ನೋಟು ಬ್ಯಾನ್‌ ತಪ್ಪಲ್ಲ: ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್ ಅಪನಗದೀಕರಣ ತಪ್ಪಲ್ಲ ಎಂದು ತೀರ್ಪು ನೀಡಿದ ಸುಪ್ರೀಂಕೋರ್ಟ್‌, ಕೇಂದ್ರ ಸರ್ಕಾರದ ನೋಟು ಬ್ಯಾನ್‌ ನಿರ್ಧಾರವನ್ನು ಎತ್ತಿ ಹಿಡಿದಿದೆ. ನವದೆಹಲಿ: ಅಪನಗದೀಕರಣ ತಪ್ಪಲ್ಲ ಎಂದು ತೀರ್ಪು ನೀಡಿದ ಸುಪ್ರೀಂಕೋರ್ಟ್‌, ಕೇಂದ್ರ ಸರ್ಕಾರದ ನೋಟು ಬ್ಯಾನ್‌ ನಿರ್ಧಾರವನ್ನು ಎತ್ತಿ ಹಿಡಿದಿದೆ. ಅಪನಗದೀಕರಣ ತಪ್ಪಲ್ಲ ಎಂದು ತೀರ್ಪು ನೀಡಿದ ಸುಪ್ರೀಂಕೋರ್ಟ್‌, ಕೇಂದ್ರ ಸರ್ಕಾರದ ನೋಟು ಬ್ಯಾನ್‌ ನಿರ್ಧಾರವನ್ನು ಎತ್ತಿ ಹಿಡಿದಿದೆ. 2016ರಲ್ಲಿ ಕೇಂದ್ರ ಸರ್ಕಾರ 500 ರು. ಮತ್ತು 1000 ರು. ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿ ಘೋಷಿಸಿದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ 58 ಅರ್ಜಿಗಳ ಕುರಿತು ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ ಈ ತೀರ್ಪು ನೀಡಿದೆ. ಆರ್‌ಬಿಐ ಒಪ್ಪಿಗೆ ಪಡೆದೇ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ತಜ್ಞರ ಸಲಹೆ ಪಡೆದು ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬಹುದಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಇದೇ ಸಂದರ್ಭದಲ್ಲಿ ನೋಟ್ ಬ್ಯಾನ್ ವಿರೋಧಿಸಿ ಸಲ್ಲಿಕೆಯಾದ 58 ಅರ್ಜಿಗಳನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ಇಂದೊಂದು ಆರ್ಥಿಕ ನೀತಿಯಾಗಿರುವುದರಿಂದ ಈ ನಿರ್ಧಾರವನ್ನು ಹಿಂಪಡೆಯಲು ಸಾಧ್ಯವಿಲ್ಲ. ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯು ದೋಷಪೂರಿತವಾಗಿಲ್ಲ. ಆರ್‌ಬಿಐ ಸಲಹೆಯಂತೆ ಕೇಂದ್ರ ನಿರ್ಧಾರ ತೆಗೆದುಕೊಳ್ಳಬಹುದು. ಕೇಂದ್ರದ ನಿರ್ಧಾರದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ. ಅಲ್ಲದೇ ನೋಟು ಅಮಾನ್ಯೀಕರಣ ನಿರ್ಧಾರ ಯಾವುದೇ ಕಾನೂನು ಅಥವಾ ಸಾಂವಿಧಾನಿಕ ದೋಷಗಳಿಂದ ಕೂಡಿಲ್ಲ ಎಂದು ಹೇಳಿದ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಎತ್ತಿ ಹಿಡಿದಿದೆ. ನೋಟು ಬ್ಯಾನ್ ಆದ ಸಂದರ್ಭದಲ್ಲಿ ಜನರು ತಮ್ಮಲ್ಲಿರುವ ಹಳೆ ನೋಟುಗಳನ್ನು ಬದಲಾಯಿಸಿಕೊಳ್ಳಲು ಸರ್ಕಾರ 52 ದಿನಗಳ ಅವಕಾಶ ನೀಡಿತ್ತು. ಯಾರ ಅಭಿಪ್ರಾಯ ಏನು?: ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ, ಕಾಂಗ್ರೆಸ್‌ ನಾಯಕ ಪಿ.ಚಿದಂಬರಂ (. ), ನೋಟುಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ( ) ಏಕಪಕ್ಷೀಯವಾಗಿ, ಸ್ವಯಂ ಯಾವುದೇ ನಿರ್ಧಾರ ತೆಗೆದುಕೊಳ್ಳುವಂತಿಲ್ಲ. ಆರ್‌ಬಿಐನ () ಕೇಂದ್ರೀಯ ಮಂಡಳಿಯ ಶಿಫಾರಸುಗಳ ಅನ್ವಯ ಮಾತ್ರವೇ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳಬಹುದು. ಹೀಗಾಗಿ 2016ರಲ್ಲಿ ಕೇಂದ್ರ ಸರ್ಕಾರ ಘೋಷಿಸಿದ ಅಪನಗದೀಕರಣ ನೀತಿ ತಪ್ಪು ನಿರ್ಧಾರ ಎಂದು ವಾದಿಸಿದ್ದರು. ಮತ್ತೊಂದೆಡೆ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದ ಕೇಂದ್ರ ಸರ್ಕಾರ, ಈ ಪ್ರಕರಣದಲ್ಲಿ ನ್ಯಾಯಾಲಯದ ಮಧ್ಯಪ್ರವೇಶ ಸರಿಯಲ್ಲ ಎಂದಿತ್ತು. ಜೊತೆಗೆ ಸಮಯವನ್ನು ಹಿಂದಕ್ಕೆ ಸರಿಸುವ, ಒಡೆದ ಮೊಟ್ಟೆಯನ್ನು ಮರುಜೋಡಿಸುವ ಇಂಥ ಯತ್ನಗಳಿಂದ ಯಾರಿಗೂ ಯಾವುದೇ ಪರಿಹಾರ ನೀಡುವುದು ಸಾಧ್ಯವಿಲ್ಲ ಎಂದಿತ್ತು. ಅಲ್ಲದೆ ನಕಲಿ ನೋಟು ತಡೆ, ಭಯೋತ್ಪಾದನೆಗೆ () ಹಣ ಪೂರೈಕೆ ಜಾಲಕ್ಕೆ ಕಡಿವಾಣ, ಕಪ್ಪುಹಣ ( ) ಮತ್ತು ತೆರಿಗೆ ವಂಚನೆ ತಡೆಯಲು ಅಪನಗದೀಕರಣ ಘೋಷಿಸಲಾಗಿದೆ. ಇದು ಸಾಕಷ್ಟು ಯೋಚಿಸಿ ಕೈಗೊಂಡ ನಿರ್ಧಾರವಾಗಿತ್ತು ಎಂದು ಸ್ಪಷ್ಟಪಡಿಸಿತ್ತು. ‘ಇನ್ನು ಅಪನಗದೀಕರಣದಿಂದ ನಾಗರಿಕರು ಕೆಲ ಕಾಲ ಸಮಸ್ಯೆಗಳನ್ನು ಎದುರಿಸಿದ್ದರು, ಆದರೆ ದೇಶಕಟ್ಟುವ ಕೆಲಸದಲ್ಲಿ ಇದು ಅನಿವಾರ್ಯ. ಆದರೆ ಇಂಥ ಸಮಸ್ಯೆಗಳನ್ನು ಬಳಿಕ ಲಭ್ಯ ವ್ಯವಸ್ಥೆಯ ಮೂಲಕ ಪರಿಹರಿಸಲಾಯಿತು’ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌, ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು. : ಕೇಂದ್ರದ ನಿರ್ಧಾರ ಸರಿಯೋ ಇಲ್ವೋ..? ಜನವರಿ 2ರಂದು ಸುಪ್ರೀಂಕೋರ್ಟ್‌ ತೀರ್ಪು ಅಂದು ಏನಾಗಿತ್ತು? 2016ರ ನ.8ರಂದು ರಾತ್ರಿ ದಿಢೀರನೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ( ), ತಕ್ಷಣದಿಂದ ಜಾರಿಗೆ ಬರುವಂತೆ 500 ರು. ಮತ್ತು 1000 ರು. ಮುಖಬೆಲೆಯ ನೋಟುಗಳ ಚಲಾವಣೆ ರದ್ದುಗೊಳಿಸುವುದಾಗಿ ಘೋಷಿಸಿದ್ದರು. ಇದರ ಬದಲಾಗಿ 500 ರು. ಮುಖಬೆಲೆಯ ಹೊಸ ಮಾದರಿಯ ನೋಟು ಮತ್ತು 2000 ರು. ಮುಖ ಬೆಲೆಯ ಹೊಸ ನೋಟುಗಳನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದರು.