: ದೇಶದಲ್ಲಿ ಇಳಿಕೆಯಾದ ಬೆಳ್ಳಿ ದರ; ನಿಮ್ಮ ನಗರಗಳಲ್ಲಿ ಬಂಗಾರ, ಬೆಳ್ಳಿ ಬೆಲೆ ವಿವರ ಹೀಗಿದೆ.. ನೀವು ಇಂದು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡುತ್ತಿದ್ದೀರಾ. ಚಿನ್ನ, ಬೆಳ್ಳಿಯ ದರ ಜಾಸ್ತಿಯಾಗಿದ್ಯೋ, ಕಡಿಮೆಯಾಗಿದ್ಯೋ ಅನ್ನೋ ಬಗ್ಗೆ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 11th, 2022: ದೇಶದಲ್ಲಿ ಮದುವೆ, ಗೃಹ ಪ್ರವೇಶ ಮುಂತಾದ ಶುಭ ಸಮಾರಂಭಗಳು ಸಾಮಾನ್ಯವಾಗಿ ಹೆಚ್ಚು ನಡೆಯುತ್ತಲೇ ಇರುತ್ತದೆ. ಈ ಹಿನ್ನೆಲೆ ಆಭರಣಗಳ ವಹಿವಾಟು ಸಹ ಹೆಚ್ಚಿರುತ್ತದೆ. ಈ ಹಿನ್ನೆಲೆ ದಿನನಿತ್ಯದ ಬಂಗಾರ (), ಬೆಳ್ಳಿ () ದರ ಎಷ್ಟಿರುತ್ತದೆ ಅನ್ನೋದರ ಮೇಲೆ ಹಲವರು ಕಣ್ಣಿಟ್ಟಿರುತ್ತಾರೆ. ಕೆಲ ದಿನಗಳಿಂದ ಚಿನ್ನ, ಬೆಳ್ಳಿ ದರ ಏರಿಕೆ - ಇಳಿಕೆಯಾಗುತ್ತಲೇ ಇದೆ. ಇಂದು ಬಂಗಾರದ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದು, ದೇಶದಲ್ಲಿ ಬೆಳ್ಳಿ ಬೆಲೆ ಇಳಿಕೆಯಾಗಿದೆ. ಈ ಮಧ್ಯೆ, ನೀವು ಇಂದು ಬಂಗಾರ, ಬೆಳ್ಳಿ ಆಭರಣಗಳನ್ನು () ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ..? ಹಾಗಾದ್ರೆ, ಇಂದು ಬೆಂಗಳೂರಿನಲ್ಲಿ () ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ನೋಡೋಣ ಬನ್ನಿ.. ಇಂದು ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ದರದಲ್ಲಿ ವ್ಯತ್ಯಾಸವಾಗಿಲ್ಲ. ಇಂದಿನ ಬೆಲೆ ವಿವರ ಹೀಗಿದೆ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,68024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,105 , : ಉತ್ತರ ಕನ್ನಡದಲ್ಲಿ 1.93 ರೂ. ಏರಿಕೆಯಾದ ಪೆಟ್ರೋಲ್‌ ದರ ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,44024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,840 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,80024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,050 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,68,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,10,500 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,800 ಇದೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,400, ರೂ. 46,750, ರೂ. 46,750 ಇದ್ದು, ನಿನ್ನೆಯ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಅದೇ ರೀತಿ, ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲಿ ಸೋಮವಾರ ಚಿನ್ನದ ಬೆಲೆ 46,900 ರೂ. ಆಗಿದ್ದು, ನಿನ್ನೆ ಸಹ ಇಷ್ಟೇ ದರವಿತ್ತು.. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಕಡಿಮೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬೆಳ್ಳಿ ದರದಲ್ಲಿ ಇಳಿಕೆಯಾಗಿದ್ದು, ಆದರೆ, ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಬೆಳ್ಳಿ ದರ ನಿನ್ನೆಯಷ್ಟೇ ಇದ್ದು, ಯಾವುದೇ ವ್ಯತ್ಯಾಸವಾಗಿಲ್ಲ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 604, ರೂ. 6,040 ಹಾಗೂ ರೂ. 60,400 ಗಳಾಗಿವೆ. ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 60,400 ಆಗಿದ್ದರೆ, ಮುಂಬೈನಲ್ಲಿ ರೂ. 55,000 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 55,000 ಬೆಲೆ ಇದೆ. ಹಾಗೆ, ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 55,000ಗೆ ಆಗಿದೆ.