: ಗಣರಾಜ್ಯೋತ್ಸವದಂದು ಆಭರಣ ಪ್ರಿಯರಿಗೆ ಶಾಕ್; ಮತ್ತೆ ದುಬಾರಿಯಾಯ್ತು ಚಿನ್ನ, ಬೆಳ್ಳಿ ದರ ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 26th 2023:ದೇಶದಲ್ಲಿ ಆಭರಣ ಪ್ರಿಯರ ಸಂಖ್ಯೆಗೇನೂ ಕೊರತೆ ಇಲ್ಲ. ಬಹುತೇಕ ಮಹಿಳೆಯರು ಬಂಗಾರದ ಪ್ರಿಯರು. ಈ ಹಿನ್ನೆಲೆ, ಚಿನ್ನ , ಬೆಳ್ಳಿ ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಮೂಡುವುದಂತೂ ಗ್ಯಾರಂಟಿ. ಶುಭ ಸಮಾರಂಭಗಳು ಸಹ ದೇಶದಲ್ಲಿ ಹೆಚ್ಚು ನಡೆಯುವುದರಿಂದಲೂ ಆಭರಣ ವಹಿವಾಟು ನಡೆಯುತ್ತಲೇ ಇರುತ್ತದೆ. ಈ ಕಾರಣಕ್ಕಾಗಿ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ () ಬಂಗಾರ (), ಬೆಳ್ಳಿ () ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ () ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇದನ್ನು ಓದಿ:, : ಗಣರಾಜ್ಯೋತ್ಸವ ದಿನದಂದು ನಿಮ್ಮ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೀಗಿದೆ.. ಇಂದು ದೇಶದಲ್ಲಿ () ಬಂಗಾರದ ದರದಲ್ಲಿ ಏರಿಕೆ ಕಮಡಿದ್ದು, ಅದೇ ರೀತಿ ಬೆಳ್ಳಿಯ ದರದಲ್ಲೂ ಹೆಚ್ಚಳವಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,31524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,798 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 42,52024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 46,384 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 53,15024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 57,980 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,31,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,79,800 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 53,150 ಆಗಿದ್ದು, ನಿನ್ನೆಗಿಂತ ಬೆಲೆ ಹೆಚ್ಚಳವಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 53,800, ರೂ. 53,100, ರೂ. 53,100 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಗುರುವಾರ 53,250 ರೂ. ಆಗಿದ್ದು, ಬೆಲೆಯಲ್ಲಿ ಹೆಚ್ಚಳವಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಹೆಚ್ಚಳವಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಹೆಚ್ಚಳವಾಗಿದೆ, ಇದೇ ರೀತಿ ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 750, ರೂ. 7,500 ಹಾಗೂ ರೂ. 75,000 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 74,000 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 72,600 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 72,600 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಹ 72,600 ರೂ. ಆಗಿದ್ದು, ಬೆಲೆಯಲ್ಲಿ ಹೆಚ್ಚಳವಾಗಿದೆ.