ಹುನಗುಂದ: ಹುಲಿಗೆಮ್ಮನ ದರ್ಶನ ಪಡೆದು ವಾಪಸ್‌ ಬರೋ ವೇಳೆ ಭೀಕರ ಅಪಘಾತ, ನಾಲ್ವರ ದುರ್ಮರಣ ಲಾರಿ-ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರ ಟೋಲ್ ನಾಕಾದ ಬಳಿ ನಡೆದಿದೆ. ಬಾಗಲಕೋಟೆ(ಸೆ.26):ಲಾರಿ-ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರ ಟೋಲ್ ನಾಕಾದ ಬಳಿ ಇಂದು(ಗುರುವಾರ) ನಡೆದಿದೆ. ಧನ್ನೂರ ಟೋಲ್‌ ನಾಕಾ‌ ಬಳಿ ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದೆ. ಮೃತರನ್ನ ಲಕ್ಣ್ಮಣ (55), ಬೈಲಪ್ಪ (45), ರಾಮಣ್ಣ (50), ಕಾರು ಚಾಲಕ ಮಹಮ್ಮದ್ ರಫೀಕ್ ಗುಡ್ನಾಳ (25) ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ: ಸತ್ತ ನಾಯಿಯನ್ನು ಪಕ್ಕಕ್ಕಿಡುವ ವೇಳೆ ಕಾರು ಡಿಕ್ಕಿ, ಯುವಕ ಸಾವು ಮೃತರೆಲ್ಲರೂ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಮೂಲದವರಾಗಿದ್ದಾರೆ. ಹುಲಿಗೆಮ್ಮನ ದರ್ಶನ ಮುಗಿಸಿಕೊಂಡು ವಾಪಸ್‌ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಹುನಗುಂದ ಮೂಲಕ ಮುದ್ದೇಬಿಹಾಳಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಹುನಗುಂದ ಪೊಲೀಸರು ಭೇಟಿ ನೀರಿ ಪರಿಶೀಲನೆ ನಡೆಸಿದ್ದಾರೆ.