: ಅಂತೂ ಇಂತೂ ಇಳಿಕೆಯಾಯ್ತು ಚಿನ್ನ, ಬೆಳ್ಳಿ ದರ..! ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 29th 2022:ದೇಶದಲ್ಲಿ ಆಭರಣ () ಪ್ರಿಯರ ಸಂಖ್ಯೆಗೇನೂ ಕೊರತೆ ಇಲ್ಲ. ಬಹುತೇಕ ಮಹಿಳೆಯರು ಬಂಗಾರದ () ಪ್ರಿಯರು. ಈ ಹಿನ್ನೆಲೆ, ಚಿನ್ನ , ಬೆಳ್ಳಿ () ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಮೂಡುವುದಂತೂ ಗ್ಯಾರಂಟಿ. ಶುಭ ಸಮಾರಂಭಗಳು ಸಹ ದೇಶದಲ್ಲಿ ಹೆಚ್ಚು ನಡೆಯುವುದರಿಂದಲೂ ಆಭರಣ ವಹಿವಾಟು ನಡೆಯುತ್ತಲೇ ಇರುತ್ತದೆ. ಈ ಕಾರಣಕ್ಕಾಗಿ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ () ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ದೇಶದಲ್ಲಿ () ಬಂಗಾರದ ದರ ಇಳಿಕೆ ಕಂಡಿದ್ದು, ಅದೇ ರೀತಿ ಬೆಳ್ಳಿಯ ಮೌಲ್ಯದಲ್ಲೂ ದೇಶದ ಹಲವೆಡೆ ಕುಸಿದಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಇದನ್ನು ಓದಿ:, : ಹಲವು ಜಿಲ್ಲೆಗಳಲ್ಲಿ ಹೆಚ್ಚಾದ ಪೆಟ್ರೋಲ್‌, ಡೀಸೆಲ್‌ ಬೆಲೆ ಒಂದು ಗ್ರಾಂ ಚಿನ್ನ (1GM) ಎಂಟು ಗ್ರಾಂ ಚಿನ್ನ (8GM) ಹತ್ತು ಗ್ರಾಂ ಚಿನ್ನ (10GM) ನೂರು ಗ್ರಾಂ ಚಿನ್ನ (100GM) ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 50,100 ರೂ. ಆಗಿದ್ದು, ನಿನ್ನೆಯ ದರಕ್ಕಿಂತ ಅಲ್ಪ ಇಳಿಕೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 50,950, ರೂ. 50,050, ರೂ. 50,050 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಗುರುವಾರ 50,200 ರೂ. ಆಗಿದ್ದು, ಬೆಲೆಯಲ್ಲಿ ಅಲ್ಪ ಇಳಿಕೆಯಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಹಲವೆಡೆ ಇಳಿಕೆಯಾಗಿದ್ದರೂ, ಬೆಂಗಳೂರಿನಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಕುಸಿತ ಕಂಡಂತೆ, ಬೆಳ್ಳಿ ದರದಲ್ಲೂ ಇಳಿಕೆಯಾಗಿದೆ, ಆದರೆ ಬೆಂಗಳೂರಲ್ಲಿ ದರ ಕುಸಿದಿಲ್ಲ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 746, ರೂ. 7,460 ಹಾಗೂ ರೂ. 74,600 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 74,600 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 70,300 ಹಾಗೂ ಕೋಲ್ಕತ್ತದಲ್ಲಿ ಸಹ 1 ಕೆಜಿ ಬೆಳ್ಳಿ ದರ ರೂ. 70,300 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಹ 70,300 ರೂ. ಗೆ ಇಳಿಕೆಯಾಗಿದೆ.