: ಬೆಂಗಳೂರಲ್ಲಿಂದು ತುಟ್ಟಿಯಾದ ಚಿನ್ನ, ಬೆಳ್ಳಿ ದರ ನೀವು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಯಾವ್ಯಾವ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಬಗ್ಗೆ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 2nd 2022:ಕಳೆದ ಕೆಲವು ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನ () ದ ದರ ಮತ್ತೆ ಇಂದು ಏರಿಕೆ ಕಂಡಿದೆ. ದೇಶದಲ್ಲಿ ಜನಸಂಖ್ಯೆ ಹಾಗೂ ಶುಭ ಸಮಾರಂಭಗಳ ಸಂಖ್ಯೆ ಸಾಮಾನ್ಯವಾಗಿ ಹೆಚ್ಚೇ ಇದೆ. ಇದರಿಂದ ಆಭರಣಗಳ () ಖರೀದಿ, ವಹಿವಾಟು ಹೆಚ್ಚಿರುತ್ತದೆ. ಅಲ್ಲದೆ, ಚಿನ್ನ, ಬೆಳ್ಳಿ () ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಅರಳುತ್ತದೆ. ಈ ಹಿನ್ನೆಲೆ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ಬೆಂಗಳೂರು ಸೇರಿ ದೇಶಾದ್ಯಂತ ಬಂಗಾರದ ದರದಲ್ಲಿ ಏರಿಕೆಯಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಬೆಂಗೂರಲ್ಲಿ ಹೆಚ್ಚಾಗಿದ್ದರೆ,ದೇಶದ ಇತರೆಡೆ ಇಳಿಕೆಯಾಗಿದೆ. ಇಂದಿನ ಬೆಲೆ ವಿವರ ಹೀಗಿದೆ ನೋಡಿ.. ಇದನ್ನು ಓದಿ:, : ಇಂದು ನಿಮ್ಮ ಊರಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,69024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,116 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,52024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,928 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,90024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,160 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,69,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,11,600 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,900 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಅಧಿಕವಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 47,300, ರೂ. 46,850, ರೂ. 46,850 ಇದ್ದು, ನಿನ್ನೆಯ ದರಕ್ಕಿಂತ ಹೆಚ್ಚಾಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಬುಧವಾರ 47,000 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಜಾಸ್ತಿಯಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ, ಆದರೂ ಬೆಂಗಳೂರಲ್ಲಿ ಬೆಲೆ ಹೆಚ್ಚಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರ ಹೆಚ್ಚಾಗಿದ್ದು, ಆದರೆ ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ, ಆದರೂ ಬೆಂಗಳೂರಲ್ಲಿ ದರ ಹೆಚ್ಚಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 645, ರೂ. 6,450 ಹಾಗೂ ರೂ. 64,500 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 64,500 ಆಗಿದ್ದರೆ, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 58,900, ಕೋಲ್ಕತ್ತದಲ್ಲಿ ರೂ. 58,900 ಹಾಗೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 58,900 ಆಗಿದ್ದು, ನಿನ್ನೆಗಿಂತ ದರ ಕಡಿಮೆ ಇದೆ.