: ದೇಶದಲ್ಲಿಂದು ಹೆಚ್ಚಾದ ಬಂಗಾರದ ದರ; ನಿಮ್ಮ ನಗರಗಳಲ್ಲಿ ಬೆಲೆ ವಿವರ ಹೇಗಿದೆ ನೋಡಿ.. ನೀವು ಇಂದು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡುತ್ತಿದ್ದೀರಾ. ಯಾವ್ಯಾವ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಬಗ್ಗೆ ಗೊಮದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 25th 2022:ಶುಭ ಸಮಾರಂಭಗಳು, ಮನೆಯಲ್ಲಿ ಹಬ್ಬ - ಹರಿದಿನ ಮುಂತಾದ ಸಂಭ್ರಮಗಳಿಗೆ ಆಭರಣ () ಧರಿಸುವುದು ಸಾಮಾನ್ಯ. ಭಾರತದಲ್ಲಂತೂ ಆಭರಣ ಪ್ರಿಯರ ಸಂಖ್ಯೆ ಹಾಗೂ ಶುಭ ಸಮಾರಂಭಗಳ ಸಂಖ್ಯೆ ಹೆಚ್ಚೇ ಇರುತ್ತದೆ. ಈ ಹಿನ್ನೆಲೆ ಆಭರಣಗಳ ವಹಿವಾಟು ಸಹ ಹೆಚ್ಚಿರುತ್ತದೆ. ಪ್ರತಿನಿತ್ಯ ಬಂಗಾರ () , ಬೆಳ್ಳಿ () ದರ ಏರಿಕೆಯಾಗುತ್ತದೋ, ಇಳಿಕೆಯಾಗುತ್ತದೋ ಎಂಬುದನ್ನು ನೋಡುವ ಕುತೂಹಲ ಹಲವರಿಗೆ ಇರುತ್ತದೆ. ಅಲ್ಲದೆ, ನೀವು ಇಂದು ಬಂಗಾರ, ಬೆಳ್ಳಿ ಆಭರಣಗಳನ್ನು ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ..? ಹಾಗಾದ್ರೆ, ಇಂದು ಬೆಂಗಳೂರಿನಲ್ಲಿ () ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ನೋಡೋಣ ಬನ್ನಿ.. ಇಂದು ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ 22 ಕ್ಯಾರಟ್‌ ಬಂಗಾರದ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಆದರೆ, ಬೆಂಗಳೂರು ಹೊರತುಪಡಿಸಿ ದೇಶದ ಹಲವು ನಗರಗಳಲ್ಲಿ 24 ಕ್ಯಾರಟ್‌ ಚಿನ್ನದ ದರದಲ್ಲಿ ಏರಿಕೆಯಾಗಿದೆ. ಇಂದಿನ ಬೆಲೆ ವಿವರ ಹೀಗಿದೆ..ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,60524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,024 ಇದನ್ನು ಓದಿ:, : ಹಲವು ತಿಂಗಳುಗಳ ಬಳಿಕ ಬೆಂಗಳೂರಲ್ಲಿ ಹೆಚ್ಚಾದ ಪೆಟ್ರೋಲ್‌, ಡೀಸೆಲ್‌ ದರ... : ://../-/-2 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 36,84024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,192 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,05024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,240 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,60,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,02,400 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,050 ರೂ. ಇದ್ದು, ನಿನ್ನೆಯ ದರದಷ್ಟೇ ಇದೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 46,500, ರೂ. 46,000, ರೂ. 46,000 ಇದ್ದು, ಯಥಾಸ್ಥಿತಿ ಕಾಯ್ದುಕೊಂಡಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಗುರುವಾರ 46,150 ರೂ. ಆಗಿದ್ದು, ನಿನ್ನೆಯ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅದರೆ, 24 ಕ್ಯಾರಟ್‌ ಬಂಗಾರದ ದರ ಚೆನ್ನೈನಲ್ಲಿ 50,730 ರೂ. ಇದ್ದರೆ, ಬೆಂಗಳೂರಿನಲ್ಲಿ 50,240 ರೂ. ಇದೆ. ಇನ್ನು, ಮುಂಬೈ, ಕೋಲ್ಕತ್ತದಲ್ಲಿ10 ಗ್ರಾಂ ಚಿನ್ನದ ದರ ತಲಾ 52 ಸಾವಿರ ರೂ. ಗೆ ಏರಿಕೆಯಾಗಿದೆ. ದೆಹಲಿಯಲ್ಲಿ 10 ಗ್ರಾಂ 24 ಕ್ಯಾರಟ್‌ ಬಂಗಾರದ ದರ 50,350 ರೂ. ಇದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದು,, ಅದರಂತೆ ಬೆಳ್ಳಿ ದರದಲ್ಲೂ ಬದಲಾವಣೆಯಾಗಿಲ್ಲ. ಇದೇ ರೀತಿ, ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಬೆಳ್ಳಿ ದರ ಸಹ ನಿನ್ನೆಯಷ್ಟೇ ಇದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 615, ರೂ. 6,150 ಹಾಗೂ ರೂ. 61,500 ಗಳಾಗಿವೆ. ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 61,500 ಆಗಿದ್ದರೆ, ಮುಂಬೈನಲ್ಲಿ ರೂ. 56,300 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 56,300 ಬೆಲೆ ಇದೆ. ಹಾಗೆ, ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 56,300 ರೂ. ಇದೆ.