ಅಧಿಕ ಪಿಂಚಣಿ ಅರ್ಜಿ ಸಲ್ಲಿಕೆ ಗಡುವು ಮತ್ತೆ ವಿಸ್ತರಿಸಿದ ; ಜೂ.26ರ ತನಕ ಕಾಲಾವಕಾಶ ಅಧಿಕ ಪಿಂಚಣಿ ಕೋರಿ ಉದ್ಯೋಗಿಗಳು ಹಾಗೂ ಉದ್ಯೋಗದಾತ ಸಂಸ್ಥೆಗಳು ಇಪಿಎಫ್ ಒಗೆ ಅರ್ಜಿ ಸಲ್ಲಿಕೆಗೆ ನೀಡಿದ್ದ ಗಡುವನ್ನು ಮತ್ತೆ ವಿಸ್ತರಿಸಲಾಗಿದೆ. ಈ ಹಿಂದೆ ಮೇ 3ರ ತನಕ ಮಾತ್ರ ಅವಕಾಶ ನೀಡಲಾಗಿತ್ತು. ಈಗ ಈ ಗಡುವನ್ನು ಜೂ.26ರ ತನಕ ವಿಸ್ತರಿಸಲಾಗಿದೆ. :ಉದ್ಯೋಗಿಗಳ ಪಿಂಚಣಿ ಯೋಜನೆ (ಇಪಿಎಸ್ ) ಅಡಿಯಲ್ಲಿ ನಿಗದಿಗಿಂತ ಹೆಚ್ಚಿನ ಮೊತ್ತದ ಪಿಂಚಣಿಗೆ ಅರ್ಜಿ ಸಲ್ಲಿಸಲು ನೀಡಿದ್ದ ಗಡುವನ್ನು ಇಪಿಎಫ್ ಒ ಜೂನ್ 26ರ ತನಕ ವಿಸ್ತರಿಸಿದೆ. ಈ ಮೊದಲು ಮೇ 3ರ ತನಕ ಮಾತ್ರ ಅವಕಾಶ ನೀಡಲಾಗಿತ್ತು. ಇಲ್ಲಿಯ ತನಕ ಅಧಿಕ ಪಿಂಚಣಿ ಕೋರಿ 12 ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದವು. ಉದ್ಯೋಗಿಗಳ ಪಿಂಚಣಿ ಯೋಜನೆ (ಇಪಿಎಸ್) ಅಡಿಯಲ್ಲಿ ನಿವೃತ್ತಿ ಬಳಿಕ ಅಧಿಕ ಪಿಂಚಣಿ ಪಡೆಯಲು ಯಾರು ಅರ್ಹರಾಗಿದ್ದರೋ ಅಂಥ ಉದ್ಯೋಗಿಗಳಿಗೆ ಇಪಿಎಫ್ಒ ಫೆ.20ರಂದು ಮಾರ್ಗಸೂಚಿ ಬಿಡುಗಡೆಗೊಳಿಸಿತ್ತು. ಉದ್ಯೋಗಿಗಳ ಪಿಂಚಣಿ ಯೋಜನೆಗೆ 2014ರಲ್ಲಿ ತಿದ್ದುಪಡಿ ತರಲಾಗಿದ್ದು, ಇದನ್ನು ಸುಪ್ರೀಂ ಕೋರ್ಟ್ ಕೂಡ ಎತ್ತಿ ಹಿಡಿದಿದ್ದು 2022ರ ನವೆಂಬರ್ 4ರಂದು ತೀರ್ಪು ಪ್ರಕಟಿಸಿತ್ತು.ಈ ಹಿನ್ನೆಲೆಯಲ್ಲಿ ಅಧಿಕ ಪಿಂಚಣಿ ಕೋರಿ ಅರ್ಜಿ ಸಲ್ಲಿಸಲು ಇಪಿಎಫ್ ಒ ಅವಕಾಶ ನೀಡಿತ್ತು. ಎಲ್ಲ ಅರ್ಹ ಉದ್ಯೋಗಿಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಬೇಕು ಎಂಬ ಉದ್ದೇಶದಿಂದ ಅರ್ಜಿ ಸಲ್ಲಿಕೆ ಗಡುವನ್ನು ವಿಸ್ತರಿಸಲಾಗಿದೆ. ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಅಂತಿಮ ಗಡುವು ವಿಸ್ತರಿಸಿದ್ದು ಏಕೆ?ಅರ್ಜಿ ಸಲ್ಲಿಕೆ ಗಡುವು ವಿಸ್ತರಿಸುವಂತೆ ಇಪಿಎಫ್ ಒಗೆ ಉದ್ಯೋಗಿಗಳು, ಉದ್ಯೋಗದಾತ ಸಂಸ್ಥೆಗಳು ಹಾಗೂ ಸಂಘಟನೆಗಳು ಅನೇಕ ಮನವಿಗಳನ್ನು ಸಲ್ಲಿಕೆ ಮಾಡಿದ ಹಿನ್ನೆಲೆಯಲ್ಲಿ ಜೂನ್ 26ರ ತನಕ ಕಾಲಾವಕಾಶ ನೀಡಲಾಗಿದೆ. 2014ರ ಆಗಸ್ಟ್ 22ರಂದು ಇಪಿಎಸ್ ಪರಿಷ್ಕರಣೆ ಮಾಡಲಾಗಿದ್ದು, ಪಿಂಚಣಿ ಪಡೆಯಲು ವೇತನ ಮಿತಿಯನ್ನು ತಿಂಗಳಿಗೆ 6,500ರೂ.ನಿಂದ 15,000 ರೂ.ಗೆ ಏರಿಕೆ ಮಾಡಲಾಗಿತ್ತು. ಜೊತೆಗೆ ಉದ್ಯೋಗಿಗಳು ಹಾಗೂ ಉದ್ಯೋಗದಾತ ಸಂಸ್ಥೆಗಳು ಅವರ ವೇತನದ ಶೇ.8.33ರಷ್ಟನ್ನು ಇಪಿಎಸ್ ಗೆ ಕೊಡುಗೆಯಾಗಿ ನೀಡಲು ಅನುಮತಿ ನೀಡಲಾಗಿತ್ತು. :25 ಸಾವಿರ ಮೂಲವೇತನ ಹೊಂದಿರುವ ಉದ್ಯೋಗಿಗೆ ನಿವೃತ್ತಿ ವೇಳೆ ಎಷ್ಟು ಇಪಿಎಫ್ ಸಿಗುತ್ತೆ? ಇಪಿಎಫ್ಒ ನಿನ್ನೆ (ಫೆ.21) ಬಿಡುಗಡೆಗೊಳಿಸಿರುವ ಮಾರ್ಗಸೂಚಿ ಅನ್ವಯ 5,000ರೂ. ಅಥವಾ 6,500 ರೂ. ವೇತನ ಮಿತಿ ಮೀರಿದ ಇಪಿಎಫ್ಒಗೆ ಕೊಡುಗೆ ನೀಡಿದ ಎಲ್ಲ ಉದ್ಯೋಗಿಗಳು ಹಾಗೂ ಉದ್ಯೋಗದಾತರು ಅಧಿಕ ಪಿಂಚಣಿ ಪಡೆಯಲು ಅರ್ಜಿ ಸಲ್ಲಿಸಬಹುದು. ಇನ್ನು ನಿವೃತ್ತಿಗೂ ಮುನ್ನ ಅಧಿಕ ಪಿಂಚಣಿ ಆಯ್ಕೆ ಮಾಡಿಕೊಂಡವರು ಹಾಗೂ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಅಡಿಯಲ್ಲಿ ಅಧಿಕ ವೇತನದ ಕೊಡುಗೆ ನೀಡಿದ ಉದ್ಯೋಗಿಗಳು ಕೂಡ ಅಧಿಕ ಪಿಂಚಣಿ ಸೌಲಭ್ಯ ಪಡೆಯಲು ಅರ್ಹರು. 2014ರ ಸೆಪ್ಟೆಂಬರ್ 1ರಂದು ಇಪಿಎಸ್ ಸದಸ್ಯರಾಗಿರುವ ಉದ್ಯೋಗಿಗಳು 1995ರ ನಿಯಮ 11(3) ಅನ್ವಯ ಹೆಚ್ಚು ಪಿಂಚಣಿ ಪಡೆಯಲು ಅರ್ಹರಾಗಿದ್ದಾರೆ ಎಂದು ಇಪಿಎಫ್ಒ ತಿಳಿಸಿದೆ. ಇವರು ತಮ್ಮ ವೇತನದ ಶೇ.8.33ರಷ್ಟನ್ನು ಪಿಂಚಣಿಗೆ ಕೊಡುಗೆಯಾಗಿ ನೀಡಬಹುದು.ಇನ್ನು 2014ರ ಸೆಪ್ಟೆಂಬರ್ 1ಕ್ಕಿಂತ ಮುನ್ನ ನಿವೃತ್ತಿ ಹೊಂದಿದ ಹಾಗೂ ಅಧಿಕ ಪಿಂಚಣಿ ಆಯ್ಕೆ ಮಾಡದ ಉದ್ಯೋಗಿಗಳು ಈ ಸೌಲಭ್ಯ ಪಡೆಯಲು ಅರ್ಹರಾಗಿಲ್ಲ. ಮ್ಯೂಚುವಲ್ ಫಂಡ್ ನಲ್ಲಿ ಹೂಡಿಕೆ ಮಾಡೋರು ಈ ಸಂಗತಿಗಳನ್ನು ತಿಳಿದಿರೋದು ಅಗತ್ಯ! ಆನ್ ಲೈನ್ ಅರ್ಜಿ ಸಲ್ಲಿಕೆ ಹೇಗೆ?ಹಂತ 1:ಇ-ಸೇವಾ ಪೋರ್ಟಲ್ ಗೆ ಭೇಟಿ ನೀಡಿ.ಹಂತ 2:‘ : 11(3) 11(4) -1995 26, 2023’ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.ಹಂತ 3:ಜಂಟಿ ಆಯ್ಕೆಗಳಿಗೆ ಅರ್ಜಿ ನಮೂನೆಗಳ ಆಯ್ಕೆ ಆರಿಸಿ.ಹಂತ 4:ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ಯುಎಎನ್, ಹೆಸರು, ಜನ್ಮ ದಿನಾಂಕ, ಆಧಾರ್ ಸಂಖ್ಯೆ, ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಹಾಗೂ ಕ್ಯಾಪ್ಚ ಕೋಡ್ ನಮೂದಿಸಿ.ಹಂತ 5:ಅರ್ಜಿ ಭರ್ತಿ ಮಾಡಿದ ಬಳಿಕ ‘’ ಪಡೆಯಲು ಒಂದು ಆಯ್ಕೆ ಇರುತ್ತದೆ. ಅದನ್ನು ಆಯ್ಕೆ ಮಾಡಿ. ಅದು ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ ಬರುತ್ತದೆ.