ಪ್ರಾಥಮಿಕ ಶಾಲೆಗೆ ಆಂಗ್ಲ ಮಾಧ್ಯಮ ಬೇಡ: ಡಾ.ಪುರುಷೋತ್ತಮ ಬಿಳಿಮಲೆ ಮನವಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಲ್ಲಿ ಕನ್ನಡ, ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಹೊರಡಿಸಿರುವ ಆದೇಶ ಹಿಂಪಡೆಯುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆಯಬತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರು (ಜೂ.21):ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಲ್ಲಿ ಕನ್ನಡ, ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಹೊರಡಿಸಿರುವ ಆದೇಶ ಹಿಂಪಡೆಯುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಒತ್ತಾಯಿಸಿದೆ. ಬುಧವಾರ ಶಿಕ್ಷಣ ಸಚಿವ ಮಧು ಬಂಗಾರಪ್ಪ( ) ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ(. ) ಅವರು ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿದರು. ಶಾಲಾ ಮಕ್ಕಳ ಶೂ, ಸಾಕ್ಸ್‌ ಖರೀದಿಗೆ ಏಳು ವರ್ಷ ಹಿಂದಿನ ದರ ನಿಗದಿಪಡಿಸಿದ ಸರ್ಕಾರ! ರಾಜ್ಯದ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ ಮತ್ತು ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ)ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರ ಈಗಾಗಲೇ ನಿರ್ಣಯ ಕೈಗೊಂಡಿದೆ. ಈ ಆದೇಶವು ಕನ್ನಡ ಭಾಷೆಯಲ್ಲಿ ಶಿಕ್ಷಣ ಒದಗಿಸುವುದಕ್ಕೆ ಹಿನ್ನಡೆಯನ್ನುಂಟು ಮಾಡುತ್ತದೆ. ಸದರಿ ಆದೇಶ ಕನ್ನಡ ಭಾಷಾ ಕಲಿಕಾ ಅಧಿನಿಯಮ ೨೦೧೫ಕ್ಕೆ ವಿರುದ್ಧವಾಗಿದೆ. ಜತೆಗೆ ಕನ್ನಡ ಭಾಷೆಯ ಸಾರ್ವಭೌಮತ್ವಕ್ಕೆ ಧಕ್ಕೆಯನ್ನುಂಟು ಮಾಡುತ್ತದೆ. ಆದ್ದರಿಂದ ಈ ಆದೇಶವನ್ನು ಹಿಂಪಡೆದು ಶಿಕ್ಷಣದಲ್ಲಿ ಕನ್ನಡ ಭಾಷಾ ಮಾಧ್ಯಮವನ್ನು ಉಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.