: ಚಿನ್ನ, ಬೆಳ್ಳಿ ಖರೀದಿಸ್ಬೇಕಾ..? ಹಾಗಾದ್ರೆ ಇದೇ ಬೆಸ್ಟ್‌ ಟೈಂ..! ನೀವು ಇಂದು ಚಿನ್ನ, ಬೆಳ್ಳಿ ಆಭರಣ ಖರೀದಿ ಮಾಡುತ್ತೀರಾ. ಯಾವ್ಯಾವ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 16th 2022:ಮಹಿಳೆಯರಿಗೆ ಆಭರಣವೆಂದರೆ () ಅಚ್ಚುಮೆಚ್ಚು. ಚಿನ್ನ, ಬೆಳ್ಳಿ, ವಜ್ರ, ಪ್ಲಾಟಿನಂ ಮುಂತಾದ ಆಭರಣಗಳ ಬೆಲೆ ಇಳಿಯಾದರಂತೂ ಮಹಿಳೆಯರ ಮೊಗದಲ್ಲಿ ನಗು ಅರಳುತ್ತದೆ. ಇನ್ನು, ದೇಶದಲ್ಲಿ ಜನಸಂಖ್ಯೆ ಹೆಚ್ಚಿರುವಂತೆ ಆಭರಣ ಪ್ರಿಯರ ಸಂಖ್ಯೆ ಹಾಗೂ ಶುಭ ಸಮಾರಂಭಗಳ ಸಂಖ್ಯೆ ಸಾಮಾನ್ಯವಾಗಿ ಹೆಚ್ಚೇ ಇದೆ. ಇದರಿಂದ ಭಾರತದಲ್ಲಿ ಆಭರಣಗಳ ಖರೀದಿ, ವಹಿವಾಟು ಹೆಚ್ಚಿರುತ್ತದೆ. ಇತ್ತೀಚೆಗೆ ಕೆಲ ದಿನಗಳಿಂದ ಬಂಗಾರ () , ಬೆಳ್ಳಿ () ದರದಲ್ಲಿ ತೀವ್ರ ವ್ಯತ್ಯಾಸವಾಗುತ್ತಿದೆ. ಹಾಗಾದ್ರೆ, ಇಂದು ಬೆಂಗಳೂರಿನಲ್ಲಿ () ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ನೋಡೋಣ ಬನ್ನಿ.. ಇಂದು ಬೆಂಗಳೂರು ಸೇರಿ ದೇಶಾದ್ಯಂತ ಬಂಗಾರದ ದರದಲ್ಲಿ ಕಡಿಮೆಯಾಗಿದೆ. ಅದೇ ರೀತಿ, ಬೆಳ್ಳಿ ಬೆಲೆಯಲ್ಲಿ ಸಹ ದೇಶಾದ್ಯಂತ ಅಗ್ಗವಾಗಿದೆ. ಇಂದಿನ ಬೆಲೆ ವಿವರ ಹೀಗಿದೆ ನೋಡಿ.. ಇದನ್ನು ಓದಿ:, : ಉತ್ತರ ಕನ್ನಡದಲ್ಲಿ ಇಳಿಕೆ, ಚಿಕ್ಕಮಗಳೂರಲ್ಲಿ ಹೆಚ್ಚಾದ ಪೆಟ್ರೋಲ್‌, ಡೀಸೆಲ್‌ ಬೆಲೆ ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,62524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,045 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,360 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,25024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,450 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,62,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,04,500 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,250 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಇಳಿಕೆಯಾಗಿದೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 46,900, ರೂ. 46,200, ರೂ. 46,200 ಇದ್ದು, ನಿನ್ನೆಯ ದರಕ್ಕಿಂತ ಕಡಿಮೆಯಾಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಭಾನುವಾರ 46,350 ರೂ. ಆಗಿದ್ದು, ಬೆಲೆ ಅಗ್ಗವಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಮತ್ತಷ್ಟು ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರ ಅಗ್ಗವಾಗಿದ್ದು, ಅದೇ ರೀತಿ ದೇಶದಲ್ಲೆಡೆ ಬೆಳ್ಳಿ ಬೆಲೆ ಇಳಿಕೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 553, ರೂ. 5,530 ಹಾಗೂ ರೂ. 55,300 ಗಳಾಗಿವೆ. ಇನ್ನು, ಮೆಟ್ರೋ ಪಾಲಿಟನ್‌ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 60,500 ಆಗಿದ್ದರೆ, ಮುಂಬೈನಲ್ಲಿ ರೂ. 55,300 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 55,300 ಬೆಲೆ ಇದೆ. ಹಾಗೆ, ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 55,300 ಆಗಿದೆ.