: ನರಕ ಚತುದರ್ಶಿಯ ದಿನ ನಿಮ್ಮ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಹೇಗಿದೆ ನೋಡಿ.. ನೀವು ದೀಪಾವಳಿ ಹಬ್ಬಕ್ಕೆ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಯಾವ್ಯಾವ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಬಗ್ಗೆ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 24th 2022:ದೇಶದಲ್ಲಿ ಜನಸಂಖ್ಯೆ ಹಾಗೂ ಶುಭ ಸಮಾರಂಭಗಳ ಸಂಖ್ಯೆ ಸಾಮಾನ್ಯವಾಗಿ ಹೆಚ್ಚೇ ಇದೆ. ಇದರಿಂದ ಆಭರಣಗಳ ಖರೀದಿ, ವಹಿವಾಟು ಹೆಚ್ಚಿರುತ್ತದೆ. ಹಾಗೂ, ಮಹಿಳೆಯರಿಗೆ ಆಭರಣವೆಂದರೆ () ಸಾಮಾನ್ಯವಾಗಿ ಅಚ್ಚುಮೆಚ್ಚು. ನರಕ ಚತುದರ್ಶಿ ಹಬ್ಬವಾದ ಇಂದು ಬೆಂಗಳೂರಿನಲ್ಲಿ () ಚಿನ್ನ(), ಬೆಳ್ಳಿ () ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ಬೆಂಗಳೂರು ಸೇರಿ ದೇಶಾದ್ಯಂತ ಬಂಗಾರದ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇನ್ನೊಂದೆಡೆ, ಬೆಳ್ಳಿ ಬೆಲೆಯಲ್ಲಿ ಸಹ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದಿನ ಬೆಲೆ ವಿವರ ಹೀಗಿದೆ ನೋಡಿ.. ಇದನ್ನು ಓದಿ:, : ನರಕ ಚತುದರ್ಶಿಯ ದಿನ ನಿಮ್ಮ ಊರಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,70624 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,134 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,64824 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,072 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,06024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,340 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,70,60024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,13,400 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,060 ರೂ. ಆಗಿದ್ದು, ನಿನ್ನೆ ಸಹ ಇಷ್ಟೇ ಬೆಲೆ ಇತ್ತು. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 47,410, ರೂ. 47,010, ರೂ. 47,010 ಇದ್ದು, ನಿನ್ನೆಯ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ನರಕ ಚತುದರ್ಶಿಯ ದಿನ ಅಂದರೆ ಸೋಮವಾರ 47,150 ರೂ. ಆಗಿದ್ದು, ನಿನ್ನೆ ಸಹ ಇಷ್ಟೇ ಬೆಲೆ ಇತ್ತು.. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಅದೇ ರೀತಿ ಬೆಂಗಳೂರು ಸೇರಿ ದೇಶಾದ್ಯಂತ ಬೆಳ್ಳಿ ಬೆಲೆಯಲ್ಲೂ ಯಾವುದೇ ಬದಲಾವಣೆ ಆಗಿಲ್ಲ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 632, ರೂ. 6,320 ಹಾಗೂ ರೂ. 63,200 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 63,200 ಆಗಿದ್ದರೆ, ಮುಂಬೈನಲ್ಲಿ ರೂ. 57,700 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 57,700 ಬೆಲೆ ಇದೆ. ಹಾಗೆ, ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ದೀಪಾವಳಿ ಹಬ್ಬವಾದ ಇಂದಿನ ಬೆಳ್ಳಿ ದರ ರೂ. 57,700 ಆಗಿದ್ದು, ನಿನ್ನೆ ಸಹ ಇಷ್ಟೇ ದರವಿತ್ತು.