: ಬಂಗಾರ ಖರೀದಿದಾರರಿಗೆ ಶುಭ ಸುದ್ದಿ, ಚಿನ್ನದ ದರದಲ್ಲಿ ಇನ್ನಷ್ಟು ಇಳಿಕೆ! ಬಂಗಾರ ಖರೀದಿದಾರರಿಗೆ ಮತ್ತಷ್ಟು ಶುಭ ಸುದ್ದಿ ಸಿಕ್ಕಿದೆ. ಶುಭ ಶುಕ್ರವಾರದಂದು ದೇಶಾದ್ಯಂತ ಚಿನ್ನದ ದರದಲ್ಲಿ ಇನ್ನಷ್ಟು ಕಡಿಮೆಯಾಗಿದೆ. ದೇಶದಲ್ಲಿ ಎಲ್ಲೆಲ್ಲಿ ಎಷ್ಟೆಷ್ಟು ದರ ಅನ್ನೋದರ ಬಗ್ಗೆ ಮಾಹಿತಿ ಇಲ್ಲಿದೆ. 4th 2022:ದೇಶದಲ್ಲಿ ಕಳೆದೊಂದು ತಿಂಗಳಿನಿಂದ ಚಿನ್ನದ ದರಗಳಲ್ಲಿ ಇಳಿಕೆ ಕಂಡು ಬರುತ್ತಿದೆ. ಆ ಟ್ರೆಂಡ್‌ ಶುಕ್ರವಾರ ಕೂಡ ಮುಂದುವರಿದಿದ್ದು, ಆಭರಣ ಹಾಗೂ ಬಂಗಾರ ಖರೀದಿದಾರರಿಗೆ ಶುಭ ಸುದ್ದಿ ಎನಿಸಿದೆ. ದೇಶದಲ್ಲಿ ಇನ್ನೂ ಶುಭ ಸಮಾರಂಭಗಳ ಸಂಖ್ಯೆ ಹೆಚ್ಚೇ ಇದೆ. ಅದರೊಂದಿಗೆ ಆಭರಣಗಳ ಖರೀದಿ ಹಾಗೂ ವಹಿವಾಟು ಸಾಮಾನ್ಯವಾಗಿ ಹೆಚ್ಚಿರುತ್ತದೆ. ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆಯಾದರೆ ಪುರುಷರಿಗಿಂತ ಹೆಚ್ಚಾಗಿ ಮಹಿಳೆಯರ ಮೊಗದಲ್ಲಿ ನಗು ಅರಳುತ್ತದೆ. ಈ ನಿಟ್ಟಿನಲ್ಲಿ ಪ್ರತಿನಿತ್ಯ ಚಿನ್ನದ ದರವನ್ನು ಪರಿಶೀಲನೆ ಮಾಡುವ ದೊಡ್ಡ ವರ್ಗವೇ ಇದೆ. ಹಾಗೇನಾದರೂ ನೀವು ಂದು ಚಿನ್ನ ಹಾಗೂ ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿಕೊಂಡಿದ್ದರೆ, ಇಲ್ಲಿದೆ ನೋಡಿ ಇವುಗಳ ಇಂದಿನ ದರ. ಬೆಂಗಳೂರಿನಲ್ಲಿ ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಈ ವರದಿ ಓದಿ. ಇಂದು ಬೆಂಗಳೂರು ಸೇರಿ ದೇಶಾದ್ಯಂತ ಚಿನ್ನದ ದರದಲ್ಲಿ ಕಡಿಮೆಯಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಸಹ ಇಳಿಕೆಯಾಗಿದೆ. ಇದನ್ನು ಓದಿ:ಬೆಳಗಾವಿಯಲ್ಲಿ ಇಳಿದ ವಿಜಯಪುರದಲ್ಲಿ ಏರಿದ ಪೆಟ್ರೋಲ್‌ ದರ, ಇಂದು ನಿಮ್ಮ ಊರಲ್ಲಿ ಇಂಧನ ಬೆಲೆ ಹೇಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,61524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,034 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 36, 92024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,272 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,15024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50, 340 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,61,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,03,400 ಇದನ್ನು ಓದಿ: : ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌: ಇಳಿಕೆಯಾಯ್ತು ಚಿನ್ನ, ಬೆಳ್ಳಿ ದರ ಬೆಂಗಳೂರು ಸೇರಿದಂತೆ ದೇಶಾದ್ಯಂತ ಚಿನ್ನದ ದರ:ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) 46, 150 ರೂ. ಆಗಿದ್ದು, ನಿನ್ನೆಗಿಂತ 600 ರೂಪಾಯಿ ಬೆಲೆ ಕಡಿಮೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 47,060, ರೂ. 46,100, ರೂ. 46,100 ಇದ್ದು, ನಿನ್ನೆಯ ದರಕ್ಕಿಂತ ಕಡಿಮೆಯಾಗಿದೆ. ರಾಜಧಾನಿ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಬುಧವಾರ 46,250 ರೂ. ಆಗಿದ್ದು,ಬೆಲೆಯಲ್ಲಿ ಇಳಿಕೆ ಆಗಿದೆ. ಇಂದಿನ ಬೆಳ್ಳಿ ದರ: ಬೆಳ್ಳಿಯ ದರದಲ್ಲೂ ಕೂಡ ದೇಶದಲ್ಲಿ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯಾಪಕ ವ್ಯತ್ಯಾಸದ ಹಾಗೂ ರೂಪಾಯಿ ಮತ್ತು ಡಾಲರ್‌ ವಹಿವಾಟಿನ ಮೇಲೆ ಇದು ಅವಲಂಬಿತವಾಗಿದೆ. ರೂಪಾಯಿ ದರದಲ್ಲಿ ಬದಲಾವಣೆ ಆಗುತ್ತಿರುವಂತೆ ದೇಶದಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲೂ ವ್ಯತ್ಯಾಸವಾಗುತ್ತಿರುತ್ತದೆ. ದೇಶದೆಲ್ಲೆಡೆ ಇರುವ ಬೆಳ್ಳಿ ದರ:ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರ ಇಳಿಕೆಯಾಗಿದ್ದರೆ, ಬೆಳ್ಳಿ ದರ ಸ್ಥಿರವಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 640, ರೂ. 6,400 ಹಾಗೂ ರೂ. 64,000 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 64,00 ಆಗಿದ್ದರೆ, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 58,100, ಕೋಲ್ಕತ್ತದಲ್ಲಿ ರೂ. 58,100 ಹಾಗೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 58,100 ಆಗಿದೆ.