:ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬೆಳ್ಳಿ ಬೆಲೆಯಲ್ಲಿ ಏರಿಕೆ ನೀವು ಇಂದು ಚಿನ್ನ ಅಥವಾ ಬೆಳ್ಳಿ ಖರೀದಿಗೆ ಪ್ಲ್ಯಾನ್ ಮಾಡಿದ್ದೀರಾ? ಹಾಗಾದ್ರೆ ಇಂದು ದೇಶದಲ್ಲಿ ಚಿನ್ನ ಹಾಗೂ ಬೆಳ್ಳಿ ದರ ಹೇಗಿದೆ? ಯಾವ ನಗರದಲ್ಲಿ ಚಿನ್ನ ಹಾಗೂ ಬೆಳ್ಳಿ ದರ ಇಳಿಕೆಯಾಗಿದೆ? ಇಲ್ಲಿದೆ ಮಾಹಿತಿ. 22nd 2023:ದೇಶದಲ್ಲಿ ಮತ್ತೊಮ್ಮೆ ಮದುವೆ ಸೀಸನ್ ಪ್ರಾರಂಭಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ಸಹಜವಾಗಿ ಚಿನ್ನ ಹಾಗೂ ಬೆಳ್ಳಿಗೆ ಬೇಡಿಕೆ ಹೆಚ್ಚಲಿದೆ. ಚಿನ್ನ ಹಾಗೂ ಬೆಳ್ಳಿ ಅದೆಷ್ಟೇ ದುಬಾರಿಯಾದ್ರೂ ಮದುವೆಗೆ ಅವೆರಡೂ ಬೇಕೇಬೇಕು. ಹೀಗಾಗಿ ಚಿನ್ನ, ಬೆಳ್ಳಿ ಬೆಲೆ ಏರಿಕೆ ಕಂಡರೂ ಜನ ಖರೀದಿಸಲು ಹಿಂದೆಮುಂದೆ ನೋಡೋದಿಲ್ಲ. ಚಿನ್ನ ಹಾಗೂ ಬೆಳ್ಳಿ ಬೆಲೆ ಸ್ಥಿರವಾಗಿರುವುದು ತುಂಬಾ ಕಡಿಮೆ. ಆಗಾಗ ಬದಲಾವಣೆಯಾಗುತ್ತಲೇ ಇರುತ್ತದೆ. ಹೀಗಿರುವಾಗ ಚಿನ್ನದ ಬೆಲೆ ಇಳಿಕೆಯಾದ್ರಂತೂ ಮಹಿಳೆಯರ ಸಂತಸ ಹೆಚ್ಚುತ್ತದೆ. ತಮ್ಮಿಷ್ಟದ ಒಡವೆ ಖರೀದಿಗೆ ಇದೇ ಸಮಯ ಸೂಕ್ತ ಎಂದು ಖರೀದಿಗೆ ಮುಂದಾಗುತ್ತಾರೆ. ಹೂಡಿಕೆದಾರರಿಗೆ ಚಿನ್ನ, ಬೆಳ್ಳಿ ಹೂಡಿಕೆಯ ಸಾಧನವೂ ಹೌದು. ಹೀಗಿರುವಾಗ ನೀವು ಕೂಡ ಚಿನ್ನ ಖರೀದಿಸುವ ಪ್ಲ್ಯಾನ್ ಹೊಂದಿದ್ರೆ, ಬೆಲೆ ಎಷ್ಟಿದೆ ಎಂದು ತಿಳಿದುಕೊಳ್ಳುವುದು ಉತ್ತಮ. ಹಾಗಾದ್ರೆ ಇಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿ ದರ ಹೇಗಿದೆ? ಇಂದು ಬೆಂಗಳೂರಿನಲ್ಲಿ () ಬಂಗಾರ (), ಬೆಳ್ಳಿ () ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ () ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. , : ಬೆಳಗಾವಿಯಲ್ಲಿ ಇಳಿಕೆಯಾದ, ಶಿವಮೊಗ್ಗದಲ್ಲಿ ಹೆಚ್ಚಾದ ಪೆಟ್ರೋಲ್‌, ಡೀಸೆಲ್‌ ಬೆಲೆ ಇಂದು ದೇಶದಲ್ಲಿ () ಬಂಗಾರದ ದರ ಯಥಾಸ್ಥಿತಿ ಕಾಯ್ದುಕೊಂಡಿದೆ, ಆದರೆ ಬೆಳ್ಳಿಯ ದರ ಏರಿಕೆ ಕಂಡಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,20024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,673 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 41,60024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 45,384 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 52,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 56,730 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,20,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,67,300 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 52,050 ರೂ. ಆಗಿದ್ದು, ನಿನ್ನೆಯಷ್ಟೇ ಇದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 52,750, ರೂ. 52,000 ಹಾಗೂ ರೂ. 52,000 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಬುಧವಾರ 52,150 ರೂ. ಆಗಿದ್ದು, ನಿನ್ನೆಗೆ ಹೋಲಿಸಿದ್ರೆ ಬದಲಾವಣೆಯಾಗಿಲ್ಲ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶಾದ್ಯಂತ ಇಂದು ಬೆಳ್ಳಿ ದರದಲ್ಲಿ ಏರಿಕೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 720, ರೂ. 7,200 ಹಾಗೂ ರೂ. 72,000 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 72,000 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 68,800 ಹಾಗೂ ಕೋಲ್ಕತ್ತದಲ್ಲಿ ಸಹ 1 ಕೆಜಿ ಬೆಳ್ಳಿ ದರ ರೂ. 68,800 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಹ 68,800 ರೂ. ಆಗಿದ್ದು, ಬೆಲೆಯಲ್ಲಿ ಏರಿಕೆಯಾಗಿದೆ.