: 50 ಸಾವಿರ ದಾಟಿದ ಚಿನ್ನದ ದರ; ಗಗನಕ್ಕೇರಿದ ಬೆಳ್ಳಿ ಮೌಲ್ಯ..! ನೀವು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 14th 2022: ಬಂಗಾರದ () ದರ ಇಳಿಕೆಯಾಗಲು ಕಾಯುತ್ತಿದ್ದವರಿಗೆ ಶಾಕ್‌ ಆಗುವ ಸುದ್ದಿ ಇದು. ದೇಶಾದ್ಯಂತ ಚಿನ್ನ, ಬೆಳ್ಳಿ () ದರ ಮತ್ತೆ ಹೆಚ್ಚಾಗಿದೆ. ಈ ಹಿನ್ನೆಲೆ ಮಗನ, ಮಗಳ ಮದುವೆ ಮಾಡಿಸೋಕೆ ಅಂತ ಹಣ ಕೂಡಿಟ್ಟು ಆಭರಣ () ಮಾಡಿಸೋಕೆ ತಯಾರಾದವರಿಗೆ ಮತ್ತಷ್ಟು ಹಣ ಕೂಡಿಡುವಂತಹ ಪರಿಸ್ಥಿತಿ ಬಂದೊದಗಿದೆ. ಇನ್ನು, ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ (), ಬೆಳ್ಳಿ () ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ () ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ದೇಶದಲ್ಲಿ () ಬಂಗಾರದ ದರ ಏರಿಕೆಯಾಗಿದ್ದು, ಅದೇ ರೀತಿ ಬೆಳ್ಳಿಯ ಬೆಲೆ ಸಹ ಹೆಚ್ಚಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಇದನ್ನು ಓದಿ:, : ದಕ್ಷಿಣ ಕನ್ನಡದಲ್ಲಿ ಹೆಚ್ಚಾದ, ಬಳ್ಳಾರಿಯಲ್ಲಿ ಇಳಿಕೆಯಾದ ಪೆಟ್ರೋಲ್‌ ಡೀಸೆಲ್‌ ಬೆಲೆ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,03524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,493 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 40,28024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 43,944 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 50,35024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 54,930 ನೂರು ಗ್ರಾಂ ಚಿನ್ನ (100GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,03,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,49,300 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 50,350 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಹೆಚ್ಚಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 51,000, ರೂ. 50,300, ರೂ. 50,300 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಮಂಗಳವಾರ 50,450 ರೂ. ಆಗಿದ್ದು, ನಿನ್ನೆಗಿಂತ ದರ ಹೆಚ್ಚಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಸಹ ಗಗನಕ್ಕೇರಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಹೆಚ್ಚಾದಂತೆ ಬೆಳ್ಳಿ ದರದಲ್ಲೂ ಏರಿಕೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 740, ರೂ. 7,400 ಹಾಗೂ ರೂ. 74,000 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 74,000 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 71,000, ಕೋಲ್ಕತ್ತದಲ್ಲಿ ರೂ. 71,000 ಹಾಗೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಇಂದಿನ ಬೆಳ್ಳಿ ದರ ರೂ. 71,000 ಆಗಿದ್ದು, ನಿನ್ನೆಗಿಂತ ದರ ಹೆಚ್ಚಾಗಿದೆ.