ಮೋದಿ ದೇಶಕ್ಕೆ ಮಾತ್ರವಲ್ಲ, ವಿಶ್ವಕ್ಕೆ ನಾಯಕ: ವಿಜಯೇಂದ್ರ ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಎಂಬುದೆಲ್ಲಾ ಸುಳ್ಳು. ಅಲ್ಪಸಂಖ್ಯಾತ ಮಹಿಳೆಯರಿಗೆ ಗೌರವ ಸಿಗಬೇಕು ಎಂಬ ಕಾರಣಕ್ಕಾಗಿ ತ್ರಿವಳಿ ತಲಾಖ್ ರದ್ದು ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ವರ್ಗದವರನ್ನು ಸಮನಾಗಿ ಕಾಣುತ್ತಾರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ.ವಿಜಯೇಂದ್ರ ಬೆಂಗಳೂರು(ಏ.07):ಪ್ರಧಾನಿ ನರೇಂದ್ರ ಮೋದಿ ಕೇವಲ ದೇಶಕ್ಕೆ ಮಾತ್ರ ನಾಯಕತ್ವ ನೀಡಿಲ್ಲ. ಬದಲಿಗೆ ವಿಶ್ವಕ್ಕೆ ನಾಯಕತ್ವ ಕೊಟ್ಟವರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ.ವಿಜಯೇಂದ್ರ ಬಣ್ಣಿಸಿದ್ದಾರೆ. ಶನಿವಾರ ಬಿಜೆಪಿಯ 44ನೇ ಸಂಸ್ಥಾಪನಾ ದಿನ ಪ್ರಯುಕ್ತ ಪಕ್ಷದ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಎಂಬುದೆಲ್ಲಾ ಸುಳ್ಳು. ಅಲ್ಪಸಂಖ್ಯಾತ ಮಹಿಳೆಯರಿಗೆ ಗೌರವ ಸಿಗಬೇಕು ಎಂಬ ಕಾರಣಕ್ಕಾಗಿ ತ್ರಿವಳಿ ತಲಾಖ್ ರದ್ದು ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ವರ್ಗದವರನ್ನು ಸಮನಾಗಿ ಕಾಣುತ್ತಾರೆ ಎಂದರು. ಪ್ರಚಾರದಲ್ಲಿ ಮೋದಿ ಫೋಟೋ ಬಳಕೆಗೆ ಕೋರ್ಟ್ ಮೊರೆ ಹೋದ ಈಶ್ವರಪ್ಪ, ಬಳಸುವ ಹಕ್ಕಿಲ್ಲ ಎಂದ ಅಶೋಕ್ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ನರೇಂದ್ರ ಮೋದಿಯವರು ನೀಡಿದ ಕಾರ್ಯಕ್ರಮಗಳ ಬಗ್ಗೆ ಮನೆ ಮನೆಗೆ ತಿಳಿಸಬೇಕು. ಯೋಧರ ರೀತಿಯಲ್ಲಿ ನಾವು ಸಂಘಟಿತರಾಗಿ ಕೆಲಸ ವಾತವರಣಮಾಡಬೇಕು. ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿಯಾಗುವುದನ್ನು ನೋಡುವುದಕ್ಕೆ ಬಹಳ ದಿನಗಳು ದೂರ ಇಲ್ಲ. ಬಿಜೆಪಿ- ಜೆಡಿಎಸ್ 28 ಕ್ಷೇತ್ರಗಳಲ್ಲಿ ಗೆಲ್ಲುವ ಇದೆ. ಮೋದಿಯವರ ಜನಪ್ರಿಯತೆಯನ್ನು ಮತವಾಗಿ ಪರಿವರ್ತನೆ ಮಾಡಬೇಕು ಎಂದು ಕರೆ ನೀಡಿದರು.