: ಆಭರಣ ಪ್ರಿಯರಿಗೆ ಶುಭ ಸುದ್ದಿ: ಅಂತೂ ಇಂತೂ ಇಳಿಕೆಯಾಯ್ತು ಚಿನ್ನದ ಬೆಲೆ..! ನೀವು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 15th 2022:ದೇಶದಲ್ಲಿ ಜನಸಂಖ್ಯೆ ಹೆಚ್ಚಾಗಿರುವಂತೆ ಆಭರಣ ಪ್ರಿಯರ ಸಂಖ್ಯೆಯೂ ಹೆಚ್ಚಿದೆ. ಇನ್ನು, ಚಿನ್ನ (), ಬೆಳ್ಳಿ () ದರ ಇಳಿಕೆಯಾದರೆ ಆಭರಣ () ಪ್ರಿಯ ಮಹಿಳೆಯರ ಮನದಲ್ಲಿ ನಗು ಮೂಡುವುದಂತೂ ಗ್ಯಾರಂಟಿ. ಇನ್ನು, ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ (), ಬೆಳ್ಳಿ () ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ () ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ದೇಶದಲ್ಲಿ () ಬಂಗಾರದ ದರ ಇಳಿಕೆಯಾಗಿದ್ದು, ಆದರೆ ಬೆಳ್ಳಿಯ ಬೆಲೆ ಹೆಚ್ಚಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,00424 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,458 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 40,03224 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 43,664 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 50,04024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 54,580 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,00,40024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,45,800 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 50,040 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಇಳಿಕೆಯಾಗಿದೆ ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 51,000, ರೂ. 49,990, ರೂ. 49,990 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಗುರುವಾರ 50,140 ರೂ. ಆಗಿದ್ದು, ನಿನ್ನೆಗಿಂತ ದರ ಇಳಿಕೆಯಾಗಿದೆ.ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರ ಸಹ ಗಗನಕ್ಕೇರಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಇಳಿಕೆಯಾಗಿದ್ದು, ಬೆಳ್ಳಿ ದರದಲ್ಲಿ ಏರಿಕೆಯಾಗಿದೆ. ಆದರೆ, ಬೆಂಗಳೂರಿನಲ್ಲಿ ದರ ಯಥಾಸ್ಥಿತಿ ಕಾಯ್ದುಕೊಮಡಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 740, ರೂ. 7,400 ಹಾಗೂ ರೂ. 74,000 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 74,000 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 69,300, ಕೋಲ್ಕತ್ತದಲ್ಲಿ ರೂ. 69,300 ಹಾಗೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಇಂದಿನ ಬೆಳ್ಳಿ ದರ ರೂ. 69,300 ಆಗಿದ್ದು, ನಿನ್ನೆಗಿಂತ ದರ ಹೆಚ್ಚಾಗಿದೆ.