: ನಮ್ಮ ಪಕ್ಷದ ಕೆಲವರಿಂದಲೇ ಟಿಕೆಟ್‌ ತಪ್ಪಿಸಲು ಷಡ್ಯಂತ್ರ: ಶೋಭಾ ಕರಂದ್ಲಾಜೆ ಪಕ್ಷದ ಅಥವಾ ಸರ್ಕಾರದ ಕೆಲಸ ಕೊಡಲಿ ಪ್ರಮಾಣಿಕ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ. ನಮ್ಮ ಶ್ರಮ, ನಮ್ಮ ಕೆಲಸ ಗುರುತಿಸುತ್ತೆ ಎಂಬುದಕ್ಕೆ ನಾನೇ ಉದಾಹರಣೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಬೆಳಗಾವಿ: ನನಗೆ ಟಿಕೆಟ್ ತಪ್ಪಿಸಲು ಪಿತೂರಿ ನಡೆಯುತ್ತಿದೆ. ಯಾವಾಗ ವಿರೋಧ ವ್ಯಕ್ತವಾಗುತ್ತೋ ಆಗಲೇ ನಮ್ಮ ನಾಯಕರು ಮಾಹಿತಿ ಕಲೆ ಹಾಕ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ( ) ಬೆಳಗಾವಿಯಲ್ಲಿ() ಹೇಳಿದ್ದಾರೆ. ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ‌ಕೆಲಸ ಮಾಡ್ತಿದ್ದಾರೆ,‌ ಪಕ್ಷ ಕೆಲಸ ಮಾಡುತ್ತಾರೆ ಎಂದಷ್ಟೇ ‌ಹೇಳ್ತಾರೆ. ಆಗಲೇ ಸತ್ಯ ಗೊತ್ತಾಗೋದು, ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಗೊತ್ತಾಗುತ್ತವೆ. ನಾವೇನು ಮಾಡಿಲ್ಲ, ಏನನ್ನು ಮಾಡಬಾರದು ಎಂಬುದು ಇಂಥ ವರದಿ ಪಡೆಯುವುದರಿಂದ ಗೊತ್ತಾಗುತ್ತದೆ. ಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ. ಅದಕ್ಕಾಗಿ ನಮ್ಮ ಹೈಕಮಾಂಡ್‌ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್() ಸಿಗುತ್ತದೆ ಎಂದು ಅವರು ಹೇಳಿದರು.ಇದನ್ನೂ ವೀಕ್ಷಿಸಿ:ಟೈಮ್ಸ್‌ನೌ-ಇಟಿಜಿ ಜಂಟಿ ಸಮೀಕ್ಷೆ ಪ್ರಕಾರ ಯಾರಿಗೆಷ್ಟು ಸ್ಥಾನ ? ರಾಜ್ಯದಲ್ಲಿ ಕಾಂಗ್ರೆಸ್‌ ಎಷ್ಟು ಸೀಟು ಗೆಲ್ಲಲಿದೆ ? ಬೆಳಗಾವಿ: ನನಗೆ ಟಿಕೆಟ್ ತಪ್ಪಿಸಲು ಪಿತೂರಿ ನಡೆಯುತ್ತಿದೆ. ಯಾವಾಗ ವಿರೋಧ ವ್ಯಕ್ತವಾಗುತ್ತೋ ಆಗಲೇ ನಮ್ಮ ನಾಯಕರು ಮಾಹಿತಿ ಕಲೆ ಹಾಕ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ( ) ಬೆಳಗಾವಿಯಲ್ಲಿ() ಹೇಳಿದ್ದಾರೆ. ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ‌ಕೆಲಸ ಮಾಡ್ತಿದ್ದಾರೆ,‌ ಪಕ್ಷ ಕೆಲಸ ಮಾಡುತ್ತಾರೆ ಎಂದಷ್ಟೇ ‌ಹೇಳ್ತಾರೆ. ಆಗಲೇ ಸತ್ಯ ಗೊತ್ತಾಗೋದು, ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಗೊತ್ತಾಗುತ್ತವೆ. ನಾವೇನು ಮಾಡಿಲ್ಲ, ಏನನ್ನು ಮಾಡಬಾರದು ಎಂಬುದು ಇಂಥ ವರದಿ ಪಡೆಯುವುದರಿಂದ ಗೊತ್ತಾಗುತ್ತದೆ. ಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ. ಅದಕ್ಕಾಗಿ ನಮ್ಮ ಹೈಕಮಾಂಡ್‌ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್() ಸಿಗುತ್ತದೆ ಎಂದು ಅವರು ಹೇಳಿದರು. ಇದನ್ನೂ ವೀಕ್ಷಿಸಿ:ಟೈಮ್ಸ್‌ನೌ-ಇಟಿಜಿ ಜಂಟಿ ಸಮೀಕ್ಷೆ ಪ್ರಕಾರ ಯಾರಿಗೆಷ್ಟು ಸ್ಥಾನ ? ರಾಜ್ಯದಲ್ಲಿ ಕಾಂಗ್ರೆಸ್‌ ಎಷ್ಟು ಸೀಟು ಗೆಲ್ಲಲಿದೆ ?