ಕಾಂಗ್ರೆಸ್‌ನವರು ರೈತರು, ವಿದ್ಯಾರ್ಥಿಗಳು, ದಲಿತರಿಗೆ ಚಂಬು ಕೊಟ್ಟಿದ್ದಾರೆ: ಬಸವರಾಜ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿಯವರು ಜನರಿಗೆ ಶಾಸ್ವತ ಯೋಜನೆಗಳನ್ನು ಕೊಟ್ಟಿದ್ದಾರೆ. ಈ ಮೂಲಕ ಮೋದಿಯವರು ಚೊಂಬನ್ನು ಅಕ್ಷಯ ಪಾತ್ರೆ ಮಾಡಿದ್ದಾರೆ. ಬೆಂಗಳೂರು: ರಾಜ್ಯ ಕಾಂಗ್ರೆಸ್() ಸರ್ಕಾರ ಪೂರ್ವ ಸಿದ್ದತೆ ಇಲ್ಲದ ಗ್ಯಾರೆಂಟಿ()ಹೆಸರಿನಲ್ಲಿ ರಾಜ್ಯವನ್ನು ದಿವಾಳಿ ಮಾಡಿದ್ದು, ಆರ್ಥಿಕ ವಿಚಾರದಲ್ಲಿ ಹತಾಶರಾಗಿ ತೀರ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ( ) ಹೇಳಿದ್ದಾರೆ. ನಾಲ್ಕು ಲಕ್ಷ‌ಕೋಟಿ ತೆರಿಗೆ ಕೊಡುತ್ತೇವೆ ಎನ್ನುತ್ತಾರೆ. ಆದರೆ, ಕೇಂದ್ರದ ನೇರ ತೆರಿಗೆ, ರಾಜ್ಯಕ್ಕೆ ನೀಡುವ ತೆರಿಗೆ ಪಾಲಿಮ ಹಂಚಿಕೆ ಪಾಲಿನಲ್ಲಿ ಬರುವುದಿಲ್ಲ. ಅದು ಪ್ರಥಮ ಪ್ರಧಾನಿ ಜವಾಹರಲಾಲ ನೆಹರೂ ಅವರ ಕಾಲದಿಂದ ಇದೆ. ಈ ಪದ್ದತಿ ಜಿಎಸ್‌ಟಿಗೆ ಮಾತ್ರ ಅನ್ವಯವಾಗತ್ತದೆ ಎಂದರು. ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆ ಜೊತೆಗೆ ರಾಜ್ಯ ಸರ್ಕಾರವೂ ರೈತರಿಗೆ 4 ಸಾವಿರ ರೂ. ನೀಡುತ್ತಿತ್ತು. ರಾಜ್ಯ ಸರ್ಕಾರ ಅದನ್ನು ಕಡಿತ ಮಾಡಿ, ರೈತರಿಗೆ ಚಂಬು ಕೊಟ್ಟಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ರೈತ ವಿದ್ಯಾನಿಧಿ ಯೋಜನೆ ಅಡಿಯಲ್ಲಿ 13 ಲಕ್ಷ ವಿದ್ಯಾರ್ಥಿಗಳಿ ಸ್ಕಾಲರ್ ಶಿಪ್ ಕೊಡಲಾಗಿತ್ತು, ಅದನ್ನು ನಿಲ್ಲಿಸಿದ್ದಾರೆ. ದಲಿತ( ) ಸಮುದಾಯಕ್ಕೆ ಮೀಸಲಿಟ್ಟಿದ್ದ ಎಸ್ಸಿಪಿ ಟಿಎಸ್ಪಿಯ 11380 ಕೋಟಿ ಎಸ್ಸಿಎಸ್ಟಿ ಅನುದಾನವನ್ನ ಗ್ಯಾರಂಟಿಗೆ ಬಳಕೆ ಮಾಡಿಕೊಂಡಿದ್ದಾರೆ. ಇದೆಲ್ಲ ಮಾಡಿ ರಾಜ್ಯದ ಜನತೆಗೆ ಚೊಂಬು ಕೊಟ್ಟಿದ್ದು ರಾಜ್ಯ ಸರ್ಕಾರ ಎಂದು ಆರೋಪಿಸಿದರು.ಇದನ್ನೂ ವೀಕ್ಷಿಸಿ: : 25 ವರ್ಷದ ಯುವತಿ..46 ವರ್ಷದ ಅಂಕಲ್..!ಲವ್ವರ್ಸ್ ಡೆಡ್..ಅಮ್ಮ ಇನ್ ಜೈಲ್..! ಬೆಂಗಳೂರು: ರಾಜ್ಯ ಕಾಂಗ್ರೆಸ್() ಸರ್ಕಾರ ಪೂರ್ವ ಸಿದ್ದತೆ ಇಲ್ಲದ ಗ್ಯಾರೆಂಟಿ()ಹೆಸರಿನಲ್ಲಿ ರಾಜ್ಯವನ್ನು ದಿವಾಳಿ ಮಾಡಿದ್ದು, ಆರ್ಥಿಕ ವಿಚಾರದಲ್ಲಿ ಹತಾಶರಾಗಿ ತೀರ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ( ) ಹೇಳಿದ್ದಾರೆ. ನಾಲ್ಕು ಲಕ್ಷ‌ಕೋಟಿ ತೆರಿಗೆ ಕೊಡುತ್ತೇವೆ ಎನ್ನುತ್ತಾರೆ. ಆದರೆ, ಕೇಂದ್ರದ ನೇರ ತೆರಿಗೆ, ರಾಜ್ಯಕ್ಕೆ ನೀಡುವ ತೆರಿಗೆ ಪಾಲಿಮ ಹಂಚಿಕೆ ಪಾಲಿನಲ್ಲಿ ಬರುವುದಿಲ್ಲ. ಅದು ಪ್ರಥಮ ಪ್ರಧಾನಿ ಜವಾಹರಲಾಲ ನೆಹರೂ ಅವರ ಕಾಲದಿಂದ ಇದೆ. ಈ ಪದ್ದತಿ ಜಿಎಸ್‌ಟಿಗೆ ಮಾತ್ರ ಅನ್ವಯವಾಗತ್ತದೆ ಎಂದರು. ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆ ಜೊತೆಗೆ ರಾಜ್ಯ ಸರ್ಕಾರವೂ ರೈತರಿಗೆ 4 ಸಾವಿರ ರೂ. ನೀಡುತ್ತಿತ್ತು. ರಾಜ್ಯ ಸರ್ಕಾರ ಅದನ್ನು ಕಡಿತ ಮಾಡಿ, ರೈತರಿಗೆ ಚಂಬು ಕೊಟ್ಟಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ರೈತ ವಿದ್ಯಾನಿಧಿ ಯೋಜನೆ ಅಡಿಯಲ್ಲಿ 13 ಲಕ್ಷ ವಿದ್ಯಾರ್ಥಿಗಳಿ ಸ್ಕಾಲರ್ ಶಿಪ್ ಕೊಡಲಾಗಿತ್ತು, ಅದನ್ನು ನಿಲ್ಲಿಸಿದ್ದಾರೆ. ದಲಿತ( ) ಸಮುದಾಯಕ್ಕೆ ಮೀಸಲಿಟ್ಟಿದ್ದ ಎಸ್ಸಿಪಿ ಟಿಎಸ್ಪಿಯ 11380 ಕೋಟಿ ಎಸ್ಸಿಎಸ್ಟಿ ಅನುದಾನವನ್ನ ಗ್ಯಾರಂಟಿಗೆ ಬಳಕೆ ಮಾಡಿಕೊಂಡಿದ್ದಾರೆ. ಇದೆಲ್ಲ ಮಾಡಿ ರಾಜ್ಯದ ಜನತೆಗೆ ಚೊಂಬು ಕೊಟ್ಟಿದ್ದು ರಾಜ್ಯ ಸರ್ಕಾರ ಎಂದು ಆರೋಪಿಸಿದರು. ಇದನ್ನೂ ವೀಕ್ಷಿಸಿ: : 25 ವರ್ಷದ ಯುವತಿ..46 ವರ್ಷದ ಅಂಕಲ್..!ಲವ್ವರ್ಸ್ ಡೆಡ್..ಅಮ್ಮ ಇನ್ ಜೈಲ್..!