಚಿಗೆ ಅವ್ರು ಗ್ರೀನ್ ಡ್ರೆಸ್‌ನಲ್ಲಿ ಮುದ್ದಾಗಿರುವ ಫೋಟೋಸ್‌ ಪೋಸ್ಟ್ ಮಾಡಿದ್ದು, ನೆಟ್ಟಿಗರು ಫಿದಾ ಆಗಿದ್ದಾರೆ. ಕಿರುತೆರೆಯ ಮೂಲಕ ಮನೆಮಂದಿಗೆ ಹತ್ತಿರವಾಗುವ ಕೆಲ ನಟ-ನಟಿಯರು ಸಾಮಾಜಿಕ ಜಾಲತಾಣದಲ್ಲಿಯೂ ಸಕತ್​ ಆ್ಯಕ್ಟೀವ್​ ಆಗಿರುತ್ತಾರೆ. ಆಗಾಗ ಟ್ರೆಡಿಶನಲ್‌, ಮಾಡರ್ನ್‌ ಡ್ರೆಸ್‌ನಲ್ಲಿ ಫೋಟೋಶೂಟ್ ಮಾಡ್ಕೊಂಡು ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಶೇರ್ ಮಾಡುತ್ತಿರುತ್ತಾರೆ. ಅಂಥಾ ಪುಟ್ಟಕ್ಕನ ಮಕ್ಕಳು ಸೀರಿಯಲ್​ ಖ್ಯಾತಿಯ ಸ್ನೇಹಾ. ಅಸಲಿ ಹೆಸರು ಸಂಜನಾ ಬುರ್ಲಿ. ಸಂಜನಾ ಬುರ್ಲಿ, ಸೋಷಿಯಲ್​ ಮೀಡಿಯಾದಲ್ಲಿಯೂ ಸಕತ್​ ಆ್ಯಕ್ಟೀವ್​ ಆಗಿದ್ದಾರೆ. ಆಗಾಗ ಫೋಟೋಶೂಟ್‌, ಟ್ರಾವೆಲಿಂಗ್‌ ವ್ಲಾಗ್ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡ್ಕೊಂಡು ಅಭಿಮಾನಿಗಳ ಮೆಚ್ಚುಗೆ ಗಳಿಸುತ್ತಾರೆ. ಹಾಗೆಯೇ ನಟಿ ಇತ್ತೀಚಿಗೆ ಶೇರ್ ಮಾಡ್ಕೊಂಡಿರೋ ಫೋಟೋಸ್ ಅಭಿಮಾನಿಗಳ ಮನಗೆದ್ದಿದೆ. ಸದ್ಯ ಗ್ರೀನ್‌ ಕಲರ್ ಡ್ರೆಸ್‌ನಲ್ಲಿ ಮಿಂಚಿದ್ದಾರೆ. ಇದಕ್ಕೆ ವೈಟ್‌ನಲ್ಲಿ ಡಾರ್ಕ್‌ ಗ್ರೀನ್‌ ಪೆಂಡೆಂಟ್‌ ಇರೋ ಚೋಕರ್ ಹಾಗೂ ಇಯರಿಂಗ್ಸ್ ಧರಿಸಿದ್ದಾರೆ. ಸಿಂಪಲ್‌ ಮೇಕಪ್‌ನಲ್ಲಿ ಸಖತ್ ಬ್ಯೂಟಿಫುಲ್ ಆಗಿ ಕಾಣಿಸಿಕೊಂಡಿದ್ದಾರೆ. ನೆಟ್ಟಿಗರು ಇದನ್ನು ನೋಡಿ ನಾನಾ ರೀತಿ ಕಾಮೆಂಟ್ ಮಾಡಿದ್ದಾರೆ. ಒಬ್ಬ ಬಳಕೆದಾರರು, 'ಡೈರೆಕ್ಟಾಗಿ ಹಾರ್ಟ್‌ಗೆ ಲಗ್ಗೆಯಿಟ್ಟು ಬಿಟ್ರಲ್ಲಾ' ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, 'ಬಾದಾಮ್ ಹಲ್ವಾ ತರ ಇದ್ದೀರಾ' ಎಂದು ಕಾಮೆಂಟಿಸಿದ್ದಾರೆ. ಮತ್ತೆ ಕೆಲವರು, ಎವರ್‌ಗ್ರೀನ್ ಬ್ಯೂಟಿ, ಗಾರ್ಜಿಯಸ್ ಮೆಸ್ಸು, ಜಸ್ಟ್‌ ಲುಕ್ಕಿಂಗ್‌ ಲೈಕ್ ಎ ವಾವ್ಹ್‌ ಎಂದೆಲ್ಲಾ ಕಾಮೆಂಟ್ ಮಾಡಿ ಹೊಗಳಿದ್ದಾರೆ. ಸಂಜನಾ ಬುರ್ಲಿ ಅಭಿನಯದ ಪುಟ್ಟಕ್ಕನ ಮಕ್ಕಳು ಸೀರಿಯಲ್ ಝೀ ಟಿವಿಯಲ್ಲಿ ಪ್ರಸಾರವಾಗ್ತಿದೆ. ಸದಾ ಟಿಆರ್​ಪಿಯಲ್ಲಿ ಟಾಪ್​ಮೋಸ್ಟ್​ ಸ್ಥಾನ ಪಡೆದು ಮುನ್ನುಗ್ಗುತ್ತಿದೆ. ದಿನದಿಂದ ದಿನಕ್ಕೆ ವೀಕ್ಷಕರ ಸಂಖ್ಯೆಯನ್ನು ಈ ಧಾರಾವಾಹಿ ಪಡೆದುಕೊಳ್ಳುತ್ತಿದೆ. ಪುಟ್ಟಕ್ಕ ತನ್ನ ಮೂರು ಹೆಣ್ಣುಮಕ್ಕಳಾದ ಸಹನಾ, ಸ್ನೇಹಾ ಮತ್ತು ಸುಮಾ ಅವರನ್ನು ಹೇಗೆ ಕಷ್ಟಪಟ್ಟು ಸಾಕುತ್ತಿದ್ದಾಳೆ ಎನ್ನುವ ಕಥಾಹಂದರವನ್ನು ಈ ಧಾರಾವಾಹಿ ಹೊಂದಿದೆ ಇನ್ನು ಸಂಜನಾ ಅವರ ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ ಎಂಟ್ರಿ ಕೊಟ್ಟಿರುವ ಕುರಿತು ಹೇಳುವುದಾದರೆ, ಈ ಹಿಂದೆ ಅವರೇ ಸಂದರ್ಶನವೊಂದರಲ್ಲಿ ವಿಷಯವನ್ನು ಬಹಿರಂಗಪಡಿಸಿದ್ದರು. ಇವರ ಮೊದಲ ಧಾರಾವಾಹಿ 'ಲಗ್ನಪತ್ರಿಕೆ'. ಕಾರಾಣಾಂತರಗಳಿಂದ ಪ್ರಸಾರ ನಿಲ್ಲಿಸಿತ್ತು. ನಂತರ ಧಾರಾವಾಹಿಯ ಉಸಾಬರಿ ಬೇಡ ಎಂದು ವಿದ್ಯಾಭ್ಯಾಸದ ಕಡೆ ಗಮನ ಕೊಟ್ಟಿದ್ದರು ನಟಿ. ಆ ಬಳಿಕ ಆರೂರು ಜಗದೀಶ್‌ ಅವರು 'ಪುಟ್ಟಕ್ಕನ ಮಕ್ಕಳು' ಧಾರಾವಾಹಿಯಲ್ಲಿ ನಟಿಸಲು ಅವಕಾಶ ಕೊಟ್ಟಿದ್ದರು. ಧಾರಾವಾಹಿ ಎಲ್ಲರ ಮನಗೆದ್ದಿದ್ದು, ಸಂಜನಾ ಬುರ್ಲಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.