: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್‌: ದೀಪಾವಳಿಗೂ ಮುನ್ನ ಗಗನಕ್ಕೇರಿದ ಬಂಗಾರ..! ನೀವು ದೀಪಾವಳಿ ಹಬ್ಬಕ್ಕೆ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಯಾವ್ಯಾವ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಬಗ್ಗೆ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 23rd 2022:ಕೆಲ ದಿನಗಳಿಂದ ಚಿನ್ನ (), ಬೆಳ್ಳಿ () ದರದಲ್ಲಿ ಭಾರಿ ವ್ಯತ್ಯಾಸವಾಗುತ್ತಿದೆ. ಕೆಲ ದಿನಗಳಿಂದ ಬೆಲೆ ಏರಿಕೆ - ಇಳಿಕೆಯಾಗುತ್ತಿದ್ದು, ಇಂದು ಮತ್ತೆ ದೇಶಾದ್ಯಂತ ಚಿನ್ನದ ದರದಲ್ಲಿ ಬೆಲೆ ಏರಿಕೆಯಾಗಿದೆ. ದೇಶದಲ್ಲಿ ಜನಸಂಖ್ಯೆ ಹಾಗೂ ಶುಭ ಸಮಾರಂಭಗಳ ಸಂಖ್ಯೆ ಸಾಮಾನ್ಯವಾಗಿ ಹೆಚ್ಚೇ ಇದೆ. ಇದರಿಂದ ಆಭರಣಗಳ ಖರೀದಿ, ವಹಿವಾಟು ಹೆಚ್ಚಿರುತ್ತದೆ. ಹಾಗೂ, ಮಹಿಳೆಯರಿಗೆ ಆಭರಣವೆಂದರೆ () ಅಚ್ಚುಮೆಚ್ಚು.ಇನ್ನು, ಇಂದು ಬೆಂಗಳೂರಿನಲ್ಲಿ () ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ಬೆಂಗಳೂರು ಸೇರಿ ದೇಶಾದ್ಯಂತ ಬಂಗಾರದ ದರದಲ್ಲಿ ಹೆಚ್ಚಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದಿನ ಬೆಲೆ ವಿವರ ಹೀಗಿದೆ ನೋಡಿ.. ಇದನ್ನು ಓದಿ:, : ಭಾನುವಾರ ನಿಮ್ಮ ಜಿಲ್ಲೆ, ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,70624 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,134 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,64824 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,072 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,06024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,340 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,70,60024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,13,400 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,060 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಹೆಚ್ಚಾಗಿದೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,410, ರೂ. 47,010, ರೂ. 47,010 ಇದ್ದು, ನಿನ್ನೆಯ ದರಕ್ಕಿಂತ ಹೆಚ್ಚಾಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಭಾನುವಾರ 47,150 ರೂ. ಆಗಿದ್ದು, ಬೆಲೆ ಗಗನಕ್ಕೇರಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರ ಜಾಸ್ತಿಯಾಗಿದ್ದು, ಆದರೆ ಬೆಂಗಳೂರು ಸೇರಿ ದೇಶಾದ್ಯಂತ ಬೆಳ್ಳಿ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಹಲವೆಡೆ ಬೆಳ್ಳಿ ಬೆಲೆ ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 632, ರೂ. 6,320 ಹಾಗೂ ರೂ. 63,200 ಗಳಾಗಿವೆ. ಇನ್ನು, ಮೆಟ್ರೋ ಪಾಲಿಟನ್‌ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 63,200 ಆಗಿದ್ದರೆ, ಮುಂಬೈನಲ್ಲಿ ರೂ. 57,700 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 57,700 ಬೆಲೆ ಇದೆ. ಹಾಗೆ, ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 57,700 ಆಗಿದ್ದು, ಯಾವುದೇ ಬದಲಾವಣೆಯಾಗಿಲ್ಲ.