: ಸಮಯದಲ್ಲಿ ಚಿನ್ನ ಖರೀದಿಸ್ಬೇಕಾ..? ಹಾಗಾದ್ರೆ, ಇಂದೇ ಹೋಗಿ.. ನೀವು ದೀಪಾವಳಿ ಹಬ್ಬಕ್ಕೆ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಯಾವ್ಯಾವ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಬಗ್ಗೆ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 25th 2022:ದೀಪಾವಳಿ ಹಬ್ಬದ ಸಮಯದಲ್ಲಿ ಚಿನ್ನ ಕೊಳ್ಳುವವರ ಸಂಖ್ಯೆ ಸಾಮಾನ್ಯವಾಗಿ ಹೆಚ್ಚಿರುತ್ತದೆ. ಹಾಗೆ, ಈ ವ‍ರ್ಷ ಸಹ ಧನ್ತೇರಸ್‌ ಹಾಗೂ ಇತರೆ ದಿನದಲ್ಲೂ ಚಿನ್ನ, ಬೆಳ್ಳಿಯ ವ್ಯಾಪಾರ ಭರ್ಜರಿಯಾಗೇ ನಡೆದಿದೆ. ಇನ್ನೂ, ದೀಪಾವಳಿ ಹಬ್ಬ ನಡೆಯುತ್ತಿರುವುದರಿಂದ ನೀವೂ ಸಹ ಚಿನ್ನ (), ಬೆಳ್ಳಿ () ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ದೇಶದಲ್ಲಿ ಜನಸಂಖ್ಯೆ ಹಾಗೂ ಶುಭ ಸಮಾರಂಭಗಳ ಸಂಖ್ಯೆ ಸಾಮಾನ್ಯವಾಗಿ ಹೆಚ್ಚೇ ಇದೆ. ಇದರಿಂದ ಆಭರಣಗಳ ಖರೀದಿ, ವಹಿವಾಟು ಹೆಚ್ಚಿರುತ್ತದೆ. ಹಾಗೂ, ಮಹಿಳೆಯರಿಗೆ ಆಭರಣವೆಂದರೆ () ಸಾಮಾನ್ಯವಾಗಿ ಅಚ್ಚುಮೆಚ್ಚು. ಇಂದು ಬೆಂಗಳೂರಿನಲ್ಲಿ () ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ಬೆಂಗಳೂರು ಸೇರಿ ದೇಶಾದ್ಯಂತ ಬಂಗಾರದ ದರದಲ್ಲಿ ಇಳಿಕೆಯಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯಲ್ಲಿ ಸಹ ಬೆಂಗಳೂರಿನಲ್ಲಿ ಇಳಿಕೆಯಾಗಿದೆ. ಇಂದಿನ ಬೆಲೆ ವಿವರ ಹೀಗಿದೆ ನೋಡಿ.. ಇದನ್ನು ಓದಿ:, : ಉತ್ತರ ಕನ್ನಡದಲ್ಲಿ ಏರಿಕೆ, ಚಿಕ್ಕಮಗಳೂರಿನಲ್ಲಿ ಇಳಿಕೆಯಾದ ಪೆಟ್ರೋಲ್‌, ಡೀಸೆಲ್‌ ಬೆಲೆಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,69024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,116 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,52024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,928 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,90024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,160 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,69,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,11,600 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,900 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಇಳಿಕೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 47,400, ರೂ. 46,850, ರೂ. 46,850 ಇದ್ದು, ನಿನ್ನೆಯ ದರಕ್ಕಿಂತ ಕಡಿಮೆಯಾಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಮಂಗಳವಾರ 47,050 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಇಳಿಕೆಯಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಏರಿಕೆಯಾಗಿದೆ, ಆದರೆ ಬೆಂಗಳೂರಿನಲ್ಲಿ ಬೆಳ್ಳಿ ದರ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರ ಇಳಿಕೆಯಾಗಿದ್ದು, ಅದೇ ರೀತಿ ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ಆದರೆ, ದೇಶದ ಹಲವೆಡೆ ಬೆಳ್ಳಿ ದರದಲ್ಲಿ ಏರಿಕೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 580, ರೂ. 5,800 ಹಾಗೂ ರೂ. 58,000 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 63,500 ಆಗಿದ್ದರೆ, ಮುಂಬೈನಲ್ಲಿ ರೂ. 58,000 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 58,000 ಬೆಲೆ ಇದೆ. ಹಾಗೆ, ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ದೀಪಾವಳಿ ಹಬ್ಬವಾದ ಇಂದಿನ ಬೆಳ್ಳಿ ದರ ರೂ. 58,000 ಆಗಿದ್ದು, ನಿನ್ನೆಗಿಂತ ದರ ಹೆಚ್ಚಾಗಿದೆ.