: ಮತ್ತೆ ಗಗನಕ್ಕೇರಿದ ಬಂಗಾರ, ಬೆಳ್ಳಿ ದರ: ನಿಮ್ಮ ನಗರಗಳಲ್ಲಿ ಬೆಲೆ ವಿವರ ಹೀಗಿದೆ.. ಇಂದು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ನೀವು ಪ್ಲ್ಯಾನ್‌ ಮಾಡುತ್ತಿದ್ದೀರಾ. ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 6th, 2022: ಶ್ರಾವಣ ಮಾಸ ಮುಗಿದ ಬಳಿಕ ದೇಶದಲ್ಲಿ ಚಿನ್ನ (), ಬೆಳ್ಳಿ () ದರ ಇಳಿಕೆಯಾಗಿತ್ತು. ಆದರೆ, ಕಳೆದ ಕೆಲ ದಿನಗಳಿಂದ ಮತ್ತೆ ಬಂಗಾರ, ಬೆಳ್ಳಿ ದರ ಏರಿಕೆಯಾಗುತ್ತಿದೆ. ಕೆಲ ದಿನಗಳಿಂದ ಬಂಗಾರದ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದರೂ, ದರ ಮಾತ್ರ ಕಡಿಮೆಯಾಗುತ್ತಿಲ್ಲ. ಇಂದು ಮತ್ತೆ ಬಂಗಾರ, ಬೆಳ್ಳಿ ದರ ಏರಿಕೆಯಾಗಿದೆ. ಇನ್ನು, ನೀವು ಇಂದು ಬಂಗಾರ, ಬೆಳ್ಳಿ ಆಭರಣಗಳನ್ನು () ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ..? ಹಾಗಾದ್ರೆ, ಇಂದು ಬೆಂಗಳೂರಿನಲ್ಲಿ () ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ನೋಡೋಣ ಬನ್ನಿ.. ಇಂದು ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ದರದಲ್ಲಿ ವ್ಯತ್ಯಾಸವಾಗಿಲ್ಲ. ಇಂದಿನ ಬೆಲೆ ವಿವರ ಹೀಗಿದೆ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,69524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,120 , : ತುಮಕೂರಿನಲ್ಲಿ ಏರಿಕೆ, ದಕ್ಷಿಣ ಕನ್ನಡದಲ್ಲಿ ಇಳಿಕೆಯಾದ ಡೀಸೆಲ್‌ ದರ ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,56024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,960 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,95024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,200 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,69,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,12,000 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,950 ಕ್ಕೆ ಏರಿಕೆಯಾಗಿದೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,500, ರೂ. 46,900, ರೂ. 46,900 ಗೆ ಹೆಚ್ಚಾಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸೋಮವಾರ ಚಿನ್ನದ ಬೆಲೆ 47,050 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಮತ್ತೆ ಗಗನಕ್ಕೇರಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಮತ್ತೆ ಹೆಚ್ಚಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬೆಳ್ಳಿ ದರದಲ್ಲಿ ಏರಿಕೆ ಕಂಡಿದೆ. ಇದೇ ರೀತಿ, ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಸಹ ಬೆಳ್ಳಿ ದರದಲ್ಲಿ ಹೆಚ್ಚಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 590, ರೂ. 5,900 ಹಾಗೂ ರೂ. 59,000 ಗಳಾಗಿವೆ. ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 59,000 ಆಗಿದ್ದರೆ, ಮುಂಬೈನಲ್ಲಿ ರೂ. 53,900 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 53,900 ಬೆಲೆ ಇದೆ. ಹಾಗೆ, ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 53,900ಗೆ ಏರಿಕೆಯಾಗಿದೆ.