: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್‌: ಮತ್ತೆ ಗಗನಕ್ಕೇರಿದ ಚಿನ್ನ, ಬೆಳ್ಳಿ ಬೆಲೆ ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 16th 2023:ದೇಶದಲ್ಲಿ ಆಭರಣ ಪ್ರಿಯರ ಸಂಖ್ಯೆಗೇನೂ ಕೊರತೆ ಇಲ್ಲ. ಬಹುತೇಕ ಮಹಿಳೆಯರು ಬಂಗಾರದ ಪ್ರಿಯರು. ಈ ಹಿನ್ನೆಲೆ, ಚಿನ್ನ , ಬೆಳ್ಳಿ ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಮೂಡುವುದಂತೂ ಗ್ಯಾರಂಟಿ. ಶುಭ ಸಮಾರಂಭಗಳು ಸಹ ದೇಶದಲ್ಲಿ ಹೆಚ್ಚು ನಡೆಯುವುದರಿಂದಲೂ ಆಭರಣ ವಹಿವಾಟು ನಡೆಯುತ್ತಲೇ ಇರುತ್ತದೆ. ಈ ಕಾರಣಕ್ಕಾಗಿ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ () ಬಂಗಾರ (), ಬೆಳ್ಳಿ () ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ () ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇದನ್ನು ಓದಿ:, : ತುಮಕೂರಲ್ಲಿ ಇಳಿಕೆಯಾದ, ಉತ್ತರ ಕನ್ನಡದಲ್ಲಿ ಹೆಚ್ಚಾದ ಪೆಟ್ರೋಲ್‌, ಡೀಸೆಲ್‌ ಬೆಲೆ ಇಂದು ದೇಶದಲ್ಲಿ () ಬಂಗಾರದ ದರ ಏರಿಕೆಯಾಗಿದ್ದು, ಅದೇ ರೀತಿ ದೇಶದ ಹಲವೆಡೆ ಬೆಳ್ಳಿಯ ದರದಲ್ಲಿ ಸಹ ಏರಿಕೆಯಾಗಿದೆ. ಇನ್ನೊಂದೆಡೆ, ಬೆಂಗಳೂರಲ್ಲಿ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,22524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,700 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 41,80024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 45,600 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 52,25024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 57,000 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,22,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,70,000 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 52,250 ರೂ. ಆಗಿದ್ದು, ನಿನ್ನೆಯ ಬೆಲೆಗಿಂತ ಮತ್ತೆ ಹೆಚ್ಚಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 53,170, ರೂ. 52,200 ಹಾಗೂ ರೂ., 52,200 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಸೋಮವಾರ 52,350 ರೂ. ಆಗಿದ್ದು, ಬೆಲೆಯಲ್ಲಿ ಏರಿಕೆಯಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಹೆಚ್ಚಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಏರಿಕೆಯಾಗಿದ್ದರೆ, ಅದೇ ರೀತಿ ಬೆಳ್ಳಿ ದರದಲ್ಲಿ ಸಹ ಹೆಚ್ಚಳವಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 758, ರೂ. 7,580 ಹಾಗೂ ರೂ. 75,800 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 75,800 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 73,200 ಹಾಗೂ ಕೋಲ್ಕತ್ತದಲ್ಲಿ ಸಹ 1 ಕೆಜಿ ಬೆಳ್ಳಿ ದರ ರೂ. 73,200 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಹ 73,200 ರೂ. ಆಗಿದ್ದು, ಬೆಲೆಯಲ್ಲಿ ಏರಿಕೆಯಾಗಿದೆ.