: ಗಗನ ಮುಟ್ಟಿದ ಬಂಗಾರ, ಬೆಳ್ಳಿ ದರ; ನಿಮ್ಮ ನಗರಗಳಲ್ಲಿ ಇಂದಿನ ಆಭರಣ ದರ ವಿವರ ಹೀಗಿದೆ.. ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 18th 2023:ದೇಶದಲ್ಲಿ ಆಭರಣ ಪ್ರಿಯರ ಸಂಖ್ಯೆಗೇನೂ ಕೊರತೆ ಇಲ್ಲ. ಬಹುತೇಕ ಮಹಿಳೆಯರು ಬಂಗಾರದ ಪ್ರಿಯರು. ಈ ಹಿನ್ನೆಲೆ, ಚಿನ್ನ , ಬೆಳ್ಳಿ ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಮೂಡುವುದಂತೂ ಗ್ಯಾರಂಟಿ. ಆದರೆ, ಕೇಂದ್ರ ಬಜೆಟ್ 2023 ರಲ್ಲಿ ಚಿನ್ನ, ಬೆಳ್ಳಿಯ ಅಬಕಾರಿ ಸುಂಕ ಹೆಚ್ಚಳ ಮಾಡಿದ ಬಳಿಕ ಆಭರಣ ಪ್ರಿಯರಿಗೆ ಮತ್ತಷ್ಟು ಶಾಕ್‌ ಕಾದಿದೆ. ಆದರೂ, ಶುಭ ಸಮಾರಂಭಗಳು ದೇಶದಲ್ಲಿ ಹೆಚ್ಚು ನಡೆಯುವುದರಿಂದಲೂ ಆಭರಣ ವಹಿವಾಟು ನಡೆಯುತ್ತಲೇ ಇರುತ್ತದೆ. ಈ ಕಾರಣಕ್ಕಾಗಿ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ () ಬಂಗಾರ (), ಬೆಳ್ಳಿ () ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ () ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇದನ್ನು ಓದಿ:, : ತುಮಕೂರಲ್ಲಿ ಇಳಿಕೆಯಾದ, ದಾವಣಗೆರೆಯಲ್ಲಿ ಹೆಚ್ಚಾದ ಪೆಟ್ರೋಲ್‌, ಡೀಸೆಲ್‌ ಬೆಲೆ.. ಇಂದು ದೇಶದಲ್ಲಿ () ಬಂಗಾರದ ದರ ತೀವ್ರ ಏರಿಕೆಯಾಗಿದೆ. ಹಾಗೆ, ದೇಶಾದ್ಯಂತ ಬೆಳ್ಳಿ ಬೆಲೆಯಲ್ಲಿ ಸಹ ಭಾರಿ ಏರಿಕೆಯಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,53524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,037 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 44,28024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 48,296 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 55,30024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 60,370 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,53,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,03,700 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 55,350 ಆಗಿದ್ದು, ನಿನ್ನೆಗಿಂತ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 55,600, ರೂ. 55,300 ಹಾಗೂ ರೂ. 55,300 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಶನಿವಾರ 55,450 ರೂ. ಆಗಿದ್ದು, ಬೆಲೆಯಲ್ಲಿ ಹೆಚ್ಚಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಭಾರಿ ಹೆಚ್ಚಳವಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಏರಿಕೆಯಾಗಿದ್ದು, ಅದೇ ರೀತಿ ಬೆಳ್ಳಿ ದರದಲ್ಲಿ ಸಹ ತೀವ್ರ ಹೆಚ್ಚಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 744, ರೂ. 7,440 ಹಾಗೂ ರೂ. 74,400 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 74,400 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 72,100 ಹಾಗೂ ಕೋಲ್ಕತ್ತದಲ್ಲಿ ಸಹ 1 ಕೆಜಿ ಬೆಳ್ಳಿ ದರ ರೂ. 72,100 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 72,100 ರೂ. ಆಗಿದ್ದು, ದೇಶಾದ್ಯಂತ ಬೆಳ್ಳಿ ದರದಲ್ಲಿ ಹೆಚ್ಚಾಗಿದೆ.