: ದೇಶದಲ್ಲಿ ಹೆಚ್ಚಾದ ಬೆಳ್ಳಿ ದರ: ಚಿನ್ನದ ಬೆಲೆ ಹೀಗಿದೆ ನೋಡಿ.. ಇಂದು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡುತ್ತಿದ್ದೀರಾ. ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 5th, 2022:ಶ್ರಾವಣ ಮಾಸ ಮುಗಿದ ಬಳಿಕ ದೇಶದಲ್ಲಿ ಚಿನ್ನ, ಬೆಳ್ಳಿ ದರ ಇಳಿಕೆಯಾಗಿತ್ತು. ಆದರೆ, ಮತ್ತಷ್ಟು ಇಳಿಕೆಯ ನಿರೀಕ್ಷೆಯಲ್ಲಿದ್ದ ಆಭರಣ ಪ್ರಿಯರಿಗೆ ಶಾಕ್‌ ಕಾದಿದೆ. ಏಕೆಂದರೆ, ಕಳೆದ ಕೆಲ ದಿನಗಳಿಂದ ಬಂಗಾರದ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ, ಬೆಳ್ಳಿ ದರ ಮತ್ತಷ್ಟು ಹೆಚ್ಚಾಗಿದೆ. ಇನ್ನು, ನೀವು ಇಂದು ಬಂಗಾರ, ಬೆಳ್ಳಿ ಆಭರಣಗಳನ್ನು ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ..? ಹಾಗಾದ್ರೆ, ಇಂದು ಬೆಂಗಳೂರಿನಲ್ಲಿ () ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ನೋಡೋಣ ಬನ್ನಿ.. ಇಂದು ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ದರದಲ್ಲಿ ವ್ಯತ್ಯಾಸವಾಗಿಲ್ಲ. ಇಂದಿನ ಬೆಲೆ ವಿವರ ಹೀಗಿದೆ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,67024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,094 , : ಬೀದರ್‌ನಲ್ಲಿ ಇಳಿಕೆಯಾದ ಇಂಧನ ದರ: ನಿಮ್ಮ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ನೋಡಿ.. ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,36024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,752 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,70024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,940 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,67,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,09,400 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,700 ಆಗಿದೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,220, ರೂ. 46,650, ರೂ. 46,650 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸೋಮವಾರ ಚಿನ್ನದ ಬೆಲೆ 46,800 ರೂ. ಆಗಿದ್ದು, ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬೆಳ್ಳಿ ದರದಲ್ಲಿ ಏರಿಕೆ ಕಂಡಿದೆ. ಆದರೆ, ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ವ್ಯತ್ಯಾಸವಾಗಿಲ್ಲ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 582, ರೂ. 5,820 ಹಾಗೂ ರೂ. 58,200 ಗಳಾಗಿವೆ. ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 58,200 ಆಗಿದ್ದರೆ, ಮುಂಬೈನಲ್ಲಿ ರೂ. 53,220 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 53,220 ಬೆಲೆ ಇದೆ. ಹಾಗೆ, ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 53,220ಗೆ ಹೆಚ್ಚಾಗಿದೆ.