: ಆಭರಣ ಪ್ರಿಯರಿಗೆ ಶುಭ ಸುದ್ದಿ: ದೇಶದಲ್ಲಿ ಇಳಿಕೆಯಾದ ಚಿನ್ನ, ಬೆಳ್ಳಿ ದರ ನೀವು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 12th 2022:ಹಲವು ದಿನಗಳಿಂದ ಹೆಚ್ಚಾಗುತ್ತಿದ್ದ ಬಂಗಾರದ () , ದರ ಏರಿಕೆಗೆ ಬ್ರೇಕ್‌ ಬಿದ್ದಿದ್ದು, ಇದು ಆಭರಣ ಪ್ರಿಯರ ಮೊಗದಲ್ಲಿ ಸಂತಸ ತಂದಿದೆ. ಜತೆಗೆ, ಬೆಳ್ಳಿ () ದರವೂ ಬೆಂಗಳೂರು ಹೊರತುಪಡಿಸಿ ದೇಶದ ಹಲವೆಡೆ ಕಡಿಮೆಯಾಗಿದೆ. ಆದ್ದರಿಂದ, ಈ ಆಭರಣ () ಕೊಳ್ಳಲು ಪ್ಲ್ಯಾನ್‌ ಮಾಡುತ್ತಿರುವವರು ಇಂದೇ ಕೊಳ್ಳುವುದರಿಂದ ನಿಮ್ಮ ಜೇಬಿಗೆ ಸ್ವಲ್ಪ ಹೊರೆ ಕಡಿಮೆಯಾಗಬಹುದು. ದೇಶದಲ್ಲಿ ಆಭರಣ ಪ್ರಿಯರು, ಶುಭ ಸಮಾರಂಭಗಳ ಸಂಖ್ಯೆ ಹೆಚ್ಚಿರುತ್ತದೆ. ಈ ಹಿನ್ನೆಲೆ, ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ , ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ () ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇದನ್ನು ಓದಿ:, : ಉತ್ತರ ಕನ್ನಡದಲ್ಲಿ ಹೆಚ್ಚಾದ, ಬೆಳಗಾವಿಯಲ್ಲಿ ಇಳಿಕೆಯಾದ ಪೆಟ್ರೋಲ್‌ ಡೀಸೆಲ್‌ ಬೆಲೆ.. ಒಂದು ಗ್ರಾಂ ಚಿನ್ನ (1GM) ಎಂಟು ಗ್ರಾಂ ಚಿನ್ನ (8GM) ಹತ್ತು ಗ್ರಾಂ ಚಿನ್ನ (10GM) ನೂರು ಗ್ರಾಂ ಚಿನ್ನ (100GM) ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 49,850 ರೂ. ಆಗಿದ್ದು, ನಿನ್ನೆಗಿಂತ ಬೆಲೆಯಲ್ಲಿ ಕಡಿಮೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 50,540, ರೂ. 49,800, ರೂ. 49,800 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಭಾನುವಾರ 49,950 ರೂ. ಆಗಿದ್ದು, ನಿನ್ನೆಗಿಂತ ದರ ಕಡಿಮೆಯಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಸಹ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಕಡಿಮೆಯಾದಂತೆ, ಅದೇ ರೀತಿ ಬೆಳ್ಳಿ ದರದಲ್ಲೂ ಇಳಿಕೆಯಾಗಿದೆ ಆದರೆ, ಬೆಂಗಳೂರಿನಲ್ಲಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 730, ರೂ. 7,300 ಹಾಗೂ ರೂ. 73,000 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 73,100 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 67,800, ಕೋಲ್ಕತ್ತದಲ್ಲಿ ರೂ. 67,800 ಹಾಗೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಇಂದಿನ ಬೆಳ್ಳಿ ದರ ರೂ. 67,700 ಆಗಿದ್ದು, ನಿನ್ನೆಯ ದರಕ್ಕಿಂತ ಇಳಿಕೆಯಾಗಿದೆ.