: ಆಭರಣ ಪ್ರಿಯರಿಗೆ ಗುಡ್ ನ್ಯೂಸ್‌; ದೇಶದಲ್ಲಿ ಇಳಿಕೆಯಾದ ಬಂಗಾರ, ಬೆಳ್ಳಿ ದರ ನೀವು ಇಂದು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡುತ್ತಿದ್ದೀರಾ. ಯಾವ್ಯಾವ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಬಗ್ಗೆ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 1st 2022:ಭಾರತದಲ್ಲಿ ಆಭರಣ () ಪ್ರಿಯರ ಸಂಖ್ಯೆ ಹಾಗೂ ಶುಭ ಸಮಾರಂಭಗಳ ಸಂಖ್ಯೆ ಹೆಚ್ಚೇ ಇರುತ್ತದೆ. ಈ ಹಿನ್ನೆಲೆ ಆಭರಣಗಳ ವಹಿವಾಟು ಸಹ ಹೆಚ್ಚಿರುತ್ತದೆ. ಪ್ರತಿನಿತ್ಯ ಬಂಗಾರ () , ಬೆಳ್ಳಿ () ದರದಲ್ಲಿ ಏರಿಕೆ, ಇಳಿಕೆಯಾಗುತ್ತಿರುತ್ತದೆ. ಹಾಗಾದ್ರೆ, ಇಂದು ಬೆಂಗಳೂರಿನಲ್ಲಿ () ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ನೋಡೋಣ ಬನ್ನಿ.. ಇಂದು ಬೆಂಗಳೂರಿನಲ್ಲಿ ಬಂಗಾರದ ದರದಲ್ಲಿ ಇಳಿಕೆಯಾಗಿದೆ. ಅದೇ ರೀತಿ, ಬೆಳ್ಳಿ ದರದಲ್ಲಿ ದೇಶದ ಹಲವೆಡೆ ಇಳಿಕೆಯಾಗಿದೆ; ಆದರೆ ಬೆಂಗಳೂರಿನಲ್ಲಿ ಬೆಳ್ಳಿಯ ದರ ಏರಿಕೆಯಾಗಿದೆ. ಇಂದಿನ ಬೆಲೆ ವಿವರ ಹೀಗಿದೆ ನೋಡಿ..ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,65524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,078 ಇದನ್ನು ಓದಿ:, : ಅಕ್ಟೋಬರ್ 1 ರಂದು ನಿಮ್ಮ ಊರಿನಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ ನೋಡಿ.. ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,24024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,624 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,55024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,780 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,65,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,07,800 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,550 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಇಳಿಕೆಯಾಗಿದೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 46,900, ರೂ. 46,500, ರೂ. 46,500 ಇದ್ದು, ನಿನ್ನೆಗಿಂತ ಬೆಲೆಯಲ್ಲಿ ಕಡಿಮೆಯಾಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಗುರುವಾರ 46,650 ರೂ. ಆಗಿದ್ದು, ನಿನ್ನೆಯ ದರಕ್ಕಿಂತಲೂ ಕಡಿಮೆಯಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಸಹ ಕಡಿಮೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರ ಇಳಿಕೆಯಾಗಿದ್ದು, ಬೆಳ್ಳಿ ದರದಲ್ಲಿ ಸಹ ದೇಶದ ಹಲವೆಡೆ ಕಡಿಮೆಯಾಗಿದೆ. ಆದರೆ, ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 620, ರೂ. 6,200 ಹಾಗೂ ರೂ. 62,000 ಗಳಾಗಿವೆ. ಇನ್ನು, ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 62,000 ಆಗಿದ್ದರೆ, ಮುಂಬೈನಲ್ಲಿ ರೂ. 56,900 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 56,900 ಬೆಲೆ ಇದೆ. ಹಾಗೆ, ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 56,900 ರೂ. ಆಗಿದೆ.