: 50 ಸಾವಿರ ಸನಿಹಕ್ಕೆ ಬಂದ ಬಂಗಾರ ದರ; ಇಂದಿನ ಚಿನ್ನ, ಬೆಳ್ಳಿ ದರ ವಿವರ ಹೀಗಿದೆ.. ನೀವು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 11th 2022:ಮಗನ, ಮಗಳ ಮದುವೆ ಮಾಡಿಸೋಕೆ ಅಂತ ಹಣ ಕೂಡಿಟ್ಟು ಆಭರಣ () ಮಾಡಿಸೋಕೆ ತಯಾರಾದವರಿಗೆ ಮತ್ತಷ್ಟು ಹಣ ಕೂಡಿಡುವಂತಹ ಪರಿಸ್ಥಿತಿ ಬಂದೊದಗಿದೆ. ಏಕೆಂದರೆ, ದೇಶಾದ್ಯಂತ ಚಿನ್ನ (), ಬೆಳ್ಳಿ () ದರ ಮತ್ತೆ ಹೆಚ್ಚಾಗಿದೆ. ದೇಶದಲ್ಲಿ ಆಭರಣ ಪ್ರಿಯರು, ಶುಭ ಸಮಾರಂಭಗಳ ಸಂಖ್ಯೆ ಹೆಚ್ಚಿರುತ್ತದೆ. ಈ ಹಿನ್ನೆಲೆ, ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ , ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ () ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ದೇಶದಲ್ಲಿ () ಬಂಗಾರದ ದರ ಏರಿಕೆಯಾಗಿದ್ದು, ಅದೇ ರೀತಿ ಬೆಳ್ಳಿಯ ಬೆಲೆ ಸಹ ದೇಶಾದ್ಯಂತ ಹೆಚ್ಚಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..ಒಂದು ಗ್ರಾಂ ಚಿನ್ನ (1GM) ಎಂಟು ಗ್ರಾಂ ಚಿನ್ನ (8GM) ಹತ್ತು ಗ್ರಾಂ ಚಿನ್ನ (10GM) ನೂರು ಗ್ರಾಂ ಚಿನ್ನ (100GM) ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 49,950 ರೂ. ಆಗಿದ್ದು, ನಿನ್ನೆಗಿಂತ ಬೆಲೆಯಲ್ಲಿ ಹೆಚ್ಚಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 50,550, ರೂ. 49,900, ರೂ. 49,900 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಭಾನುವಾರ 50,050 ರೂ. ಆಗಿದ್ದು, ನಿನ್ನೆಗಿಂತ ದರ ಜಾಸ್ತಿಯಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಹೆಚ್ಚಾಗಿದೆ. ಅದೇ ರೀತಿ ಬೆಳ್ಳಿ ದರದಲ್ಲೂ ಏರಿಕೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 730, ರೂ. 7,300 ಹಾಗೂ ರೂ. 73,000 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 73,000 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 68,100, ಕೋಲ್ಕತ್ತದಲ್ಲಿ ರೂ. 68,000 ಹಾಗೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 68,100 ಆಗಿದ್ದು, ನಿನ್ನೆಯ ದರಕ್ಕಿಂತ ಜಾಸ್ತಿಯಾಗಿದೆ.