ಛತ್ತೀಸ್‌ಘಡದಿಂದ ರಾಜ್ಯಕ್ಕೆ ಬೀಸಿದ ಉಷ್ಣ ಅಲೆಗಳು; 18 ಮುಂಜಾಗ್ರತೆ ಕ್ರಮಗಳ ಪಟ್ಟಿ ಬಿಡುಗಡೆ ಮಾಡಿದ ಹವಾಮಾನ ಇಲಾಖೆ ಛತ್ತೀಸ್‌ಘಡದಿಂದ ಗಾಳಿ ಸ್ಥಗಿತ, ಆರ್ದ್ರತೆ ಹಾಗೂ ಉಷ್ಣ ಅಲೆಗಳು ಕರ್ನಾಟಕಕ್ಕೆ ಬೀಸಲಿದ್ದು, ಆರ್ದ್ರತೆ ಮತ್ತು ಉಷ್ಣಾಂಶ ಹೆಚ್ಚಾಗಲಿದೆ. ಜನರು ಈ 18 ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರು (ಏ.06):ಪೂರ್ವ ವಿದರ್ಭದಿಂದ ಕೊಮೊರಿನ್ ಪ್ರದೇಶದವರೆಗೆ ಇರುವ ಗಾಳಿ ಸ್ಥಗಿತವು ಈಗ ದಕ್ಷಿಣ ಛತ್ತೀಸ್‌ಗಢದಿಂದ ಕೊಮೊರಿನ್ ಪ್ರದೇಶಕ್ಕೆ ವಿದರ್ಭ ಮರಾಠವಾಡ, ಕರ್ನಾಟಕದ ಒಳನಾಡು ಮತ್ತು ತಮಿಳುನಾಡಿನ ಮೂಲಕ ಸಾಗುತ್ತದೆ. ಅದು 0.9 ಕಿ.ಮೀ ಸರಾಸರಿ ಸಮುದ್ರ ಮಟ್ಟಕ್ಕಿಂತ ಮೇಲಿರುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ (ಏ.10ರವರೆಗೆ) ತಾಪಮಾನದಲ್ಲಿ ತೀವ್ರ ಹೆಚ್ಚಳವಾಗಲಿದ್ದು, ಸಾರ್ವಜನಿಕರು ಈ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವ ಮೂಲಕ ಆರೋಗ್ಯದ ಮೇಲಾಗುವ ದುಷ್ಪರಿಣಾಮದಿಂದ ಪಾರಾಗಬೇಕು ಎಂದು ಸೂಚನೆ ನೀಡಿದೆ. ರಾಜ್ಯದಲ್ಲಿ ಗಾಳಿ ಸ್ಥಗಿತದಿಂದಾಗಿ ಗರಿಷ್ಠ ಆರ್ದ್ರತೆ ಮತ್ತು ಗರಿಷ್ಠ ತಾಪಮಾನ ದಾಖಲಾಗುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಉತ್ತರ ಬೀದರ್, ಬಾಗಲಕೋಟೆ, ಗದಗ, ಗುಲ್ಬರ್ಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಹಾವೇರಿ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಲ್ಲಿ ಉಷ್ಣ ಅಲೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ರಾಯಚೂರು ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ವಾತಾವರಣವು ಇರುವ ಸಾಧ್ಯತೆಯಿದೆ. ನಾಳೆಯಿಂದ 5 ದಿನ ಕರ್ನಾಟಕದಲ್ಲಿ ಮಳೆ ಸಾಧ್ಯತೆ ಈ ಹಿನ್ನೆಲೆಯಲ್ಲಿ ಗರಿಷ್ಠ ತಾಪಮಾನವು ಮುಂದಿನ 4 ದಿನಗಳಲ್ಲಿ ಕರ್ನಾಟಕದ ಒಳನಾಡಿನ ಒಂದೆರಡು ಸ್ಥಳಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ನಿಂದ ಸುಮಾರು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ನಂತರದ 3 ದಿನಗಳ ಕಾಲ ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಕ್ರಮೇಣ 2 ಡಿಗ್ರಿ ಸೆಲ್ಸಿಯಸ್ ಇಳಿಕೆಯಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಚಿಕ್ಕ ಮಕ್ಕಳು, ವೃದ್ಧರು ಹಾಗೂ ಕೋಮಾರ್ಬಿಡಿಟೀಸ್ (ಧೀರ್ಘಕಾಲಿಕ ರೋಗಗಳು) ಹೊಂದಿರುವವರು ಎಚ್ಚರಿಕೆ ಇರುವಂತೆ ಹಾಗೂ ದೂರದ ಪ್ರಯಾಣ ಮಾಡದಂತೆ ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಸೂಚಿಸಿದ ಸಲಹೆಗಳು: ಹಲವು ರಾಜ್ಯಗಳಲ್ಲಿ ಭಾರಿ ಸೆಖೆ ಬಿಸಿಗಾಳಿ: ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮಾಹಿತಿ ಸನ್‌ಸ್ಟ್ರೋಕ್‌ನಿಂದ ಪೀಡಿತ ವ್ಯಕ್ತಿಯ ಚಿಕಿತ್ಸೆಗಾಗಿ ಸಲಹೆಗಳು: ಅಪಾಯದಲ್ಲಿರುವ ಜನರು ಯಾರು?: