: ಭಾನುವಾರ ನಿಮ್ಮ ನಗರಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಹೇಗಿದೆ ನೋಡಿ.. ಇಂದು ಭಾನುವಾರ. ಈ ಹಿನ್ನೆಲೆ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡುತ್ತಿದ್ದೀರಾ. ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 4th, 2022:ದೇಶದಲ್ಲಿ ಕೆಲ ದಿನಗಳ ಹಿಂದೆ ಚಿನ್ನ, ಬೆಳ್ಳಿ ದರ ಕಡಿಮೆಯಾಗಿದ್ದ ಹಿನ್ನೆಲೆ ಆಭರಣ ಪ್ರಿಯರು ಸಂತಸ ಪಟ್ಟಿದ್ದರು. ಆದರೆ, ಶನಿವಾರ ಬಂಗಾರ, ಬೆಳ್ಳಿ ದರದಲ್ಲಿ ಏರಿಕೆಯಾಗಿತ್ತು. ಆದರೆ, ಇಂದು ಚಿನ್ನ, ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಈ ಹಿನ್ನೆಲೆ ಶ್ರಾವಣ ಮಾಸ ಮುಗಿದ ಬಳಿಕ ದರ ಇಳಿಕೆಯಾಗುತ್ತಿದ್ದಂತೆ, ಆಭರಣ ಬೆಲೆ ಮತ್ತಷ್ಟು ಇಳಿಕೆಯಾಗಬಹುದೆಂಬ ನಿರೀಕ್ಷೆಯಲ್ಲಿ ಇದ್ದವರಿಗೆ ಶಾಕ್‌ ಕಾದಿದೆ. ಶುಭ ಸಮಾರಂಭ ನಡೆಸುವವರು ಆಭರಣ ಖರೀದಿ ಮಾಡಲೇಬೇಕಾಗುತ್ತದೆ. ಅದೇ ರೀತಿ, ನೀವೂ ಸಹ, ಬಂಗಾರ, ಬೆಳ್ಳಿ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ..? ಹಾಗಾದ್ರೆ, ಇಂದು ಬೆಂಗಳೂರಿನಲ್ಲಿ () ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ಇಲ್ಲಿದೆ ವಿವರ.ಇಂದು ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ದರದಲ್ಲಿ ವ್ಯತ್ಯಾಸವಾಗಿಲ್ಲ, ಇಂದಿನ ಬೆಲೆ ವಿವರ ಹೀಗಿದೆ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,67024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,094 , : ಉಡುಪಿಯಲ್ಲಿ ಇಳಿಕೆಯಾದ ಪೆಟ್ರೋಲ್‌, ಡೀಸೆಲ್‌ ದರ: ನಿಮ್ಮ ನಗರಗಳಲ್ಲಿ ಹೇಗಿದೆ ನೋಡಿ.. ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,36024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,752 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,70024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,940 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,67,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,09,400 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,700 ಇದೆ. ಇನ್ನು, ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,220, ರೂ. 46,650, ರೂ. 46,650 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 46,800 ರೂ. ಆಗಿದ್ದು, ಬೆಲೆಯಲ್ಲಿ ಯಾವುದೇ ವ್ಯತ್ಯಸವಾಗಿಲ್ಲ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದಲ್ಲಿ ಬೆಳ್ಳಿ ದರದಲ್ಲಿ ಯಾವುದೇ ಏರಿಕೆ - ಇಳಿಕೆ ಕಂಡುಬಂದಿಲ್ಲ. ಅದೇ ರೀತಿ, ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಸಹ ಬೆಳ್ಳಿ ದರದಲ್ಲಿ ವ್ಯತ್ಯಾಸವಾಗಿಲ್ಲ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 582, ರೂ. 5,820 ಹಾಗೂ ರೂ. 58,200 ಗಳಾಗಿವೆ. ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 58,200 ಆಗಿದ್ದರೆ, ಮುಂಬೈನಲ್ಲಿ ರೂ. 52,500 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 52,500 ಬೆಲೆ ಇದೆ ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 52,500 ಇದೆ.