: ವೀಕೆಂಡ್‌ನಲ್ಲಿ ಹೆಚ್ಚಾದ ಚಿನ್ನದ ಬೆಲೆ; ಇಂದಿನ ಬೆಲೆ ವಿವರ ಹೀಗಿದೆ.. ನೀವು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಯಾವ್ಯಾವ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಬಗ್ಗೆ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 12th 2022:ಬಂಗಾರ ಹಾಗೂ ಬೆಳ್ಳಿ ಬೆಲೆಬಾಳುವ ಲೋಹವಾದರೂ ಆಭರಣ ಪ್ರಿಯರ ಸಂಖ್ಯೆ ಹೆಚ್ಚೇ ಇದೆ. ದೇಶದಲ್ಲಿ ಜನಸಂಖ್ಯೆ ಹಾಗೂ ಶುಭ ಸಮಾರಂಭಗಳ ಸಂಖ್ಯೆ ಹೆಚ್ಚಿರುವಂತೆ, ಆಭರಣಗಳ () ಖರೀದಿ, ವಹಿವಾಟು ಹೆಚ್ಚಿರುತ್ತದೆ. ಅಲ್ಲದೆ, ಚಿನ್ನ (), ಬೆಳ್ಳಿ () ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಅರಳುತ್ತದೆ. ಈ ಹಿನ್ನೆಲೆ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ಬೆಂಗಳೂರು ಸೇರಿ ದೇಶಾದ್ಯಂತ ಬಂಗಾರದ ದರದಲ್ಲಿ ಏರಿಕೆಯಾಗಿದೆ. ಇನ್ನೊಂದೆಡೆ, ಬೆಂಗಳೂರಲ್ಲಿ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ, ಉಳಿದೆಡೆ ದರ ಕಡಿಮೆಯಾಗಿದೆ. ಇಂದಿನ ಬೆಲೆ ವಿವರ ಹೀಗಿದೆ ನೋಡಿ.. ಇದನ್ನು ಓದಿ:, : ಉತ್ತರ ಕನ್ನಡದಲ್ಲಿ ಇಳಿಕೆಯಾದ ಪೆಟ್ರೋಲ್‌, ಡೀಸೆಲ್‌ ಬೆಲೆ ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,82524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,263 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,60024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 42,104 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 48,25024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,630 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,82,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,26,300 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 48,250 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಹೆಚ್ಚಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 48,920, ರೂ. 48,200, ರೂ. 48,200 ಇದ್ದು, ನಿನ್ನೆಯ ದರಕ್ಕಿಂತ ಏರಿಕೆಯಾಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಶನಿವಾರ 48,350 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಅಧಿಕವಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರ ಹೆಚ್ಚಾಗಿದ್ದು, ಆದರೆ ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಆದರೆ ಬೆಂಗಳೂರಲ್ಲಿ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 675, ರೂ. 6,750 ಹಾಗೂ ರೂ. 67,500 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 67,500 ಆಗಿದ್ದರೆ, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 61,700 ಹಾಗೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 61,700 ಹಾಗೂ ಕೋಲ್ಕತ್ತದಲ್ಲಿ ರೂ. 67,500 ಆಗಿದೆ.