ಹೃದಯ ಶಸ್ತ್ರಚಿಕಿತ್ಸೆಗಾಗಿ ಇಂದು ಕುಮಾರಸ್ವಾಮಿ ಚೆನ್ನೈಗೆ 25ರಂದು ಬೆಂಗಳೂರಿಗೆ ಹಿಂತಿರುಗಲಿದ್ದಾರೆ. ಬೆಂಗಳೂರಿಗೆ ಬಂದ ಬಳಿಕ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆದು ನಂತರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಆರೋಗ್ಯದ ದೃಷ್ಟಿ ಯಿಂದ ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆಯಾದರೂ ಶಸ್ತ್ರಚಿಕಿತ್ಸೆ ಬಳಿಕವೇ ಈ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ. ಬೆಂಗಳೂರು(ಮಾ.19):ಹೃದಯ ಸಂಬಂಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆಗೆ ಒಳಪಡಬೇಕಾಗಿರುವ ಹಿನ್ನೆಲೆಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಚೆನ್ನೈಗೆ ತೆರಳಲಿದ್ದಾರೆ. ಇದೇ 21ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಮಂಗಳವಾರ ಚೆನ್ನೈಗೆ ತೆರಳಿ ಆಸ್ಪತ್ರೆಗೆ ದಾಖಲಾಗಲಿದ್ದಾರೆ. ಮಂಗಳವಾರ ಆರೋಗ್ಯ ತಪಾಸಣೆ ನಡೆಸಲಾಗುವುದು. ಕೆಲವು ಪರೀಕ್ಷೆ ನಡೆಸಿದ ಬಳಿಕ 21ರಂದು ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಇದೇ 24ರವರೆಗೆ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಬಿಜೆಪಿ- ಜೆಡಿಎಸ್ ಸೀಟು ಹಂಚಿಕೆ: ಅಮಿತ್‌ ಶಾ, ಕುಮಾರಸ್ವಾಮಿ ಚರ್ಚೆ 25ರಂದು ಬೆಂಗಳೂರಿಗೆ ಹಿಂತಿರುಗಲಿದ್ದಾರೆ. ಬೆಂಗಳೂರಿಗೆ ಬಂದ ಬಳಿಕ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆದು ನಂತರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಆರೋಗ್ಯದ ದೃಷ್ಟಿ ಯಿಂದ ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆಯಾದರೂ ಶಸ್ತ್ರಚಿಕಿತ್ಸೆ ಬಳಿಕವೇ ಈ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.