ಆಧಾರ್ ಕಾರ್ಡ್ ಉಚಿತ ಅಪ್ಡೇಟ್ ಗೆ ಜೂ.14ರ ತನಕ ಮಾತ್ರ ಅವಕಾಶ; ಅಪ್ಡೇಟ್ ಮಾಡೋದು ಹೇಗೆ? ಆಧಾರ್ ಕಾರ್ಡ್ ನಲ್ಲಿ ಮಾಹಿತಿಗಳನ್ನು ಅಪ್ಡೇಟ್ ಮಾಡಬೇಕಿದ್ದರೆ ಈಗಲೇ ಮಾಡಿಬಿಡಿ. ಏಕೆಂದರೆ ಆನ್ ಲೈನ್ ನಲ್ಲಿ ಆಧಾರ್ ಮಾಹಿತಿ ನವೀಕರಣಕ್ಕೆ ಯಾವುದೇ ಶುಲ್ಕ ಪಾವತಿಸಬೇಕಿಲ್ಲ.ಆದರೆ, ಈ ಅವಕಾಶ ಜೂ.14ರ ತನಕ ಮಾತ್ರ ಲಭ್ಯವಿದೆ. ಆ ಬಳಿಕ ಈ ಹಿಂದಿನಂತೆ ಶುಲ್ಕ ಪಾವತಿಸಬೇಕಿದೆ. :ದೇಶದಲ್ಲಿ ಆಧಾರ್ ಕಾರ್ಡ್ ಅತೀಮುಖ್ಯ ದಾಖಲೆಗಳಲ್ಲಿ ಒಂದಾಗಿದೆ. ಎಲ್ಲ ಪ್ರಮುಖ ದಾಖಲೆಗಳಿಗೂ ಆಧಾರ್ ಕಾರ್ಡ್ ಲಿಂಕ್ ಮಾಡೋದು ಅಗತ್ಯ. ಈ ನಡುವೆ 10 ವರ್ಷಗಳಿಗಿಂತ ಹಳೆಯದಾದ ಆಧಾರ್ ಕಾರ್ಡ್ ಅಪ್ಡೇಟ್ ಮಾಡೋದು ಕಡ್ಡಾಯ ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ತಿಳಿಸಿದೆ ಕೂಡ. ಅಲ್ಲದೆ, ಯಾವುದೇ ಶುಲ್ಕವಿಲ್ಲದೆ ಆನ್ ಲೈನ್ ಮೂಲಕ ಆಧಾರ್ ಕಾರ್ಡ್ ನಲ್ಲಿ ಮಾಹಿತಿಗಳನ್ನು ಅಪ್ಡೇಟ್ ಮಾಡಲು ಯುಐಡಿಎಐ ಅವಕಾಶ ಕಲ್ಪಿಸಿದೆ. ಮೈ ಆಧಾರ್ ಪೋರ್ಟಲ್ ನಲ್ಲಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಬಹುದು. ಆದರೆ, ಈ ಅವಕಾಶ 2023ರ ಮಾರ್ಚ್ 15ರಿಂದ 2023 ಜೂನ್ 14ರ ತನಕ ಮಾತ್ರ ಲಭ್ಯವಿರಲಿದೆ. ಅಂದ ಹಾಗೇ ಈ ಸೌಲಭ್ಯ ಮೈ ಆಧಾರ್ ಪೋರ್ಟಲ್ ನಲ್ಲಿ ಮಾತ್ರ ಲಭ್ಯವಿದೆ. ಆಧಾರ್ ಕೇಂದ್ರಗಳಲ್ಲಿ ಈಗಲೂ ಈ ಕೆಲಸಕ್ಕೆ 50ರೂ. ಶುಲ್ಕ ಪಾವತಿಸಬೇಕು. ಹೀಗಾಗಿ ಯಾವುದೇ ಶುಲ್ಕವಿಲ್ಲದೆ ಉಚಿತವಾಗಿ ಆಧಾರ್ ಕಾರ್ಡ್ ನಲ್ಲಿ ಮಾಹಿತಿಗಳನ್ನು ಅಪ್ಡೇಟ್ ಮಾಡಲು ನೀಡಿರುವ ಗಡುವು ಪೂರ್ಣಗೊಳ್ಳಲು ಇನ್ನು ಕೆಲವು ದಿನಗಳಷ್ಟೇ ಬಾಕಿ ಉಳಿದಿವೆ. 10 ವರ್ಷಗಳ ಹಿಂದೆ ನೀಡಲಾದ ಹಾಗೂ ಈ ತನಕ ಅಪ್ಡೇಟ್ ಮಾಡಲಾಗದ ಆಧಾರ್ ಕಾರ್ಡ್ ಗಳನ್ನು ನವೀಕರಿಸಲು ಯುಐಡಿಎಐ ಉತ್ತೇಜನ ನೀಡುತ್ತಿದೆ. ಯಾರು ಅಪ್ಡೇಟ್ ಮಾಡಬೇಕು?ಆಧಾರ್ ಕಾರ್ಡ್ ನಲ್ಲಿ ವ್ಯಕ್ತಿಯ ಬಯೋಮೆಟ್ರಿಕ್ ಡೇಟಾ, ವಿಳಾಸ, ಇಮೇಲ್, ಫೋನ್ ನಂಬರ್ ಹಾಗೂ ಇತರ ಮಾಹಿತಿಗಳಲ್ಲಿ ಯಾವುದೇ ಬದಲಾವಣೆ ಆಗಿದ್ದರೆ ಅವುಗಳನ್ನು ಆಧಾರ್ ನಲ್ಲಿ ಅಪ್ಡೇಟ್ ಮಾಡುವುದು ಅಗತ್ಯ. ಇನ್ನು ಮಗುವಿಗೆ ಆಧಾರ್ ಕಾರ್ಡ್ ಮಾಡಿಸಿದ್ದರೆ ಐದು ವರ್ಷವಾದಾಗ ಹಾಗೂ 15 ವರ್ಷವಾದಾಗ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಅಗತ್ಯ. ಇನ್ನು ಈ ಸನ್ನಿವೇಶಗಳನ್ನು ಹೊರತುಪಡಿಸಿದರೆ ಸದ್ಯ ಯುಐಡಿಎಐ ಸೂಚನೆಯಂತೆ ಆಧಾರ್ ಕಾರ್ಡ್ ಪಡೆದು 10 ವರ್ಷಗಳಾಗಿದ್ದರೆ ಅದನ್ನು ಅಪ್ಡೇಟ್ ಮಾಡುವುದು ಅಗತ್ಯ. : ಕೇವಲ 50ರೂ.ಗೆ ಆನ್ ಲೈನ್ ನಲ್ಲೇ ಆಧಾರ್ ಪಿವಿಸಿ ಕಾರ್ಡ್ ಪಡೆಯಬಹುದು, ಹೇಗೆ? ಆಧಾರ್ ನಲ್ಲಿ ಮಾಹಿತಿ ಅಪ್ಡೇಟ್ ಮಾಡುವುದು ಹೇಗೆ?*ಯುಐಡಿಎಐ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.* ಮೇಲೆ ಕ್ಲಿಕ್ ಮಾಡಿ.*ಆ ಬಳಿಕ ' 'ಆಯ್ಕೆ ಮಾಡಿ.*ನಿಮ್ಮ ಆಧಾರ್ ಸಂಖ್ಯೆ ಹಾಗೂ ನೋಂದಾಯಿತ ಮೊಬೈಲ್ ಸಂಖ್ಯೆ ನಮೂದಿಸಿ.*ಆ ಬಳಿಕ ' 'ಬಟನ್ ಮೇಲೆ ಕ್ಲಿಕ್ ಮಾಡಿ.*ಈಗ ನಿಮ್ಮ ಮೊಬೈಲ್ ಸಂಖ್ಯೆಗೆ ಬಂದಿರುವ ಒಟಿಪಿ ನಮೂದಿಸಿ.* ಬಟನ್ ಮೇಲೆ ಕ್ಲಿಕ್ ಮಾಡಿ.*ನಿಮಗೆ ಯಾವ ಮಾಹಿತಿಯನ್ನು ನವೀಕರಿಸಬೇಕು ಅದನ್ನು ಆಯ್ಕೆ ಮಾಡಿ. ಉದಾಹರಣೆಗೆ ವಿಳಾಸ ಬದಲಾಯಿಸಬೇಕಿದ್ದರೆ ' ' ಆಯ್ಕೆ ಮಾಡಿ.*ಈಗ ನಿಮ್ಮ ವಿಳಾಸ ದೃಢೀಕರಣ ದಾಖಲೆಯ ಸ್ಕ್ಯಾನ್ ಪ್ರತಿ ಅಪ್ಲೋಡ್ ಮಾಡಿ.*ಆ ಬಳಿಕ ''ಬಟನ್ ಮೇಲೆ ಕ್ಲಿಕ್ ಮಾಡಿ.*ಈಗ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಅಪ್ಡೇಟ್ ರಿಕ್ವೆಸ್ಟ್ ಸಂಖ್ಯೆ () ಬರುತ್ತದೆ.*15 ದಿನಗಳೊಳಗೆ ನಿಮ್ಮ ವಿಳಾಸ ಅಥವಾ ಇತರ ಯಾವುದೇ ಮಾಹಿತಿ ಆಧಾರ್ ನಲ್ಲಿ ಅಪ್ಡೇಟ್ ಆಗುತ್ತದೆ. ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ ಆಧಾರ್ 12 ಅಂಕೆಗಳ ವಿಶಿಷ್ಟ ಗುರುತಿನ ಚೀಟಿಯಾಗಿದ್ದು, ಕೇಂದ್ರ ಸರ್ಕಾರ ಇದನ್ನು ದೇಶದ ನಾಗರಿಕರಿಗೆ ನೀಡುತ್ತದೆ. ಆಧಾರ್ ಅನ್ನು ದೇಶದಲ್ಲಿ ಪ್ರಮುಖ ದೃಢೀಕರಣ ದಾಖಲೆಯಾಗಿ ಬಳಸಲಾಗುತ್ತದೆ. ಬ್ಯಾಂಕ್ ಖಾತೆ ತೆರೆಯಲು, ಪಾಸ್ ಪೋರ್ಟ್ ಅಥವಾ ಡ್ರೈವಿಂಗ್ ಲೈಸೆನ್ಸ್, ಮೊಬೈಲ್ ಸಂಪರ್ಕಕ್ಕೆ, ಸರ್ಕಾರದ ಸಬ್ಸಿಡಿಗಳನ್ನು ಪಡೆಯಲು ಹಾಗೂ ಸಮಾಜ ಕಲ್ಯಾಣ ಯೋಜನೆಗಳ ಫಲಾನುಭವಿಯಾಗಲು ಆಧಾರ್ ಕಾರ್ಡ್ ಅತ್ಯಗತ್ಯ. ಒಟ್ಟಾರೆ ಇಂದು ಯಾವುದೇ ಒಂದು ಕೆಲಸಕ್ಕೆ ಹೋದ್ರೂ ಆಧಾರ್ ಕಾರ್ಡ್ ಅಗತ್ಯ.