: ಕನ್ನಡ ರಾಜ್ಯೋತ್ಸವದಂದು ಆಭರಣ ಪ್ರಿಯರಿಗೆ ಶುಭ ಸುದ್ದಿ: ಮತ್ತಷ್ಟು ಅಗ್ಗವಾದ ಬಂಗಾರ 1st 2022 ನೀವು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಯಾವ್ಯಾವ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಬಗ್ಗೆ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 1st 2022:ಕಳೆದ ಕೆಲವು ದಿನಗಳಿಂದ ಚಿನ್ನ (), ಬೆಳ್ಳಿ () ದರದಲ್ಲಿ ಹೆಚ್ಚು ವ್ಯತ್ಯಾಸವಾಗಿದೆ. ನಿನ್ನೆ ದೇಶದಲ್ಲಿ ಬಂಗಾರದ ದರ ಇಳಿಕೆಯಾಗಿತ್ತು. ಇಂದು ಸಹ ಮತ್ತೆ ಚಿನ್ನದ ದರ ಕಡಿಮೆಯಾಗಿದೆ. ಆದರೆ, ಬೆಳ್ಳಿ ದರ ಬೆಂಗಳೂರು () ಸೇರಿ ದೇಶದ ಹಲವೆಡೆ ಹೆಚ್ಚಾಗಿದೆ. ದೇಶದಲ್ಲಿ ಜನಸಂಖ್ಯೆ ಹಾಗೂ ಶುಭ ಸಮಾರಂಭಗಳ ಸಂಖ್ಯೆ ಸಾಮಾನ್ಯವಾಗಿ ಹೆಚ್ಚೇ ಇದೆ. ಇದರಿಂದ ಆಭರಣಗಳ () ಖರೀದಿ, ವಹಿವಾಟು ಹೆಚ್ಚಿರುತ್ತದೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಕನ್ನಡ ರಾಜ್ಯೋತ್ಸವವಾದ ಇಂದು ಬೆಂಗಳೂರಿನಲ್ಲಿ ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ಬೆಂಗಳೂರು ಸೇರಿ ದೇಶಾದ್ಯಂತ ಬಂಗಾರದ ದರದಲ್ಲಿ ಇಳಿಕೆಯಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಏರಿಕೆಯಾಗಿದೆ. ಇಂದಿನ ಬೆಲೆ ವಿವರ ಹೀಗಿದೆ ನೋಡಿ.. ಇದನ್ನು ಓದಿ:, : ಕನ್ನಡ ರಾಜ್ಯೋತ್ಸವದಂದು ನಿಮ್ಮ ಊರಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,60524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,023 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 36,84024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,184 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,05024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,230 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,60,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,02,300 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,050 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಕಡಿಮೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 47,050, ರೂ. 46,000, ರೂ. 46,000 ಇದ್ದು, ನಿನ್ನೆಯ ದರಕ್ಕಿಂತ ಇಳಿಕೆಯಾಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಮಂಗಳವಾರ 46,150 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಅಗ್ಗವಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಏರಿಕೆ ಕಂಡಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರ ಇಳಿಕೆಯಾಗಿದ್ದು, ಆದರೆ ಬೆಳ್ಳಿ ದರದಲ್ಲಿ ಹೆಚ್ಚಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 583, ರೂ. 5,830 ಹಾಗೂ ರೂ. 58,300 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 63,700 ಆಗಿದ್ದರೆ, ಕೋಲ್ಕತ್ತದಲ್ಲಿ ಸಹ ರೂ. 63,700 ಬೆಲೆ ಇದೆ. ಇನ್ನೊಂದೆಡೆ, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 58,300 ಹಾಗೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 58,300 ಆಗಿದ್ದು, ನಿನ್ನೆಗಿಂತ ದರ ಕಡಿಮೆ ಇದೆ.