2023: ಕಾಂಗ್ರೆಸ್‌ನಿಂದ ಹೊಸ ಶಿಕ್ಷಣ ನೀತಿ, ನೇಮಕಾತಿಯಲ್ಲಿ ಡಿಜಿಲಾಕರ್ ಅಂಕಪಟ್ಟಿ ಕಡ್ಡಾಯ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ಮಂಡಿಸಿದ್ದು, ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಯನ್ನು ಘೋಷಿಸಿದ್ದಾರೆ. ಮುಖ್ಯವಾಗಿ ಹೊಸ ಶಿಕ್ಷಣ ನೀತಿ ಮತ್ತು ನಕಲಿ ಅಂಕಪಟ್ಟಿ ಹಾವಳಿ ತಪ್ಪಿಸಲು ಹೊಸ ಕ್ರಮ ಘೋಷಿಸಿದ್ದಾರೆ. ಬೆಂಗಳೂರು (ಜು.7):ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಬಜೆಟ್ ಮಂಡಿಸಿದ್ದು, ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಯನ್ನು ಘೋಷಿಸಿದ್ದಾರೆ. ನಕಲಿ ಅಂಕಪಟ್ಟಿ ಹಾವಳಿ ತಪ್ಪಿಸಲು ಅಂಕಪಟ್ಟಿಯನ್ನು ಡಿಜಿಲಾಕರ್‌ ಸಿಸ್ಟಮ್ ಗೆ ವರ್ಗಾಯಿಸಲು ತೀರ್ಮಾನಿಸಿದ್ದಾರೆ. ಇದರ ಜೊತೆಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತೆಗೆದು ಹಾಕಿ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವಂತಹ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿದೆ. ಬಹುಧರ್ಮ, ಬಹುಭಾಷೆ, ಬಹುಸಂಸ್ಕೃತಿ ಇರುವ ನಮ್ಮ ದೇಶಕ್ಕೆ ಏಕರೂಪದ ಶಿಕ್ಷಣ ವ್ಯವಸ್ಥೆ ಹೊಂದಿಕೊಳ್ಳುವುದಿಲ್ಲ. ರಾಜ್ಯದ ಆಸ್ಮಿತೆಯನ್ನು ಎತ್ತಿ ಹಿಡಿಯುವ, ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ನೀಡಿ ಯುವಜನರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡುವ ನಿಟ್ಟಿನಲ್ಲಿ ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶಗಳನ್ನು ಒಳಗೊಂಡ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು ಎಂದು ಬಜೆಟ್‌ನಲ್ಲಿ ಸಿದ್ದರಾಮಯ್ಯ ಘೋಷಿಸಿದ್ದಾರೆ. 2023: ವಿದ್ಯಾರ್ಥಿಗಳಿಗೆ ವಾರದಲ್ಲಿ 2 ದಿನ ಮೊಟ್ಟೆ ವಿತರಣೆ, 10ನೇ ತರಗತಿವರೆಗೆ ವಿಸ್ತರಣೆ ಬೆಂಗಳೂರಿನಲ್ಲಿರುವ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ವಿಶ್ವವಿದ್ಯಾನಿಲಯವನ್ನು () ಉನ್ನತೀಕರಣಗೊಳಿಸಲು ಮೂಲಭೂತ ಸೌಕರ್ಯಕ್ಕಾಗಿ 25 ಕೋಟಿ ರೂ. ಅನುದಾನ ನಕಲಿ ಅಂಕಪಟ್ಟಿ ಹಾವಳಿಯನ್ನು ತಪ್ಪಿಸಲು ರಾಜ್ಯದ ಎಲ್ಲಾ ಉನ್ನತ ಶಿಕ್ಷಣದ ವಿದ್ಯಾರ್ಥಿಗಳು creditsನಲ್ಲಿ ನೋಂದಾಯಿಸಿಕೊಂಡು ಹಾಗೂ ನೇಮಕಾತಿಯಲ್ಲಿ / ನಲ್ಲಿನ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಲು ಕ್ರಮ. ಉನ್ನತ ಶಿಕ್ಷಣ ಇಲಾಖೆಯಡಿ ನಿರ್ಮಿಸಿರುವ 13, 169 ವಿದ್ಯಾರ್ಥಿಗಳ ಸಾಮರ್ಥ್ಯ ಇರುವ 224 ವಸತಿ ನಿಲಯಗಳನ್ನು ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವ ದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ವರ್ಗಾವಣೆ. ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ಶಿಷ್ಯ ವೇತನ ಕಾರ್ಯಕ್ರಮಗಳನ್ನು ಒಗ್ಗೂಡಿಸಿ ಏಕ ಶಿಷ್ಯ ವೇತನ ಕಾರ್ಯಕ್ರಮದಡಿ ನಿರ್ವಹಣೆ ಸಾರ್ವಜನಿಕ ವಿಶ್ವವಿದ್ಯಾಲಯಗಳ ಆಡಳಿತ ವ್ಯವಸ್ಥೆಯನ್ನು ಉತ್ತಮಪಡಿಸಲು 10 ಸುಶಾಸನ ಸೂಚ್ಯಂಕಗಳನ್ನು ( ) ರಚಿಸಲಾಗಿದ್ದು, ಇದರನ್ವಯ ಅತ್ಯುತ್ತಮ ಸಾಧನೆ ಮಾಡುವ ವಿಶ್ವವಿದ್ಯಾಲಯಗಳಿಗೆ ತಲಾ 50 ಲಕ್ಷ ರೂ. ಗಳಂತೆ ಪ್ರೋತ್ಸಾಹ ಧನ ವಿತರಣೆ. 2023: ನೇಕಾರರಿಗೆ 250 ಯುನಿಟ್‌ ವಿದ್ಯುತ್‌ ಉಚಿತ ವೃತ್ತಿ ಚೈತನ್ಯ ಯೋಜನೆಯಡಿಯಲ್ಲಿ ಇಲಾಖೆಯ ಸುಮಾರು 7,800 ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ಕಾರ್ಯಕ್ರಮಗಳನ್ನು ಧಾರವಾಡದ ಉನ್ನತ ಶಿಕ್ಷಣ ಅಕಾಡೆಮಿಯಲ್ಲಿ 10 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಆಯೋಜನೆ ಮಾಡಲು ತೀರ್ಮಾನ. ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ., ಸೀಟುಗಳನ್ನು ಭರ್ತಿ ಮಾಡುವ ವಿಧಾನದಲ್ಲಿ ಏಕರೂಪತೆಯನ್ನು ತರಲಾಗುವುದು, ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯಗಳ .. ಸೀಟುಗಳಿಗೆ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಶೇ.40 ಸೀಟುಗಳಿಗೆ ಕೌನ್ಸ್ಲಿಂಗ್ ನಡೆಸಲಾಗುವುದು. ಬೆಂಗಳೂರಿನ ಎಸ್.ಕೆ.ಎಸ್.ಪಿ.ಟಿ. ಕಾಲೇಜಿನಲ್ಲಿರುವ ಜವಳಿ ತಂತ್ರಜ್ಞಾನ ವಿಭಾಗವನ್ನು ರಾಷ್ಟ್ರೀಯ ಅಭಿಯಾನ ಮತ್ತು ಪಿಎಂ-ಮಿತ ಆಗಿ ಉನ್ನತೀಕರಣ ರಾಜ್ಯದ ಎಲ್ಲಾ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬ್ರಿಟಿಷ್ ಕೌನ್ಸಿಲ್ ಮತ್ತು ಪ್ರಾದೇಶಿಕ ಆಂಗ್ಲ ಸಂಸ್ಥೆಯ ಸಹಕಾರದೊಂದಿಗೆ ವ್ಯಾವಹಾರಿಕ ಇಂಗ್ಲಿಷ್ ತರಗತಿಗಳ ಪ್ರಾರಂಭ. ಉನ್ನತ ಶಿಕ್ಷಣ ಪಡೆಯಲು ಇರುವ ಭಾಷೆಯ ತೊಡಕು ನಿವಾರಿಸಲು ಕರ್ನಾಟಕದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ವ್ಯಾಪಕ ಬಳಕೆಯಲ್ಲಿರುವ ರೆಫರೆನ್ಸ್ ಪುಸ್ತಕಗಳನ್ನು ಹಾಗೂ ಪಠ್ಯ ವಿಷಯಗಳನ್ನು ಭಾಷಾಂತರಿಸಲು ಕ್ರಮ.