ಕರ್ನಾಟಕದ 'ಶಕ್ತಿ ಯೋಜನೆ' ಅಧಿಕೃತ ಆರಂಭ: ಮಹಿಳೆಯರಿಗೆ ಬಸ್‌ನಲ್ಲಿ ಫ್ರೀ ಟಿಕೆಟ್‌ ಶುರು ರಾಜ್ಯ ಕಾಂಗ್ರೆಸ್‌ ಸರ್ಕಾರದ ಮೊದಲ ಗ್ಯಾರಂಟಿಯಾದ ಉಚಿತ ಬಸ್‌ ಪ್ರಯಾಣದ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಿದರು. ಬೆಂಗಳೂರು (ಜೂ.11):ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕೃತ ಚಾಲನೆ ನೀಡಿದರು. ಬೆಂಗಳೂರಿನ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ನಂತರ ಶಕ್ತಿ ಯೋಜನೆಯ ಲಾಂಚನ ಮತ್ತು ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಬಿಡುಗಡೆ ಮಾಡಿದರು. ಇದೇ ವೇಳೆ ಸಾಂಕೇತಿಕವಾಗಿ ಕೆಲವು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದರು. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲೈಂಗಿಕ ಅಲ್ಪಸಂಖ್ಯಾತರು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯ ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅಧಿಕೃತ ಚಾಲನೆ ನೀಡಲಾಗಿದೆ. ಇನ್ನು ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿ. ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಸಚಿವರಾದ ಕೆ. ಜೆ. ಜಾರ್ಜ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕರಾದ ರಿಜ್ವಾನ್ ಅರ್ಷದ್, ಗೋವಿಂದರಾಜ್, ಬಿ ಕೆ ಹರಿಪಸ್ರಾದ್, ಯು. ಬಿ. ವೆಂಕಟೇಶ್, ನಾಗರಾಜ್ ಯಾದವ್ ಹಾಗೂ ಎ. ಸಿ. ವೆಂಕಟೇಶ ಉಪಸ್ಥಿತರಿದ್ದರು. ಬಸ್ಸಿನಲ್ಲಿ ಶೋಭಾ ಕರಂದ್ಲಾಜೆಗೂ ಫ್ರೀ ಎಂದ ಕಾಂಗ್ರೆಸ್‌ಗೆ ಕೇಂದ್ರ ಸಚಿವೆ ತರಾಟೆ ಜೂ.11ರಿಂದ ಬಸ್‌ಗಳಲ್ಲಿ ಉಚಿತ ಪ್ರಯಾಣ: ಮಹಿಳೆಯರ ಅನುಮಾನಕ್ಕೆ ಕ್ಲಾರಿಟಿ ನೀಡಿದ ಸಚಿವರು!