: ಬೆಂಗಳೂರಲ್ಲಿ ಹೆಚ್ಚಾದ ಚಿನ್ನ,ಬೆಳ್ಳಿ ದರ ನೀವು ಇಂದು ಚಿನ್ನ, ಬೆಳ್ಳಿ ಆಭರಣ ಖರೀದಿ ಮಾಡುತ್ತೀರಾ. ಯಾವ್ಯಾವ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಬಗ್ಗೆ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 19th 2022:ಕೆಲ ದಿನಗಳಿಂದ ಚಿನ್ನ (), ಬೆಳ್ಳಿ () ದರದಲ್ಲಿ ಭಾರಿ ವ್ಯತ್ಯಾಸವಾಗುತ್ತಿದೆ. ಕೆಲ ದಿನಗಳಿಂದ ಬೆಲೆ ಏರಿಕೆ - ಇಳಿಕೆಯಾಗುತ್ತಿದ್ದು, ಇಂದು ಮತ್ತೆ ರಾಜ್ಯ ರಾಜಧಾನಿಯಲ್ಲಿ ಬೆಲೆ ಎರಿಕೆಯಾಗಿದೆ. ದೇಶದಲ್ಲಿ ಜನಸಂಖ್ಯೆ ಹಾಗೂ ಶುಭ ಸಮಾರಂಭಗಳ ಸಂಖ್ಯೆ ಸಾಮಾನ್ಯವಾಗಿ ಹೆಚ್ಚೇ ಇದೆ. ಇದರಿಂದ ಆಭರಣಗಳ ಖರೀದಿ, ವಹಿವಾಟು ಹೆಚ್ಚಿರುತ್ತದೆ. ಹಾಗೂ, ಮಹಿಳೆಯರಿಗೆ ಆಭರಣವೆಂದರೆ () ಅಚ್ಚುಮೆಚ್ಚು.ಇನ್ನು, ಇಂದು ಬೆಂಗಳೂರಿನಲ್ಲಿ () ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಖೋಬೇಕಾ.. ಇಲ್ಲಿದೆ ವಿವರ.. ಇಂದು ಬೆಂಗಳೂರು ಸೇರಿ ದೇಶಾದ್ಯಂತ ಬಂಗಾರದ ದರದಲ್ಲಿ ಹೆಚ್ಚಾಗಿದೆ. ಅದೇ ರೀತಿ, ಬೆಳ್ಳಿ ಬೆಲೆಯಲ್ಲಿ ಬೆಂಗಳೂರಲ್ಲಿ ದರ ಹೆಚ್ಚಾಗಿದ್ದು, ಆದರೆ ದೇಶದಲ್ಲಿ ಬೆಲೆ ಕಡಿಮೆಯಾಗಿದೆ. ಇಂದಿನ ಬೆಲೆ ವಿವರ ಹೀಗಿದೆ ನೋಡಿ.. ಇದನ್ನು ಓದಿ:, : ಬುಧವಾರ ನಿಮ್ಮ ಊರಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ ನೋಡಿಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,66024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,084 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,28024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,672 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,60024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,840 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,66,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,08,400 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,600 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಜಾಸ್ತಿಯಾಗಿದೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,000, ರೂ. 46,550, ರೂ. 46,550 ಇದ್ದು, ನಿನ್ನೆಯ ದರಕ್ಕಿಂತ ಹೆಚ್ಚಾಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಮಂಗಳವಾರ 46,700 ರೂ. ಆಗಿದ್ದು, ಬೆಲೆ ಹೆಚ್ಚಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಕಡಿಮೆಯಾಗಿದೆ. ಆದರೆ, ಬೆಂಗಳೂರಲ್ಲಿ ದರ ಹೆಚ್ಚಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರ ಜಾಸ್ತಿಯಾಗಿದ್ದು, ಆದರೆ ದೇಶದ ಹಲವೆಡೆ ಬೆಳ್ಳಿ ಬೆಲೆ ಕಡಿಮೆಯಾಗಿದ್ದರೂ ಬೆಂಗಳೂರಿನಲ್ಲಿ ದರ ಹೆಚ್ಚಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 615, ರೂ. 6,150 ಹಾಗೂ ರೂ. 61,500 ಗಳಾಗಿವೆ. ಇನ್ನು, ಮೆಟ್ರೋ ಪಾಲಿಟನ್‌ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 61,500 ಆಗಿದ್ದರೆ, ಮುಂಬೈನಲ್ಲಿ ರೂ. 56,400 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 56,400 ಬೆಲೆ ಇದೆ. ಹಾಗೆ, ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 56,400 ಆಗಿದೆ.