: ಆಭರಣ ಕೊಳ್ಳೋರಿಗೆ ಇದೇ ಬೆಸ್ಟ್‌ ಟೈಂ: ಚಿನ್ನದ ದರದಲ್ಲಿ ಮತ್ತಷ್ಟು ಇಳಿಕೆ ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 30th 2023: ದೇಶದಲ್ಲಿ ಶುಭ ಸಮಾರಂಭಗಳು ಹೆಚ್ಚಿರುವಂತೆ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ - ಇಳಿಕೆಯಾಗುತ್ತಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ - ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ () ಬಂಗಾರ (), ಬೆಳ್ಳಿ () ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ () ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇದನ್ನು ಓದಿ: : ವೀಕೆಂಡ್‌ನಲ್ಲಿ ನಿಮ್ಮ ನಗರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಎಷ್ಟಿದೆ ನೋಡಿ.. ಇಂದು ದೇಶದಲ್ಲಿ () ಬಂಗಾರದ ದರದಲ್ಲಿ ಇಳಿಕೆಯಾಗಿದೆ. ಇನ್ನು, ಬೆಳ್ಳಿ ದರದಲ್ಲಿ ದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ ಬೆಂಗಳೂರಲ್ಲಿ ಇಳಿಕೆಯಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,36424 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,852 ಇದನ್ನೂ ಓದಿ:7 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದ ಚಿನ್ನದ ಬೆಲೆ: ಬಂಗಾರ ಹೂಡಿಕೆ ಮಾಡ್ಬೋದಾ, ಬೇಡ್ವಾ.. ಇಲ್ಲಿದೆ ಟಿಪ್ಸ್‌! ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 42,91224 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 46,816 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 53,64024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 58,520 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,36,40024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,85,200 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 53,640 ಆಗಿದ್ದು ನಿನ್ನೆಗಿಂತ ಬೆಲೆ ಇಳಿಕೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 53,890, ರೂ. 53,640 ಹಾಗೂ 53,640 ರೂ. ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಶನಿವಾರ 53,790 ರೂ. ಆಗಿದ್ದು, ಬೆಲೆಯಲ್ಲಿ ಇಳಿಕೆಯಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಯಥಾಸ್ಥಿತಿ ಕಾಯ್ದುಕೊಂಡಿದೆ.. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಕಡಿಮೆಯಾಗಿದ್ದರೆ, ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆದರೆ, ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಹೆಚ್ಚಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 735, ರೂ. 7,350 ಹಾಗೂ ರೂ. 73,500 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 77,500 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 74,700 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 74,700 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 74,700 ರೂ. ಆಗಿದ್ದು, ದೇಶದಲ್ಲಿ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ.