: ಬಲಿಪಾಡ್ಯಮಿ ಹಬ್ಬದ ದಿನ ನಿಮ್ಮ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ನೋಡಿ.. ನೀವು ದೀಪಾವಳಿ ಹಬ್ಬಕ್ಕೆ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಯಾವ್ಯಾವ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಬಗ್ಗೆ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 26th 2022:ದೀಪಾವಳಿ ಹಬ್ಬದ ಸಮಯದಲ್ಲಿ ಚಿನ್ನ ಕೊಳ್ಳುವವರ ಸಂಖ್ಯೆ ಸಾಮಾನ್ಯವಾಗಿ ಹೆಚ್ಚಿರುತ್ತದೆ. ಹಾಗೆ, ಈ ವ‍ರ್ಷ ಸಹ ಧನ್ತೇರಸ್‌ ಹಾಗೂ ಇತರೆ ದಿನದಲ್ಲೂ ಚಿನ್ನ, ಬೆಳ್ಳಿಯ ವ್ಯಾಪಾರ ಭರ್ಜರಿಯಾಗೇ ನಡೆದಿದೆ. ದೀಪಾವಳಿ ಹಬ್ಬದ ವೇಳೆ ನೀವೂ ಸಹ ಚಿನ್ನ (), ಬೆಳ್ಳಿ () ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ () ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ಬೆಂಗಳೂರು ಸೇರಿ ದೇಶಾದ್ಯಂತ ಬಂಗಾರದ ದರದಲ್ಲಿ ಏರಿಕೆಯಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಸಹ ಜಾಸ್ತಿಯಾಗಿದೆ. ಇಂದಿನ ಬೆಲೆ ವಿವರ ಹೀಗಿದೆ ನೋಡಿ.. ಇದನ್ನು ಓದಿ:, : ಬಲಿಪಾಡ್ಯಮಿಯ ದಿನ ನಿಮ್ಮ ಊರಲ್ಲಿ ಪಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ ನೋಡಿ..ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,70524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,133 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,64024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,064 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,05024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,330 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,70,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,13,300 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,050 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಹೆಚ್ಚಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 47,400, ರೂ. 47,000, ರೂ. 47,000 ಇದ್ದು, ನಿನ್ನೆಯ ದರಕ್ಕಿಂತ ಜಾಸ್ತಿಯಾಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಬುಧವಾರ 47,150 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಹೆಚ್ಚಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರ ಏರಿಕೆಯಾಗಿದ್ದು, ಅದೇ ರೀತಿ ಬೆಳ್ಳಿ ದರದಲ್ಲಿ ಹೆಚ್ಚಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 581, ರೂ. 5,810 ಹಾಗೂ ರೂ. 58,100 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 64,000 ಆಗಿದ್ದರೆ, ಮುಂಬೈನಲ್ಲಿ ರೂ. 58,100 ಹಾಗೂ ಕೋಲ್ಕತ್ತದಲ್ಲಿ ಸಹ ರೂ.58,100 ಬೆಲೆ ಇದೆ. ಹಾಗೆ, ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ದೀಪಾವಳಿ ಹಬ್ಬವಾದ ಇಂದಿನ ಬೆಳ್ಳಿ ದರ ರೂ. 58,100 ಆಗಿದ್ದು, ನಿನ್ನೆಗಿಂತ ದರ ಹೆಚ್ಚಾಗಿದೆ.