: ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌: ಚಿನ್ನ, ಬೆಳ್ಳಿ ದರದಲ್ಲಿ ಭಾರಿ ಇಳಿಕೆ ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 6th 2023: ದೇಶದಲ್ಲಿ ಶುಭ ಸಮಾರಂಭಗಳು ಹೆಚ್ಚಿರುವಂತೆ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ - ಇಳಿಕೆಯಾಗುತ್ತಿರುತ್ತದೆ. ಮಹಿಳೆಯರು ಸಾಮಾನ್ಯವಾಗಿ ಆಭರಣ ಪ್ರಿಯರಾಗಿದ್ದು, ಈ ಕಾರಣಕ್ಕಾಗಿ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ಬೆಲೆ ಇಳಿಕೆಯಾದರೆ ಅವರ ಮೊಗದಲ್ಲಿ ನಗು ಅರಳುತ್ತದೆ. ಇನ್ನು, ಷೇರು ಮಾರುಕಟ್ಟೆಯಲ್ಲಿ ಏರಿಕೆ - ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ () ಬಂಗಾರ (), ಬೆಳ್ಳಿ () ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ () ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇದನ್ನು ಓದಿ: : ವೀಕೆಂಡ್‌ನಲ್ಲಿ ಹೊರಗೆ ಹೋಗೋ ಪ್ಲ್ಯಾನ್‌? ನಿಮ್ಮ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ನೋಡಿ.. ಇಂದು ದೇಶದಲ್ಲಿ () ಬಂಗಾರದ ದರದಲ್ಲಿ ಇಳಿಕೆಯಾಗಿದೆ. ಹಾಗೂ, ಬೆಳ್ಳಿ ಬೆಲೆಯಲ್ಲಿ ಸಹ ಕಡಿಮೆಯಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,65524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,169 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 45,24024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 49,352 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 56,55024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 61,690 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,65,55024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,16,900 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 56,550 ಆಗಿದ್ದು ನಿನ್ನೆಗಿಂತ ಬೆಲೆ ಇಳಿಕೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 56,920, ರೂ. 56,500 ಹಾಗೂ ರೂ. 56,500 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಶನಿವಾರ 56,650 ರೂ. ಆಗಿದ್ದು, ಬೆಲೆಯಲ್ಲಿ ಇಳಿಕೆಯಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಕಡಿಮೆಯಾಗಿದ್ದು, ಹಾಗೆ ಬೆಳ್ಳಿ ಬೆಲೆಯಲ್ಲಿ ಸಹ ಇಳಿಕೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 824, ರೂ. 8,240 ಹಾಗೂ ರೂ. 82,400 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 82,400 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 77,700 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 77,700 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 77,700 ರೂ. ಆಗಿದ್ದು, ದೇಶದೆಲ್ಲೆಡೆ ಬೆಳ್ಳಿ ಬೆಲೆಯಲ್ಲಿ ಕಡಿಮೆಯಾಗಿದೆ.