ಇಸ್ರೋದಿಂದ ಮರುಬಳಕೆ ಮಾಡಬಹುದಾದ ಲಾಂಚ್ ವೆಹಿಕಲ್ ಯಶಸ್ವಿ ಪ್ರಯೋಗ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದು ಕರ್ನಾಟಕದ ಚಿತ್ರದುರ್ಗದಲ್ಲಿ ಮರುಬಳಕೆ ಮಾಡಬಹುದಾದ ಲಾಂಚ್ ವೆಹಿಕಲ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಕುದಾಪುರ ಗ್ರಾಮದಲ್ಲಿ ಈ ಯಶಸ್ವಿ ಪ್ರಯೋಗ ನಡೆದಿದೆ. ಬೆಂಗಳೂರು/ಚಿತ್ರದುರ್ಗ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದು ಕರ್ನಾಟಕದ ಚಿತ್ರದುರ್ಗದಲ್ಲಿ ಮರುಬಳಕೆ ಮಾಡಬಹುದಾದ ಲಾಂಚ್ ವೆಹಿಕಲ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಕುದಾಪುರ ಗ್ರಾಮದಲ್ಲಿ ಈ ಯಶಸ್ವಿ ಪ್ರಯೋಗ ನಡೆದಿದೆ. ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ ಸ್ವಾಯತ್ತ ಲ್ಯಾಂಡಿಂಗ್ ಮಿಷನ್ ಅನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ. ಇಂದು ಬೆಳಗ್ಗೆ ಏರೋನಾಟಿಕಲ್ ಟೆಸ್ಟ್ ರೇಂಜ್ () ನಿಂದ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ ಸ್ವಾಯತ್ತ ಲ್ಯಾಂಡಿಂಗ್ ಮಿಷನ್ ( ) ಅನ್ನು ಯಶಸ್ವಿಯಾಗಿ ಪ್ರಯೋಗ ನಡೆಸಲಾಯಿತು. ವಿಶ್ವದಲ್ಲಿಯೇ ಮೊದಲ ಬಾರಿಗೆ, ರೆಕ್ಕೆಯುಳ್ಳ ದೇಹವನ್ನು ಹೆಲಿಕಾಪ್ಟರ್ ಮೂಲಕ 4.5 ಕಿಮೀ ಎತ್ತರಕ್ಕೆ ಕೊಂಡೊಯ್ಯಲಾಯಿತು ಅಲ್ಲದೇ ರನ್‌ವೇಯಲ್ಲಿ ಸ್ವಯಂ ಲ್ಯಾಂಡಿಂಗ್ ಮಾಡಲು ಬಿಡಲಾಯಿತು ಎಂದು ಇಸ್ರೋ ಟ್ವೀಟ್ ಮಾಡಿದೆ.