: ದೇಶದಲ್ಲಿ ಮತ್ತೆ ಏರಿಕೆಯಾದ ಚಿನ್ನದ ದರ; ಬೆಳ್ಳಿ ಬೆಲೆ ಇಳಿಕೆ ನೀವು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 16th 2022:ದೇಶದಲ್ಲಿ ಹಲವು ದಿನಗಳಿಂದ ಚಿನ್ನ (), ಬೆಳ್ಳಿ () ದರದಲ್ಲಿ ಭಾರಿ ವ್ಯತ್ಯಾಸವಾಗುತ್ತಿದೆ. ದೇಶದಲ್ಲಿ ಶುಭ ಸಮಾರಂಭಗಳ ಸಂಖ್ಯೆ ಹೆಚ್ಚಿದ್ದು, ಈ ಹಿನ್ನೆಲೆ ಆಭರಣಗಳ () ಖರೀದಿ ಸಹ ಹೆಚ್ಚಿರುತ್ತದೆ. ಹಾಗೂ, ಮಹಿಳೆಯರು ಸಾಮಾನ್ಯವಾಗಿ ಆಭರಣ ಪ್ರಿಯರಾಗಿದ್ದು, ಈ ಹಿನ್ನೆಲೆ ಆಭರಣಗಳ ಖರೀದಿ, ವಹಿವಾಟು ಹೆಚ್ಚಿರುತ್ತದೆ. ಅಲ್ಲದೆ, ಚಿನ್ನ, ಬೆಳ್ಳಿ ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಅರಳುತ್ತದೆ. ಈ ಹಿನ್ನೆಲೆ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ () ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ದೇಶದಲ್ಲಿ ಬಂಗಾರದ ದರ ಮತ್ತೆ ಏರಿಕೆಯಾಗಿದ್ದು, ಆದರೆ ಬೆಳ್ಳಿಯ ಬೆಲೆ ಚೆನ್ನೈ ಹೊರತುಪಡಿಸಿ ಉಳಿದೆಡೆ ಕುಸಿದಿದೆ. ಇಂದಿನ ಬೆಲೆ ವಿವರ ಹೀಗಿದೆ ನೋಡಿ.. ಇದನ್ನು ಓದಿ:, : ನಿಮ್ಮ ನಗರಗಳಲ್ಲಿ ಇಂದಿನ ಪೆಟ್ರೋಲ್‌, ಡೀಸೆಲ್‌ ಬೆಲೆ ವಿವರ ಹೀಗಿದೆ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,80524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,241 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,44024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,928 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 48,05024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,410 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,80,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,24,100 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 48,050 ರೂ. ಆಗಿದ್ದು, ನಿನ್ನೆಗಿಂತ ದರದಲ್ಲಿ ಏರಿಕೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 49,600, ರೂ. 48,000, ರೂ. 48,000 ಇದ್ದು, ನಿನ್ನೆಗಿಂತ ದರ ಏರಿಕೆಯಾಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಬುಧವಾರ 48,150 ರೂ. ಆಗಿದ್ದು, ನಿನ್ನೆಯ ದರಕ್ಕಿಂತ ಹೆಚ್ಚಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಕುಸಿತವಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರದಲ್ಲಿ ಏರಿಕೆಯಾಗಿದೆ. ಆದರೆ, ಬೆಳ್ಳಿ ದರ ಚೆನ್ನೈ ಹೊರತುಪಡಿಸಿ ಉಳಿದೆಡೆ ಇಳಿಕೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 675, ರೂ. 6,750 ಹಾಗೂ ರೂ. 67,500 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 68,500 ಆಗಿದ್ದರೆ, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 62,000, ಕೋಲ್ಕತ್ತದಲ್ಲಿ ರೂ. 62,000 ಹಾಗೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 62,000 ಆಗಿದ್ದು, ನಿನ್ನೆಗಿಂತ ದರ ಹೆಚ್ಚಾಗಿದೆ.