: ವೀಕೆಂಡ್‌ನಲ್ಲಿ ಆಭರಣ ಕೊಳ್ಳೋ ಪ್ಲ್ಯಾನ್‌ ಇದ್ಯಾ..? ಹಾಗಾದ್ರೆ ನಿಮಗಿಲ್ಲಿದೆ ಶಾಕಿಂಗ್ ಸುದ್ದಿ..! ನೀವು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 10th 2022:ಬಂಗಾರದ () ದರ ಇಳಿಕೆಯಾಗಲು ಕಾಯುತ್ತಿದ್ದವರಿಗೆ ಶಾಕ್‌ ಆಗುವ ಸುದ್ದಿ ಇದು. ದೇಶಾದ್ಯಂತ ಚಿನ್ನ, ಬೆಳ್ಳಿ () ದರ ಮತ್ತೆ ಹೆಚ್ಚಾಗಿದೆ. ಈ ಹಿನ್ನೆಲೆ ಮಗನ, ಮಗಳ ಮದುವೆ ಮಾಡಿಸೋಕೆ ಅಂತ ಹಣ ಕೂಡಿಟ್ಟು ಆಭರಣ () ಮಾಡಿಸೋಕೆ ತಯಾರಾದವರಿಗೆ ಮತ್ತಷ್ಟು ಹಣ ಕೂಡಿಡುವಂತಹ ಪರಿಸ್ಥಿತಿ ಬಂದೊದಗಿದೆ. ಇನ್ನು, ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ (), ಬೆಳ್ಳಿ () ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ () ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ದೇಶದಲ್ಲಿ () ಬಂಗಾರದ ದರ ಏರಿಕೆಯಾಗಿದ್ದು, ಅದೇ ರೀತಿ ಬೆಳ್ಳಿಯ ಬೆಲೆ ಸಹ ಬೆಂಗಳೂರು ಹೊರತುಪಡಿಸಿ ದೇಶದ ಬಹುತೇಕ ಕಡೆ ಹೆಚ್ಚಾಗಿದೆ. ಇನ್ನು, ಬೆಂಗಳೂರಲ್ಲಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಇದನ್ನು ಓದಿ:, : ನಿಮ್ಮ ನಗರಗಳಲ್ಲಿ ಇಂದಿನ ಪೆಟ್ರೋಲ್‌ ಡೀಸೆಲ್‌ ಬೆಲೆ ವಿವರ ಹೀಗಿದೆ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,99524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,449 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 39,96024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 43,592 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 49,95024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 54,490 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,99,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,44,900 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 49,950 ರೂ. ಆಗಿದ್ದು, ನಿನ್ನೆಗಿಂತ ಬೆಲೆಯಲ್ಲಿ ಹೆಚ್ಚಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 50,470, ರೂ. 49,900, ರೂ. 49,900 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಶನಿವಾರ 50,050 ರೂ. ಆಗಿದ್ದು, ನಿನ್ನೆಗಿಂತ ದರ ಜಾಸ್ತಿಯಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಆದರೆ, ಬೆಂಗಳೂರಲ್ಲಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರದಲ್ಲಿ ಹೆಚ್ಚಾಗಿದೆ. ಅದೇ ರೀತಿ ಬೆಳ್ಳಿ ದರದಲ್ಲೂ ಹೆಚ್ಚಾಗಿದೆ. ಆದರೆ, ಬೆಂಗಳೂರಿನಲ್ಲಿ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 725, ರೂ. 7,250 ಹಾಗೂ ರೂ. 72,500 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 72,500 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 68,100, ಕೋಲ್ಕತ್ತದಲ್ಲಿ ರೂ. 68,100 ಹಾಗೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 68,100 ಆಗಿದ್ದು, ನಿನ್ನೆಯ ದರಕ್ಕಿಂತ ಜಾಸ್ತಿಯಾಗಿದೆ.