: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್‌; ಮತ್ತೆ ಹೆಚ್ಚಾದ ಚಿನ್ನ, ಬೆಳ್ಳಿ ದರ ನೀವು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಯಾವ್ಯಾವ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಬಗ್ಗೆ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 27th 2022:ದೀಪಾವಳಿ ಹಬ್ಬದಲ್ಲಿ ಈ ಬಾರಿ ಚಿನ್ನ, ಬೆಳ್ಳಿ ವ್ಯಾಪಾರ ದೇಶದಲ್ಲಿ ಭರ್ಜರಿಯಾಗೇ ನಡೆದಿದೆ. ಇನ್ನು, ದೇಶದಲ್ಲಿ ಜನಸಂಖ್ಯೆ ಹಾಗೂ ಶುಭ ಸಮಾರಂಭಗಳ ಸಂಖ್ಯೆ ಸಾಮಾನ್ಯವಾಗಿ ಹೆಚ್ಚೇ ಇದೆ. ಇದರಿಂದ ಆಭರಣಗಳ ಖರೀದಿ, ವಹಿವಾಟು ಹೆಚ್ಚಿರುತ್ತದೆ. ಹಾಗೂ, ಮಹಿಳೆಯರಿಗೆ ಆಭರಣವೆಂದರೆ () ಸಾಮಾನ್ಯವಾಗಿ ಅಚ್ಚುಮೆಚ್ಚು. ಹೀಗಾಗಿ ಒಡವೆ ಖರೀದಿ ನಡೆಯುತ್ತಿರುತ್ತದೆ. ನೀವೂ ಸಹ ಚಿನ್ನ (), ಬೆಳ್ಳಿ () ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ () ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ಬೆಂಗಳೂರು ಸೇರಿ ದೇಶಾದ್ಯಂತ ಬಂಗಾರದ ದರದಲ್ಲಿ ಏರಿಕೆಯಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಸಹ ಜಾಸ್ತಿಯಾಗಿದೆ. ಇಂದಿನ ಬೆಲೆ ವಿವರ ಹೀಗಿದೆ ನೋಡಿ.. ಇದನ್ನು ಓದಿ:, : ಇಂದು ನಿಮ್ಮ ಊರಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ ನೋಡಿ..ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,71524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,143 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,72024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,144 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,15024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,430 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,71,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,14,300 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,150 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಜಾಸ್ತಿಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 47,450, ರೂ. 47,100, ರೂ. 47,100 ಇದ್ದು, ನಿನ್ನೆಯ ದರಕ್ಕಿಂತ ಹೆಚ್ಚಾಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಗುರುವಾರ 47,250 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಹೆಚ್ಚಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರ ಹೆಚ್ಚಾಗಿದ್ದು, ಅದೇ ರೀತಿ ಬೆಳ್ಳಿ ದರದಲ್ಲಿ ಜಾಸ್ತಿಯಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 583, ರೂ. 5,830 ಹಾಗೂ ರೂ. 58,300 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 63,500 ಆಗಿದ್ದರೆ, ಮುಂಬೈನಲ್ಲಿ ರೂ. 58,300 ಹಾಗೂ ಕೋಲ್ಕತ್ತದಲ್ಲಿ ಸಹ ರೂ.58,300 ಬೆಲೆ ಇದೆ. ಹಾಗೆ, ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 58,300 ಆಗಿದ್ದು, ನಿನ್ನೆಗಿಂತ ದರ ಹೆಚ್ಚಾಗಿದೆ.