: ಚಿನ್ನ, ಬೆಳ್ಳಿ ಬೆಲೆ ಏರಿಕೆಗೆ ಬಿತ್ತು ಬ್ರೇಕ್‌: ಇಂದಿನ ಬೆಲೆ ವಿವರ ಹೀಗಿದೆ ನೋಡಿ.. ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 27th 2022:ಬಹುತೇಕ ಮಹಿಳೆಯರು ಬಂಗಾರದ () ಪ್ರಿಯರು. ಈ ಹಿನ್ನೆಲೆ, ಚಿನ್ನ, ಬೆಳ್ಳಿ () ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಮೂಡುವುದಂತೂ ಗ್ಯಾರಂಟಿ. ದೇಶದಲ್ಲಿ ಜನಸಂಖ್ಯೆ ಹೆಚ್ಚಿದಂತೆ ಆಭರಣ () ಪ್ರಿಯರ ಸಂಖ್ಯೆಯೂ ಹೆಚ್ಚಿದೆ. ಇನ್ನು, ಶುಭ ಸಮಾರಂಭಗಳು ಸಹ ಹೆಚ್ಚಿರುವುದರಿಂದ ಆಭರಣ ಖರೀದಿ ವ್ಯವಹಾರ ಹೆಚ್ಚಾಗೇ ಇರುತ್ತದೆ. ಈ ಹಿನ್ನೆಲೆ, ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ () ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ದೇಶದಲ್ಲಿ () ಬಂಗಾರ ಹಾಗೂ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಇದನ್ನು ಓದಿ:, : ಶಿವಮೊಗ್ಗದಲ್ಲಿ ಇಳಿಕೆಯಾದ, ವಿಜಯನಗರ ಜಿಲ್ಲೆಯಲ್ಲಿ ಹೆಚ್ಚಾದ ಪೆಟ್ರೋಲ್‌, ಡೀಸೆಲ್‌ ಬೆಲೆ ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,451 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 40,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 43,608 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 50,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 54,510 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,00,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,45,100 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 50,000 ರೂ. ಆಗಿದ್ದು, ನಿನ್ನೆ ಸಹ ಇಷ್ಟೇ ದರ ಇತ್ತು. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 50,860, ರೂ. 49,950, ರೂ. 49,950 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಮಂಗಳವಾರ 50,100 ರೂ. ಆಗಿದ್ದು, ನಿನ್ನೆಯ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ಅದೇ ರೀತಿ, ಬೆಳ್ಳಿ ದರದಲ್ಲಿ ಸಹ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 740, ರೂ. 7,400 ಹಾಗೂ ರೂ. 74,000 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 74,000 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 71,100 ಹಾಗೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಇಂದಿನ ಬೆಳ್ಳಿ ದರ ರೂ. 71,100 ಇದ್ದು, ಯಥಾಸ್ಥಿತಿ ಕಾಯ್ದುಕೊಂಡಿದೆ. ಆದರೆ, ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 74,000 ಆಗಿದ್ದು, ನಿನ್ನೆ ಸಹ ಇಷ್ಟೇ ದರ ಇತ್ತು.