: ಆಭರಣ ಪ್ರಿಯರಿಗೆ ಶಾಕ್‌; ಗಗನಮುಖಿಯಾದ ಬಂಗಾರ, ಬೆಳ್ಳಿ ದರ ಪ್ರತಿದಿನ ಸಾಮಾನ್ಯವಾಗಿ ಬಂಗಾರ, ಬೆಳ್ಳಿ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ನೀವು ಆಭರಣ ಖರೀದಿಗೆ ಪ್ಲ್ಯಾನ್‌ ಮಾಡುತ್ತಿದ್ದೀರಾ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. ಇತ್ತೀಚೆಗೆ ಚಿನ್ನ(), ಬೆಳ್ಳಿ () ದರದಲ್ಲಿ ಭಾರಿ ವ್ಯತ್ಯಾಸವಾಗುತ್ತಿದೆ. ಇಂದು ಚಿನ್ನ, ಬೆಳ್ಳಿ ದರದಲ್ಲಿ ತೀವ್ರ ಏರಿಕೆಯಾಗಿದೆ. ಈ ಹಿನ್ನೆಲೆ ಶುಭ ಸಮಾರಂಭಗಳು ನಡೆಸುವವರು ಆಭರಣ ಖರೀದಿಸಲೇಬೇಕಾಗುತ್ತದೆ. ಈ ಹಿನ್ನೆಲೆ ಇವರ ಜೇಬಿಗೆ ಹೆಚ್ಚು ಹೊರೆಯಾಗುತ್ತದೆ. ಅದೇ ರೀತಿ, ನೀವೂ ಸಹ, ಬಂಗಾರ, ಬೆಳ್ಳಿ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ..? ಹಾಗಾದ್ರೆ, ಇಂದು ಬೆಂಗಳೂರಿನಲ್ಲಿ () ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ಇಲ್ಲಿದೆ ವಿವರ.ಇಂದು ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ದರದಲ್ಲಿ ಏರಿಕೆಯಾಗಿದ್ದು, ಬೆಲೆ ವಿವರ ಹೀಗಿದೆ.. ಇದನ್ನು ಓದಿ:, : ರಾಯಚೂರಿನಲ್ಲಿ ಏರಿಕೆ, ಉತ್ತರ ಕನ್ನಡದಲ್ಲಿ ಇಳಿಕೆಯಾದ ಪೆಟ್ರೋಲ್‌ ದರ ಒಂದು ಗ್ರಾಂ ಚಿನ್ನ (1GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,67024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,094 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,36024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,752 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,70024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,940 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,67,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,09,400 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,700 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,220, ರೂ. 46,650, ರೂ. 46,650 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 46,800 ರೂ. ಆಗಿದ್ದು, ನಿನ್ನೆಯ ದರಕ್ಕಿಂತ ಹೆಚ್ಚಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದಲ್ಲಿ ಬೆಳ್ಳಿ ದರ ನಿನ್ನೆಗಿಂತ ಹೆಚ್ಚಾಗಿದ್ದು. ಅದೇ ರೀತಿ, ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಸಹ ಬೆಳ್ಳಿ ದರದಲ್ಲಿ ಹೆಚ್ಚಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 582, ರೂ. 5,820 ಹಾಗೂ ರೂ. 58,200 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 58,200 ಆಗಿದ್ದರೆ, ಮುಂಬೈನಲ್ಲಿ ರೂ. 52,500 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 52,500 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 52,500 ಆಗಿದೆ.