2023: ರಾಷ್ಟ್ರೀಯ ಸ್ಮಾರಕಗಳಿಗೆ ರಾತ್ರಿ ವೇಳೆ ಪ್ರವಾಸ ವ್ಯವಸ್ಥೆಗೆ ಸರ್ಕಾರ ಪ್ಲ್ಯಾನ್‌ ಮೈಸೂರಿನಲ್ಲಿ ಎರಡೂವರೆ ಎಕರೆ ಭೂಮಿಯಲ್ಲಿ ಕರ್ನಾಟಕ ಪುರಾತತ್ವ ವಸ್ತುಸಂಗ್ರಹಾಲಯ ಮತ್ತು ಕಲಾಗ್ಯಾಲರಿ ನಿರ್ಮಾಣ ಸೇರಿ ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಬಜೆಟ್‌ನಲ್ಲಿ ಹತ್ತು ಹಲವು ಯೋಜನೆಗಳನ್ನು ಘೋಷಿಸಲಾಗಿದೆ ಬೆಂಗಳೂರು (ಜು.08):ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಕಲ್ಪನೆಗಳ ಅನುಷ್ಠಾನಕ್ಕೆ ಮಾಸ್ಟರ್‌ ಪ್ಲಾನ್‌, ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಬೀಚ್‌ ಪ್ರವಾಸೋದ್ಯಮ ಕಾರ್ಯಪಡೆ ಸ್ಥಾಪನೆ, ಉತ್ತರ ಕರ್ನಾಟಕದ ಕೋಟೆಗಳ ಅಭಿವೃದ್ದಿಗೆ .75 ಕೋಟಿ, ಮೈಸೂರಿನಲ್ಲಿ ಎರಡೂವರೆ ಎಕರೆ ಭೂಮಿಯಲ್ಲಿ ಕರ್ನಾಟಕ ಪುರಾತತ್ವ ವಸ್ತುಸಂಗ್ರಹಾಲಯ ಮತ್ತು ಕಲಾಗ್ಯಾಲರಿ ನಿರ್ಮಾಣ ಸೇರಿ ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಬಜೆಟ್‌ನಲ್ಲಿ ಹತ್ತು ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ರಾಜ್ಯದ ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳಾದ ಹಂಪಿಯ ವಿಜಯವಿಠಲ ದೇವಸ್ಥಾನ, ಬೀದರ್‌ ಕೋಟೆ, ನಂದಿಬೆಟ್ಟದ ಭೋಗನಂದೀಶ್ವರ ದೇವಸ್ಥಾನ, ವಿಜಯಪುರದ ಗೋಲಗುಂಬಜ್‌, ಕಿತ್ತೂರು ಕೋಟೆ ಮತ್ತು ಬಾದಾಮಿ ಗುಹೆಗಳ ಬಳಿ ರಾತ್ರಿ ವೇಳೆ ಪ್ರವಾಸಿಗರ ಭೇಟಿಯನ್ನು ಉತ್ತೇಜಿಸಲು ಹಾಗೂ ಕರ್ನಾಟಕ ರಾಜ್ಯದ ಕಲೆ, ವಾಸ್ತುಶಿಲ್ಪ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೀಮಂತಿಕೆಯನ್ನು ಪ್ರದರ್ಶಿಸಲು 3ಡಿ ಪೊ›ಜೆಕ್ಷನ್‌, ಮಲ್ಟಿಮೀಡಿಯಾ, ಸೌಂಡ್‌ ಮತ್ತು ಲೈಟ್‌ ಷೋ ಯೋಜನೆಯನ್ನು ಕೈಗೊಳ್ಳುವುದಾಗಿ ತಿಳಿಸಲಾಗಿದೆ. 2023: ಬಿಜೆಪಿ ಸರ್ಕಾರವನ್ನು ದ್ವೇಷಿಸುವ ರಿವರ್ಸ್‌ಗೇರ್‌ ಬಜೆಟ್‌: ಬೊಮ್ಮಾಯಿ ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ್ದರಿಂದ ರಾಜ್ಯದ ಪ್ರಮುಖ ಧಾರ್ಮಿಕ ಮತ್ತು ಪಾರಂಪರಿಕ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿರುವುದರಿಂದ ಅಂಥ ಸ್ಥಳಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿಪಡಿಸಲು ಕ್ರಮ, ಕರ್ನಾಟಕವು ಜಾಗತಿಕ ಮಟ್ಟದ ಪ್ರವಾಸಿ ತಾಣವಾಗಿ ಹೊರಹೊಮ್ಮುವ ಸಾಮರ್ಥ್ಯ ಹೊಂದಿದ್ದರೂ, ಅದರ ಸಂಪೂರ್ಣ ಸದ್ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಕಲ್ಪನೆಗಳನ್ನು ಅನುಷ್ಠಾನಗೊಳಿಸಲು ಮಾಸ್ಟರ್‌ ಪ್ಲಾನ್‌ ತಯಾರಿಸಲು ನಿರ್ಧರಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಪ್ರವಾಸಿ ತಾಣಗಳಾದ ಹಂಪಿ, ಮೈಲಾರ, ಗಾಣಗಾಪುರ, ಸನ್ನತಿ ಮತ್ತು ಮಳಖೇಡ, ಬೀದರ್‌, ರಾಯಚೂರು ಹಾಗೂ ಕಲಬುರಗಿ ಕೋಟೆಗಳ ಸಮಗ್ರ ಅಭಿವೃದ್ಧಿಗಾಗಿ .75 ಕೋಟಿ ಅನುದಾನ, ಕಿತ್ತೂರು ಕರ್ನಾಟಕ ಭಾಗದ ಸವದತ್ತಿ ಯಲ್ಲಮ್ಮನ ಗುಡ್ಡ, ದೇವರಗುಡ್ಡ, ಕಪ್ಪತ್ತಗುಡ್ಡ, ಬಾದಾಮಿ ಬನಶಂಕರಿ, ಲಕ್ಕುಂಡಿ ಪ್ರವಾಸಿ ತಾಣಗಳು ಮತ್ತು ಗದಗ ಜಿಲ್ಲೆಯ ಮಾಗಡಿ ಪಕ್ಷಿಧಾಮ ಅಭಿವೃದ್ಧಿಪಡಿಸಲಾಗುವುದು. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಬೀಚ್‌ ಪ್ರವಾಸೋದ್ಯಮ ಕಾರ್ಯಪಡೆ ರಚಿಸಲಾಗುವುದು ಹಾಗೂ ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತೃತ ಯೋಜನೆ ತಯಾರಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ. ಸಸಿಹಿತ್ಲು ಕಡಲ ತೀರವನ್ನು ಅಂತಾರಾಷ್ಟ್ರೀಯ ಸರ್ಫಿಂಗ್‌ ತಾಣವಾಗಿ ಅಭಿವೃದ್ಧಿಪಡಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ. ರಾಜ್ಯದ ವಿವಿಧ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಯಾತ್ರಿನಿವಾಸ, ಡಾರ್ಮಿಟರಿಗಳ ನಿರ್ಮಾಣ. ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣ ದೆಹಲಿಯ ಪ್ರಗತಿ ಮೈದಾನದ ಮಾದರಿಯಲ್ಲಿ ಮೇಲ್ದರ್ಜೆಗೆ, ರಾಜ್ಯದ 16 ವಸ್ತುಸಂಗ್ರಹಾಲಯಗಳನ್ನು ಹಂತ ಹಂತವಾಗಿ ಆಕರ್ಷಕ ಮತ್ತು ಸಂವಾದಾತ್ಮಕವಾಗಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. 2023: ಅಲ್ಪಸಂಖ್ಯಾತರ ಶಿಕ್ಷಣ, ಉದ್ಯೋಗಕ್ಕೆ ಭರ್ಜರಿ ಕೊಡುಗೆ ನೀಡಿದ ಸಿದ್ದರಾಮಯ್ಯ ಈ ಆರ್ಥಿಕ ಸಾಲಿನಲ್ಲಿ ಕಲಬುರಗಿ, ಗದಗ ಮತ್ತು ಬೆಂಗಳೂರಿನ ಸರ್ಕಾರಿ ವಸ್ತುಸಂಗ್ರಹಾಲಯಗಳ ಅಭಿವೃದ್ಧಿಪಡಿಸಲು ಮತ್ತು ವಿಜಯಪುರದಲ್ಲಿರುವ ಆನಂದಮಹಲ್‌ ಕಟ್ಟಡವನ್ನು ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸಲಾಗುವುದು. ಮೈಸೂರಿನ ಚಾಮುಂಡಿವಿಹಾರ ಕ್ರೀಡಾಂಗಣದ ಬಳಿ ಪುರಾತತ್ವ ಇಲಾಖೆ ಸುಪರ್ದಿಯಲ್ಲಿರುವ ಎರಡೂವರೆ ಎಕರೆ ಜಮೀನಿನಲ್ಲಿ ಕರ್ನಾಟಕದ ಶ್ರೀಮಂತ ಕಲೆ ಮತ್ತು ಸಾಂಸ್ಕೃತಿಕ ಪರಂಪರೆ ಪ್ರದರ್ಶಿಸಲು (ಆಗ್ಮೆಂಟೆಡ್‌ ರಿಯಾಲಿಟಿ ಮತ್ತು ವರ್ಚುವಲ್‌ ರಿಯಾಲಿಟಿ) ತಂತ್ರಜ್ಞಾನದೊಂದಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಕರ್ನಾಟಕ ಪುರಾತತ್ವ ವಸ್ತುಸಂಗ್ರಹಾಲಯ ಮತ್ತು ಕಲಾಗ್ಯಾಲರಿ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಲಾಗಿದೆ.